ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್‍ಯುವಿ

ಜನಪ್ರಿಯ ಕಾರು ತಯಾರಕರಾದ ಟೊಯೊಟಾ ತನ್ನ ಹೊಸ ಅರ್ಬನ್ ಕ್ರೂಸರ್ ಹೈರೈಡರ್ ಕಳೆದ ವರ್ಷ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಈ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನನ್ನು ಸೃಷ್ಟಿಸಿದೆ. ಟೊಯೊಟಾ ಭಾರತದಲ್ಲಿ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಬೆಲೆಗಳನ್ನು ಹೆಚ್ಚಿಸಿದೆ.

ಟೊಯೊಟಾ ಕಂಪನಿಯು ಈ ಹೊಸ ಅರ್ಬನ್ ಕ್ರೂಸರ್ ಎಸ್‌ಯುವಿ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.15.61 ಲಕ್ಷವಾಗಿದೆ. ಅರ್ಬನ್ ಕ್ರೂಸರ್ ಎಸ್‍ಯುವಿಯ ಸ್ಟ್ರಾಂಗ್-ಹೈಬ್ರಿಡ್ ರೂಪಾಂತರದ ಬೆಲೆಗಳನ್ನು ರೂ 50,000 ರಷ್ಟು ಹೆಚ್ಚಿಸಿದೆ. ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಸೌಲಭ್ಯವನ್ನು ಹೊಂದಿರುವ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಟೊಯೊಟಾ ಹೈರೈಡರ್ ಕಾರು ಮಾದರಿಯು ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದೆ.

ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ವಿವಿಧ ವೆರಿಯೆಂಟ್ ಅನುಗುಣವಾಗಿ ಸ್ಮಾರ್ಟ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ನೀಡಲಾಗಿದೆ. ಸ್ಟ್ರಾಂಗ್ ಹೈಬ್ರಿಡ್ ಮಾದರಿಯಲ್ಲಿರುವ 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಮತ್ತು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೈಬ್ರಿಡ್ ತಂತ್ರಜ್ಞಾನದ ಪ್ರಮುಖ ತಾಂತ್ರಿಕ ಅಂಶವಾಗಿದೆ. ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮಾದರಿಯು 87 ಬಿಎಚ್‌ಪಿ ಮತ್ತು 122 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇನ್ನು 177.6 ವೊಲ್ಟ್ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯದೊಂದಿಗೆ 79 ಬಿಎಚ್‌ಪಿ ಮತ್ತು 141 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮೋಟಾರ್ ಒಟ್ಟಾಗಿ ಕಾರ್ಯನಿರ್ವಹಣೆ ಮಾಡುವ ಮೂಲಕ ಪೆಟ್ರೋಲ್ ದಹಿಸುವಿಕೆಯ ಪ್ರಮಾಣವನ್ನು ತಗ್ಗಿಸಲಿದೆ. ಈ ಮೂಲಕ ಎರಡು ತಂತ್ರಜ್ಞಾನಗಳು ಒಟ್ಟಾಗಿ 114 ಬಿಎಚ್‌ಪಿ ಉತ್ಪಾದನೆಯೊಂದಿಗೆ ಇಂಧನ ಕಾರ್ಯಕ್ಷಮತೆ ಕಾಯ್ದುಕೊಳ್ಳುತ್ತದೆ. ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಹೊಂದಿರುವ ಹೈರೈಡರ್ ವೆರಿಯೆಂಟ್‌ಗಳಲ್ಲಿ ಟೊಯೊಟಾ ಕಂಪನಿಯು ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಇನ್ನು ಸ್ಮಾರ್ಟ್ ಹೈಬ್ರಿಡ್ ಹೈರೈಡರ್‌ನಲ್ಲಿ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯಿಂದ ಎರವಲು ಪಡೆಯಲಾದ 1.5-ಲೀಟರ್ K15C ಸ್ಮಾರ್ಟ್-ಹೈಬ್ರಿಡ್ ಜೊತೆಗೆ ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ (ISG) ಒದಗಿಸಲಿದ್ದು, ಇದು ಕೂಡಾ ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ಕಾಯ್ದುಕೊಳ್ಳಲು ಸಹಕಾರಿಯಾಗಿದೆ. 1.5-ಲೀಟರ್ K15C ಸ್ಮಾರ್ಟ್-ಹೈಬ್ರಿಡ್ ಪೆಟ್ರೋಲ್ ಎಂಜಿನ್ ಅನ್ನು ಈಗಾಗಲೇ ಬ್ರೆಝಾ, ಎಕ್ಸ್‌ಎಲ್6 ಮತ್ತು ಹೊಸ ಎರ್ಟಿಗಾ ಮಾದರಿಗಳಲ್ಲಿಯೂ ನೀಡಲಾಗಿದೆ.

