Volkswagen: ಜನಪ್ರಿಯ ಫೋಕ್ಸ್‌ವ್ಯಾಗನ್ ಕಾರಿನ ಬೆಲೆ ಧಿಡೀರ್ ಏರಿಕೆ

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಫೋಕ್ಸ್‌ವ್ಯಾಗನ್ ಟೈಗುನ್ (Volkswagen Tiguan) ಎಸ್‌ಯುವಿ ಸುರಕ್ಷತೆಗೆ ಹೆಸರುವಾಸಿಯಾಗಿದೆ. 5 ಸೇಫ್ಟಿ ರೇಟಿಂಗ್ ಪಡೆದಿದ್ದು, ಹೆಚ್ಚಿನ ಗ್ರಾಹಕರನ್ನು ಆಕರ್ಷಿಸುತ್ತಿದೆ. ಇದೀಗ, ಆ ಕಾರಿನ ಬೆಲೆ (price) ಧಿಡೀರನೇ ಹೆಚ್ಚಳಗೊಂಡಿದೆ ಎಂದು ವರದಿಯಾಗಿದೆ. ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.

ಫೋಕ್ಸ್‌ವ್ಯಾಗನ್ ಇಂಡಿಯಾ (Volkswagen India) ತನ್ನ ಟೈಗುನ್ ಎಸ್‌ಯುವಿ ಬೆಲೆಯನ್ನು ಕೊಂಚ ಭಾರೀಯಾಗಿಯೇ ಹೆಚ್ಚಳ ಮಾಡಿದೆ. ಬರೋಬ್ಬರಿ ರೂ.47,000 ದರವನ್ನು ಏರಿಸಿದೆ. ಈ ಹಿಂದೆ, ರೂ.34.7 ಲಕ್ಷವಿದ್ದ ಬೆಲೆ, ಸದ್ಯ, ರೂ.35.17 ಲಕ್ಷಕ್ಕೆ (ಎಕ್ಸ್ ಶೋರೂಂ) ತಲುಪಿದೆ. ಫೋಕ್ಸ್‌ವ್ಯಾಗನ್ ಟೈಗುನ್ ಎಸ್‌ಯುವಿ ದೇಶೀಯ ಮಾರುಕಟ್ಟೆಯಲ್ಲಿ ಒಂದೇ ರೂಪಾಂತರ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

Volkswagen: ಜನಪ್ರಿಯ ಫೋಕ್ಸ್‌ವ್ಯಾಗನ್ ಕಾರಿನ ಬೆಲೆ ಧಿಡೀರ್ ಏರಿಕೆ

ಟೈಗುನ್ ಎಸ್‌ಯುವಿ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು 2.0 - ಲೀಟರ್ ಫೋರ್ ಸಿಲಿಂಡರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 188 hp ಗರಿಷ್ಠ ಪವರ್ ಹಾಗೂ 320 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 7 - ಸ್ವೀಡ್ DSG ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ.

ಐದು ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಈ ಕಾರು, ಆಲ್ ವೀಲ್ ಡ್ರೈವ್ (AWD) ತಂತ್ರಜ್ಞಾನವನ್ನು ಪಡೆದಿದೆ. ಸರಿ ಸುಮಾರು 12.65 kmpl ಮೈಲೇಜ್ ನೀಡುತ್ತದೆ. ಏಳು ಮೊನೊಟೊನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ನೈಟ್‌ಶೇಡ್ ಬ್ಲೂ, ಪ್ಯೂರ್ ವೈಟ್, ಓರಿಕ್ಸ್ ವೈಟ್, ಡೀಪ್ ಬ್ಲ್ಯಾಕ್, ಡಾಲ್ಫಿನ್ ಗ್ರೇ, ರಿಫ್ಲೆಕ್ಸ್ ಸಿಲ್ವರ್ ಹಾಗೂ ಕಿಂಗ್ಸ್ ರೆಡ್.

ಈ ಫೋಕ್ಸ್‌ವ್ಯಾಗನ್ ಟೈಗುನ್ ಎಸ್‌ಯುವಿ ಯಾವೆಲ್ಲ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ ಎಂಬುದನ್ನು ತಿಳಿಯುವುದಾದರೆ, ಈ ಕಾರು, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಕರ್ಷಕ ಸನ್‌ರೂಫ್, ಕನೆಕ್ಟ್ದ್ ಕಾರ್ ಟೆಕ್, ಥ್ರೀ ಜೋನ್ ಕ್ಲೇಮೇಟ್ ಕಂಟ್ರೋಲ್, ಪವರ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್ ಹಾಗೂ ಆಂಬಿಯೆಂಟ್ ಲೈಟಿಂಗ್ ಅನ್ನು ಹೊಂದಿದೆ.

ಫೋಕ್ಸ್‌ವ್ಯಾಗನ್ ಟೈಗುನ್ ಎಸ್‌ಯುವಿ, ಭಾರತದಲ್ಲಿ ಅದರ ಸುರಕ್ಷತೆಯಿಂದಲೇ ಜನಪ್ರಿಯತೆಗೊಂಡಿದೆ. ಇದೇ ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಲು ಕಾರಣವಾಗಿದೆ. ಟೈಗುನ್, ಗ್ಲೋಬಲ್ NCAP ನಡೆಸುವ ಕ್ರ್ಯಾಶ್ ಟೆಸ್ಟ್ ನಲ್ಲಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳು ಹಾಗೂ ಮಕ್ಕಳ ರಕ್ಷಣೆಯಲ್ಲಿ 34ಕ್ಕೆ 29.64 ಅಂಕಗಳನ್ನು ಗಳಿಸುವ ಮೂಲಕ 5 ಸ್ಟಾರ್ ರೇಟಿಂಗ್ ಪಡೆದಿದೆ.

ಈ ಕಾರು, ಸಾಕಷ್ಟು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ, 6 ಏರ್ ಬಾಗ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಪಾರ್ಕ್ ಅಸಿಸ್ಟ್, ರೇರ್ ವ್ಯೂ ಕ್ಯಾಮೆರಾ ಹಾಗೂ ISOFIX ಚೈಲ್ಡ್-ಸೀಟ್ ಮೌಂಟ್ಸ್ ಒಳಗೊಂಡಂತೆ ಹತ್ತಾರು ಸೇಫ್ಟಿ ಫೀಚರ್ಸ್ ಒಳಗೊಂಡಿದೆ.

ಫೋಕ್ಸ್‌ವ್ಯಾಗನ್ ಟೈಗುನ್ ಎಸ್‌ಯುವಿಗೆ ದೇಶೀಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಹ್ಯುಂಡೈ ಟಕ್ಸನ್ ಹಾಗೂ ಸಿಟ್ರಸ್ ಸಿ5 ಏರ್‌ಕ್ರಾಸ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಸದ್ಯ, ಈ ಎಸ್‌ಯುವಿ ಬೆಲೆ ಏರಿಕೆಯಾಗಿರುವುದು ಗ್ರಾಹಕರಿಗೆ ಬೇಸರ ತರಿಸಿದೆ. ಆದರೆ, ಸುರಕ್ಷತೆ ದೃಷ್ಟಿಯಿಂದ 5 ಸ್ಟಾರ್ ರೇಟಿಂಗ್ ಗಳಿಸಿರುವುದರಿಂದ ದರ ಹೆಚ್ಚಳವು ಗ್ರಾಹಕರ ಮೇಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

More from DriveSpark

Article Published On: Friday, August 18, 2023, 8:30 [IST]
English summary
Volkswagen tiguan suv price rs 47000 hiked india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+