Maruti Suzuki: ಹೊಸ ಅಧ್ಯಾಯಕ್ಕೆ ನಾಂದಿ.. ಬರಲಿವೆ ಮಾರುತಿ ಸುಜುಕಿ ಕಾರುಗಳು, ವಿಶೇಷತೆಗಳೇನು?
ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಮುಂಬರುವ ವರ್ಷಗಳಲ್ಲಿ ಅತ್ಯಾಧುನಿಕ ವಿನ್ಯಾಸ, ವೈಶಿಷ್ಟ್ಯ ಹಾಗೂ ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಕಾರುಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಮೊದಲಿಗೆ ಕಂಪನಿಯು ದೊಡ್ಡಮಟ್ಟದಲ್ಲಿ ನೀರಿಕ್ಷೆ ಇಟ್ಟುಕೊಂಡಿರುವ ಸ್ವಿಫ್ಟ್ ಬಗ್ಗೆ ತಿಳಿಯೋಣ. ಮಾರುತಿ ಸುಜುಕಿ, ನಾಲ್ಕನೇ ತಲೆಮಾರಿನ ಸ್ವಿಫ್ಟ್ ಕಾರನ್ನು ಮುಂದಿನ ವರ್ಷದ (2024) ಆರಂಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣ ಮಾಡಲಿದೆ. ಆ ಬಳಿಕ, ಕೆಲವೇ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಸ್ವಿಫ್ಟ್ ಅತ್ಯಾಧುನಿಕ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಜೊತೆಗೆ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಅನ್ನು ಪಡೆದಿರುವ ನೀರಿಕ್ಷೆಯಿದೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಸ್ವಿಫ್ಟ್, ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ CNG ಪವರ್ ಟ್ರೈನ್ ಆಯ್ಕೆಯಲ್ಲಿ ದೊರೆಯಲಿದ್ದು, 22.38 - 22.56 kmpl ಮೈಲೇಜ್ ನೀಡುತ್ತದೆ. ಈ ಕಾರು, ಗ್ರಾಹಕರನ್ನು ಆಕರ್ಷಿಸುವ ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ, 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಹೊಂದಿದೆ.
ಮಾರುತಿ ಸುಜುಕಿ, ನಾಲ್ಕನೇ ತಲೆಮಾರಿನ ಸ್ವಿಫ್ಟ್ ಕಾರನ್ನು ಲಾಂಚ್ ಮಾಡಿದ ಬಳಿಕ, ಅಂದರೆ, 2024ರ ದ್ವಿತೀಯಾರ್ಧದಲ್ಲಿ ಹೊಚ್ಚ ಹೊಸ ಡಿಸೈರ್ ಕಾರನ್ನು ಬಿಡುಗಡೆ ಮಾಡಲಿದೆ. ಇದರ ಬಹುತೇಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳು ಮುಂಬರಲಿರುವ ಸ್ವಿಫ್ಟ್ ಕಾರನ್ನೇ ಆಧರಿಸಿರಲಿದೆ. ನೂತನ ಡಿಸೈರ್ 1.2 ಲೀಟರ್ 3 ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದಿರಲಿದ್ದು, 35-40 kmpl ಮೈಲೇಜ್ ನೀಡುವ ಸಾಧ್ಯತೆಯಿದೆ.

ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಡಿಸೈರ್ ರೂ.6.51 ಲಕ್ಷದಿಂದ ರೂ.9.39 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಹಾಗೂ CNG ಎಂಜಿನ್ ಆಯ್ಕೆಯಲ್ಲಿ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 22.41 - 22.61 kmpl ಮೈಲೇಜ್ ನೀಡುತ್ತದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.
ದೇಶದಲ್ಲಿ ಈಗಾಗಲೇ ಬಹುತೇಕ ಕಂಪನಿಗಳು, ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಿವೆ. ಮಾರುತಿ ಸುಜುಕಿ ಮಾತ್ರ ಆ ವಿಭಾಗದಲ್ಲಿ ಒಂದೇ ಒಂದು ಕಾರನ್ನು ಲಾಂಚ್ ಮಾಡಿಲ್ಲ. ಅದಕ್ಕಾಗಿ, ಸಾಕಷ್ಟು ತಯಾರಿ ನಡೆಸಿದ್ದು, ಕಳೆದ ಜನವರಿಯಲ್ಲಿ ನಡೆದ ದೆಹಲಿಯ ಆಟೋ ಎಕ್ಸ್‌ಪೋದಲ್ಲಿ ಉತ್ಪಾದನೆಗೆ ಸಿದ್ದವಾಗುತ್ತಿರುವ eVX ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರನ್ನು ಅನಾವರಣ ಮಾಡಿತ್ತು. ಇದು 2025ಕ್ಕೆ ಬಿಡುಗಡೆಯಾಗಲಿದ್ದು, ಸಂಪೂರ್ಣ ಚಾರ್ಜಿನಲ್ಲಿ 500 km ರೇಂಜ್ ನೀಡುವ ನೀರಿಕ್ಷೆಯಿದೆ.

ಮಾರುತಿ ಸುಜುಕಿ ಏಳು ಆಸನ ಆಯ್ಕೆಯನ್ನು ಹೊಂದಿರುವ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು 2025ಕ್ಕೆ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತದೆ. ಈ ಕಾರು, ಪ್ರಸ್ತುತ ಹೊಂದಿರುವ 1.5 ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಅಥವಾ 1.5 ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಬಹುದು. ಇದು, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿಗೆ ಪ್ರತಿಸ್ಪರ್ಧಿಯಾಗಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications