ಅತಿಹೆಚ್ಚು ಮೈಲೇಜ್ ನೀಡುವ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಸಿಎನ್‌ಜಿ ಲಾಂಚ್

ಪ್ರತಿಯೊಬ್ಬರು ಪೆಟ್ರೋಲ್ & ಡೀಸೆಲ್ ಚಾಲಿತ ವಾಹನಗಳಿಗಿಂತ ಹೆಚ್ಚು ಇಂಧನ ದಕ್ಷತೆ ಹೊಂದಿರುವ ಸಿಎನ್‌ಜಿ ಚಾಲಿತ ಕಾರುಗಳನ್ನು ಖರೀದಿಸಲು ಬಯಸುತ್ತಾರೆ. ಹಲವು ವಾಹನ ತಯಾರಕ ಕಂಪನಿಗಳು ಇಂತಹ ಕಾರುಗಳನ್ನು ಮಾರುಕಟ್ಟೆಯಲ್ಲಿ ಲಾಂಚ್ ಮಾಡುತ್ತಿರುತ್ತವೆ. ಇದೀಗ ಜಪಾನ್ ಕಂಪನಿ ಟೊಯೊಟಾ, ಭಾರತದಲ್ಲಿ ಅರ್ಬನ್ ಕ್ರೂಸರ್ ಹೈರೈಡರ್ ಸಿಎನ್‌ಜಿಯನ್ನು ಬಿಡುಗಡೆಗೊಳಿಸಿದೆ.

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಎರಡು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಎಸ್ ಹಾಗೂ ಜಿ. ಟೊಯೊಟಾ ಅರ್ಬನ್ 'ಎಸ್' ಸಿಎನ್‌ಜಿ ರೂಪಾಂತರವು ರೂ.13.23 ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ದೊರೆತರೆ, 'ಜಿ' ಸಿಎನ್‌ಜಿ ರೂಪಾಂತರವು ರೂ.15.29 ಲಕ್ಷ ದರವನ್ನು (ಎಕ್ಸ್ ಶೋರೂಂ, ಭಾರತ) ಹೊಂದಿದೆ. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಆವೃತ್ತಿಗೆ ಹೋಲಿಸಿದರೆ ರೂ.38,000 ದಿಂದ ರೂ.45,000 ಹೆಚ್ಚು ದುಬಾರಿಯಾಗಿದೆ.

ಹೊಸ ಅಧ್ಯಾಯ ಬರೆಯಲು ಸಿದ್ಧವಾಗಿವೆ ಮಾರುತಿ ಸುಜುಕಿ ಕಾರುಗಳು

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಎಂಜಿನ್ ಕಾರ್ಯಕ್ಷಮತೆಯ ಬಗ್ಗೆ ಹೇಳುವುದಾದರೆ, ಇದು ಮಾರುತಿ ಸುಜುಕಿಯ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಹೊಂದಿರುವ ರೀತಿಯಲ್ಲೇ ಕೆ15ಸಿ ಡ್ಯೂಯೆಲ್ ಜೆಟ್ ಡ್ಯೂಯೆಲ್ ವಿವಿಟಿ ಎಂಜಿನ್ ಹೊಂದಿದ್ದು, 5,500 rpmನಲ್ಲಿ 86.63 bhp ಗರಿಷ್ಠ ಪವರ್ ಹಾಗೂ 4,200 rpmನಲ್ಲಿ 121.5 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಇದನ್ನು ಗಮನಿಸಿದಾಗ ಉತ್ತಮ ಎಂಜಿನ್ ಕಾರ್ಯಕ್ಷಮತೆ ಹೊಂದಿದೆ ಎಂದು ಹೇಳಬಹುದು.

ಇಷ್ಟೇಅಲ್ಲದೆ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿಯು ಪೆಟ್ರೋಲ್ ಮೋಡ್ ನಲ್ಲಿ 99.2 bhp ಗರಿಷ್ಠ ಪವರ್ ಹಾಗೂ 136 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹೊಸ ಅರ್ಬನ್ ಕ್ರೂಸರ್ ಸಿಎನ್‌ಜಿ ಆವೃತ್ತಿಯು 5 - ಸ್ವೀಡ್ ಮ್ಯಾನುಯಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದ್ದು, ಇದರ ಎಂಜಿನ್ 26.6km/kg ಇಂಧನ ದಕ್ಷತೆಯನ್ನು ಹೊಂದಿದೆ. ಇದು ಹೊಸ ಖರೀದಿದಾರರನ್ನು ಈ ಕಾರಿನತ್ತ ಸೆಳೆಯಬಹುದು.

