Toyota: ಟೊಯೊಟಾದ ಈ ಕಾರಿಗೆ ಮುಗಿಬಿದ್ದ ಗ್ರಾಹಕ.. 27 ಕಿ.ಮೀ ಮೈಲೇಜ್, ಕೈಗೆಟುಕುವ ಬೆಲೆ!

ಭಾರತದಲ್ಲಿ ಟೊಯೊಟಾ (Toyota) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಅದರಲ್ಲೂ ಕಂಪನಿಯ ಅರ್ಬನ್ ಕ್ರೂಸರ್ ಹೈರಿಡರ್ (Urban Cruiser Hyryder) ಎಸ್‌ಯುವಿಗೆ ಪ್ರತ್ಯೇಕ ಅಭಿಮಾನಿ ಬಳಗವಿದ್ದು, ನೀವು ಈ ಕಾರನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಒಂದಷ್ಟು ತಿಂಗಳು ಕಾಯಬೇಕು.

ಟೊಯೊಟಾ ಇಂಡಿಯಾ (Toyota India) ತನ್ನ ಅಧಿಕೃತ ವೆಬ್‌ಸೈಟ್‌ ನಲ್ಲಿ 1 ಡಿಸೆಂಬರ್ 2023ಕ್ಕೆ ಅನ್ವಯವಾಗುವಂತೆ ಕಂಪನಿಯ ವಿವಿಧ ಮಾದರಿಗಳ ಕಾಯುವ ಅವಧಿ (Waiting Period) ಕುರಿತ ವಿವರವನ್ನು ಪ್ರಕಟಿಸಿದೆ. ಪ್ರಮುಖ ಎಸ್‌ಯುವಿಯಾಗಿರುವ ಅರ್ಬನ್ ಕ್ರೂಸರ್ ಹೈರಿಡರ್ ಹೈಬ್ರಿಡ್ ರೂಪಾಂತರಗಳು ವಿತರಣೆಯಾಗಲು 5 - 6 ತಿಂಗಳು ಬೇಕಾಗಲಿದೆ.

Toyota: ಟೊಯೊಟಾದ ಈ ಕಾರಿಗೆ ಮುಗಿಬಿದ್ದ ಗ್ರಾಹಕ.. 27 ಕಿ.ಮೀ ಮೈಲೇಜ್, ಕೈಗೆಟುಕುವ ಬೆಲೆ!

ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ (Toyota Urban Cruiser Hyryder) ನಾನ್ ಹೈಬ್ರಿಡ್ (ನಿಯೋ ಡ್ರೈವ್) ವೇರಿಯೆಂಟ್ ಅನ್ನು ಗ್ರಾಹಕರು ಈ ದಿನ ಆರ್ಡರ್ ಮಾಡಿದರೂ ಡಿಲೆವರಿಯಾಗಲು 10 - 11 ತಿಂಗಳವೆರೆಗೆ ಸಮಯಾವಕಾಶ ಬೇಕು. ಸಿಎನ್‌ಜಿ (CNG) ರೂಪಾಂತರಗಳು ಕೊಂಚ ಹೆಚ್ಚಿನ 14 - 15 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿವೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, ರೂ.10.86 ಲಕ್ಷದಿಂದ 20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಜೊತೆಗೆ ಇ, ಎಸ್, ಸಿ, ವಿ ಸೇರಿದಂತೆ ವಿವಿಧ ರೂಪಾಂತರ ಹಾಗೂ ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್ನೈಟ್ ಬ್ಲ್ಯಾಕ್ ಒಳಗೊಂಡಂತೆ 7 ಮೊನೊಟೊನ್, 4 ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

ಈ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, 1.5 - ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ (ನಿಯೋ ಡ್ರೈವ್) 1.5 - ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. 5 - ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

5 - ಆಸನ ಆಯ್ಕೆ ವ್ಯವಸ್ಥೆಯೊಂದಿರುವ ಈ ಕಾರು, 2WD (ಟೂ ವೀಲ್ ಡ್ರೈವ್) ಮತ್ತು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, ಯಾವುದೇ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ ರೂಪಾಂತರಗಳಿಗೆ ಅನುಗುಣವಾಗಿ 19.39 - 27.97 kmpl ಇಂಧನ ದಕ್ಷತೆಯನ್ನು ಹೊಂದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌, ಸ್ಮಾರ್ಟ್‌ಫೋನ್ ಮತ್ತು ಸ್ಮಾರ್ಟ್‌ವಾಚ್ ಕನೆಕ್ಟಿವಿಟಿ, ಆಂಬಿಯೆಂಟ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌, ಹೆಡ್ಸ್ - ಅಪ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದ ಈ ಕಾರು ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್‌ ಮತ್ತು 360 - ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ವಿವಿಧ ಫೀಚರ್ಸ್ ಇವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, December 9, 2023, 10:23 [IST]
English summary
Toyota urban cruiser hyryder december 2023 waiting period revealed 27 km mileage
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+