ಸ್ಮಾರ್ಟ್ ಹೈಬ್ರಿಡ್ ಹೈರೈಡರ್‌ನಲ್ಲಿ ಪೆಟ್ರೋಲ್ ಎಂಜಿನ್ ಮಾದರಿಯು 103 ಬಿಎಚ್‌ಪಿ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ನೀಡಿದೆ. ಇನ್ನು ಹೊಸ ಎಸ್‍ಯುವಿ ಖರೀದಿ ಮೇಲೆ ಟೊಯೊಟಾ ಕಂಪನಿಯು 3 ವರ್ಷ ಅಥವಾ1,00,000 ಕಿ.ಮೀ ವಾರಂಟಿಯನ್ನು ನೀಡಲಿದ್ದು, ಇದನ್ನು 5 ವರ್ಷ ಅಥವಾ 2,20,000 ಕಿ.ಮೀವರೆಗೆ ವಿಸ್ತರಿಸಬಹುದಾಗಿದೆ.

ಜೊತೆಗೆ ಹೊಸ ಕಾರಿನ ಹೈಬ್ರಿಡ್ ಬ್ಯಾಟರಿಗಳ ಮೇಲೆ 8 ವರ್ಷ ಅಥವಾ 1,60,000 ಕಿ.ಮೀ ವಾರಂಟಿಯನ್ನು ಸಹ ನೀಡುತ್ತಿದೆ. ಪ್ರಮುಖ ಪ್ರತಿಸ್ಪರ್ಧಿಗಳಾದ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಫೋಕ್ಸ್‌ವ್ಯಾಗನ್ ಟೈಗುನ್, ಸ್ಕೋಡಾ ಕುಶಾಕ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ. ಸುರಕ್ಷತಾ ವೈಶಿಷ್ಟ್ಯಗಳ ವಿಷಯದಲ್ಲೂ ಗಮನಸೆಳೆಯಲಿರುವ ಅರ್ಬನ್ ಕ್ರೂಸರ್ ಹೈರೈಡರ್ ಕಾರು 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ ಅನ್ನು ಪಡೆಯುತ್ತದೆ.

ಟೊಯೊಟಾ ಅರ್ಬನ್ ಕ್ರೂಸರ್ ಎಸ್‌ಯುವಿಯ ಸುರಕ್ಷತಾ ವೈಶಿಷ್ಟ್ಯಗಳ ವಿಷಯದಲ್ಲೂ ಗಮನಸೆಳೆಯಲಿರುವ ಅರ್ಬನ್ ಕ್ರೂಸರ್ ಹೈರೈಡರ್ ಕಾರು 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ ಅನ್ನು ಪಡೆಯುತ್ತದೆ. ಇನ್ನು ಹೈರೈಡರ್‌ನ ಉನ್ನತ ರೂಪಾಂತರಗಳಲ್ಲಿ ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, ಕನೆಕ್ಟ್ ಮಾಡಿದ ಕಾರ್ ಟೆಕ್ ಮತ್ತು ಗೂಗಲ್ ಮತ್ತು ಸಿರಿ ಕನೆಕ್ಟಿವಿಟಿಯೊಂದಿರುವ ವಾಯ್ಸ್ ಅಸಿಸ್ಟ್ ನಂತಹ ವೈಶಿಷ್ಟ್ಯಗಳನ್ನು ಹೊಂದಿವೆ.

Most Read Articles

Kannada
Read more on ಟೊಯೊಟಾ toyota
English summary
Toyota urban cruiser hyryder price hiked details in kannada
Story first published: Saturday, February 4, 2023, 18:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X