ಹೊಸ ಅಧ್ಯಾಯ ಬರೆಯಲು ಸಿದ್ಧವಾಗಿವೆ ಮಾರುತಿ ಸುಜುಕಿ ಕಾರುಗಳು

ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಸಿಎನ್‌ಜಿಯ ವೈಶಿಷ್ಟ್ಯಗಳ ಬಗ್ಗೆ ಮಾತನಾಡುವುದಾದರೆ, ಇದು ಫ್ರಂಟ್ ಎಲ್‌ಇಡಿ ಹೆಡ್‌ಲ್ಯಾಂಪ್ಸ್, 6 ಏರ್‌ಬ್ಯಾಗ್‌ಗಳು, 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಆಟೋ ಫೋಲ್ಡಿಂಗ್ ORVMಗಳು, ಆಟೋ ಡಿಮ್ಮಿಂಗ್ IRVM ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ನಂತಹ ಹತ್ತು ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ಹೇಳಬಹುದು.

ನೂತನ ಕಾರಿನ ಬಿಡುಗಡೆ ಕುರಿತು ಮಾತನಾಡಿರುವ ಮಾರಾಟ ವಿಭಾಗದ ಉಪಾಧ್ಯಕ್ಷ ಅತುಲ್ ಸೂದ್ ಅವರು, 'ಭಾರತದ ಮಾರುಕಟ್ಟೆಯಲ್ಲಿ ಇದು ದೊಡ್ಡ ಮೈಲಿಗಲ್ಲಾಗುವ ನಿರೀಕ್ಷೆಯಿದೆ. ಈ ಕಾರು ಗ್ರಾಹಕರನ್ನು ಖಂಡಿತ ಆಕರ್ಷಿಸಲಿದೆ ಎಂಬ ವಿಶ್ವಾಸವಿದ್ದು, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಸಿಎನ್‌ಜಿಯ ಬೆಲೆಯನ್ನು ಘೋಷಿಸಲು ಸಂತೋಷವಾಗಿದೆ. ಅಲ್ಲದೆ, ಈ ಕಾರು, ಪರಿಸರ ಸ್ನೇಹಿ ತಂತ್ರಜ್ಞಾನವನ್ನು ಹೊಂದಿದ್ದು, ಭಾರತದ ಗ್ರಾಹಕರು ಖಂಡಿತ ಇಷ್ಟಪಡಲಿದ್ದಾರೆ ಎಂಬ ನಂಬಿಕೆಯಿದೆ' ಎಂದು ಹೇಳಿದ್ದಾರೆ.

ಹೊಸ ಅಧ್ಯಾಯ ಬರೆಯಲು ಸಿದ್ಧವಾಗಿವೆ ಮಾರುತಿ ಸುಜುಕಿ ಕಾರುಗಳು

ಈಗಾಗಲೇ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಸಿಎನ್‌ಜಿಯ ಬುಕಿಂಗ್ ಆರಂಭವಾಗಿದ್ದು, ಇದರ ಅತ್ಯನ್ನತ ಇಂಧನ ದಕ್ಷತೆ ಹಾಗೂ ಕಡಿಮೆ ನಿರ್ವಹಣಾ ವೆಚ್ಚಗಳು ಕಾರು ಖರೀದಿಸುವಂತೆ ಗ್ರಾಹಕರನ್ನು ಪ್ರೇರಿಪಿಸಬಹುದು. ಅಲ್ಲದೆ, ಬೆಲೆಯು ಅಷ್ಟೇನೂ ದುಬಾರಿ ಇಲ್ಲದಿರುವುದರಿಂದ ಹೆಚ್ಚಿನ ಮಂದಿ ಕೊಂಡುಕೊಳ್ಳಬಹುದು. ಮುಂಬರುವ ದಿನಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸಿಎನ್‌ಜಿ ಇಂಧನ ಚಾಲಿತ ಕಾರುಗಳನ್ನು ಖರೀದಿಸಲು ಹೆಚ್ಚಿನ ಜನರು ಆಸಕ್ತಿ ತೋರಬಹುದು. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಸಿಎನ್‌ಜಿ ಎಷ್ಟರಮಟ್ಟಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Most Read Articles

Kannada
English summary
Toyota urban cruiser hyryder cng launched in india details kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X