ಭಾರತದಲ್ಲಿ ದೈತ್ಯ ಲ್ಯಾಂಡ್ ಕ್ರೂಸರ್ ಬುಕಿಂಗ್ ನಿಲ್ಲಿಸಿದ ಟೊಯೊಟಾ: ಕಾರಣ?
ಟೊಯೋಟಾ ಕಳೆದ ವರ್ಷ ಭಾರತದಲ್ಲಿ ಹೊಸ-ಜನ್ ಲ್ಯಾಂಡ್ ಕ್ರೂಸರ್ ಅನ್ನು ಪರಿಚಯಿಸಿತು, ಇದರ ಬೆಲೆ ರೂ. 2.10 ಕೋಟಿ (ಎಕ್ಸ್ ಶೋ ರೂಂ). ಈ ವರ್ಷದ ಜನವರಿಯಲ್ಲಿ ದೇಶದಾದ್ಯಂತ ಪ್ರಮುಖ SUV ಯ ವಿತರಣೆಯನ್ನು ಪ್ರಾರಂಭಿಸಲಾಯಿತು. ಆದರೆ ಇದೀಗ ಕಂಪನಿಯು ಬುಕಿಂಗ್‌ಗಳನ್ನು ಸ್ಥಗಿತಗೊಳಿಸಿದೆ.
ಹೌದು. ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಭಾರತದಲ್ಲಿ ಲ್ಯಾಂಡ್ ಕ್ರೂಸರ್‌ನ ಬುಕಿಂಗ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ದೇಶದಲ್ಲಿ SUV ಗೆ ಹೆಚ್ಚಿನ ಬೇಡಿಕೆಯಿರುವ ಕಾರಣ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ. ಕಂಪನಿಯು ಬುಕಿಂಗ್ ಅನ್ನು ಯಾವಾಗ ಮರುಪ್ರಾರಂಭಿಸುತ್ತದೆ ಎಂದು ಹೇಳಿಲ್ಲ, ಆದರೂ ಪುನಾರಂಭಿಸಿದರೆ ಅಧಿಕೃತ ಪ್ರಕಟಣೆಯನ್ನು ಮಾಡಲಾಗುವುದು.

ದೆಹಲಿಯಲ್ಲಿ ನಡೆದ ಆಟೋ ಎಕ್ಸ್‌ಪೋ 2023 ರಲ್ಲೂ ಸಹ ಹೊಸ ಟೊಯೋಟಾ ಲ್ಯಾಂಡ್ ಕ್ರೂಸರ್ ಅನ್ನು ಪ್ರದರ್ಶಿಸಲಾಗಿತ್ತು. ಇದನ್ನು LC300 ಎಂದು ಸಹ ಕರೆಯಲಾಗುತ್ತದೆ. ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಬಿಡುಗಡೆ ಮಾಡಿದ ಪ್ರತಿಯೊಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆ ಹೆಚ್ಚಾಗಿ ಇದೆ. ಈ ಬಹುಬೇಡಿಕೆಯ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಗೆ ವೈಟಿಂಗ್ ಪಿರೇಡ್ ಕೆಲವು ದೇಶಗಳಲ್ಲಿ 4 ವರ್ಷಗಳವರೆಗೆ ಇದೆ.
ಆದರೆ, ಭಾರತದಲ್ಲಿ ಮಾತ್ರ ವಿತರಣೆಗಳು ಕೇವಲ ಒಂದು ವರ್ಷ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಹೊಸ LC300, ಅದರ ಹಿಂದಿನ LC200 ನಂತೆ, ಭಾರತದಲ್ಲಿ ಸಂಪೂರ್ಣವಾಗಿ ಆಮದು ಮಾಡಿಕೊಂಡ ಘಟಕವಾಗಿ ಮಾರಾಟವಾಗುತ್ತದೆ. ಇಂಡಿಯಾ-ಸ್ಪೆಕ್ ಟೊಯೋಟಾ ಲ್ಯಾಂಡ್ ಕ್ರೂಸರ್ 300 ಕೇವಲ 5 ಆಸನಗಳಲ್ಲಿ ಮಾತ್ರ ಲಭ್ಯವಿರುತ್ತದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳಾಗಿವೆ. ಇದರಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸತ್ತದೆ.
ಇನ್ನು ಭಾರತದಲ್ಲಿ ಕೇವಲ ಇದು 3.3-ಲೀಟರ್, V6 ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದ್ದು, 305bhp ಪವರ್ ಮತ್ತು 700Nm ಟಾರ್ಕ್ ಉತ್ಪಾದಿಸುತ್ತದೆ. ಈ ಮೋಟಾರ್ ಅನ್ನು 10-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ದೊಂದಿಗೆ ಜೋಡಿಸಲಾಗಿದೆ. ಇನ್ನು ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರ್ಯಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ.

ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಈ ಬ್ರ್ಯಾಂಡ್‌ನ ಹೊಸ ಪ್ರಮುಖ ಎಸ್‍ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ.
ಹೊಸ ಲ್ಯಾಂಡ್ ಕ್ರೂಸರ್ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಮ್ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿ ಬೆಟ್ಟ, ಗುಡ್ಡಗಳ ಜೊತೆಯಲ್ಲಿ ಮರಳಿನಲ್ಲಿ ತುಂಬಾ ಸಲೀಸಾಗಿ ನುಗ್ಗುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications