World Ev Day Week: ದೇಶದಲ್ಲಿ ಅತಿ ಕಡಿಮೆ ಬೆಲೆಗೆ ಸಿಗುವ ಪ್ರಮುಖ ಎಲೆಕ್ಟ್ರಿಕ್ ಕಾರುಗಳಿವು
ಪ್ರಪಂಚದಾದ್ಯಂತ ಪರಿಸರ ರಕ್ಷಣೆಗೆ ಶೂನ್ಯ ಹೊರಸೂಸುವಿಕೆಯ ವಾಹನಗಳ ಬಳಕೆಯನ್ನು ಉತ್ತೀಜಿಸಲಾಗುತ್ತಿದೆ. ಅದಕ್ಕಾಗಿ, ಸೆಪ್ಟೆಂಬರ್ 9ರಂದು ವಿಶ್ವ ಇವಿ ದಿನ (World EV Day) ಆಚರಿಸಲಾಗುತ್ತದೆ. ನಿನ್ನೆಯಷ್ಟೇ ಈ ದಿನ ಮುಗಿದಿದ್ದು, ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಖರೀದಿಗೆ ಸಿಗುವ ಎಲೆಕ್ಟ್ರಿಕ್ ಕಾರುಗಳು ಯಾವುದೆಂದು ತಿಳಿಯೋಣ.
ಮೊದಲಿಗೆ, ಭಾರೀ ಬೇಡಿಕೆಯನ್ನು ಹೊಂದಿರುವ ಟಾಟಾ ಟಿಯಾಗೊ ಇವಿ (Tata Tiago EV) ಬಗ್ಗೆ ಮಾತನಾಡೋಣ. ಈ ಕಾರು, ರೂ.8.69 ಲಕ್ಷದಿಂದ ರೂ.12.04 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಎರಡು ಬ್ಯಾಟರಿ ಆಯ್ಕೆಯನ್ನು ಹೊಂದಿದೆ. ಚಿಕ್ಕದಾದ 19.2 kWh ಬ್ಯಾಟರಿ ಪ್ಯಾಕ್ ಹೊಂದಿರುವ ಕಾರು, 61 PS ಗರಿಷ್ಠ ಪವರ್ ಹಾಗೂ 110 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಂಪೂರ್ಣ ಚಾರ್ಜಿನಲ್ಲಿ 250 km ರೇಂಜ್ ಕೊಡುತ್ತದೆ.

ದೊಡ್ಡದಾದ 24 kWh ಬ್ಯಾಟರಿ ಪ್ಯಾಕ್ ಪಡೆದಿರುವ ಟಿಯಾಗೊ ಇವಿ, 75 PS ಗರಿಷ್ಠ ಪವರ್ ಮತ್ತು 114 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಫುಲ್ ಚಾರ್ಜಿನಲ್ಲಿ 315 km ರೇಂಜ್ ನೀಡುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4 - ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಟಾಟಾ ಟಿಗೂರ್ ಇವಿ (Tata Tigor EV) ವಾಣಿಜ್ಯ ಬಳಕೆಗೆ ಮಾತ್ರ ಖರೀದಿಗೆ ಲಭ್ಯವಿದ್ದು, ರೂ.12.49 ಲಕ್ಷದಿಂದ ರೂ.13.75 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 26 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜಿನಲ್ಲಿ 315 km ರೇಂಜ್ ನೀಡಲಿದೆ. ಜೊತೆಗೆ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯೆಲ್ ಏರ್ ಬ್ಯಾಗ್ ಪಡೆದಿದೆ.
ಭಾರತದಲ್ಲಿ ಎಂಜಿ ಕಾಮೆಟ್ ಇವಿ (MG Comet EV), ರೂ.7.98 ಲಕ್ಷದಿಂದ ರೂ.9.98 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರು, 17.3 KWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಇದರಲ್ಲಿ ಬಳಕೆ ಮಾಡಿರುವ ಸಿಂಗಲ್ PMS ಮೋಟಾರ್ 41.4 hp ಪವರ್ ಮತ್ತು 110 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕಾರು, ಸಂಪೂರ್ಣ ಚಾರ್ಜಿನಲ್ಲಿ 230 km ರೇಂಜ್ ಕೊಡುತ್ತದೆ.
ಎಂಜಿ ಕಾಮೆಟ್ ಇವಿ ಪುಟ್ಟ ಕಾರಾಗಿದ್ದರೂ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ, ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಗಾಗಿ ಡುಯೆಲ್ 10.25-ಇಂಚಿನ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇನಂತಹ ಅತ್ಯಾಧುನಿಕ ಫೀಚರ್ಸ್ ಹೊಂದಿದೆ. ಸೇಫ್ಟಿ ಸಲುವಾಗಿ ಡುಯಲ್ ಫ್ರಂಟ್ ಏರ್ ಬಾಗ್ಸ್ ಪಡೆದಿದೆ.
ಸಿಟ್ರಸ್ ಇಸಿ3 (Citroen eC3) ರೂ.11.50 ಲಕ್ಷದಿಂದ ರೂ.12.43 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಇದು, ಲೈವ್ ಹಾಗೂ ಫೀಲ್ ಎಂಬ ರೂಪಾಂತರದ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, 29.2 kWh ಬ್ಯಾಟರಿ ಪ್ಯಾಕ್ ಹೊಂದಿದೆ. ಸಂಪೂರ್ಣ ಚಾರ್ಜಿನಲ್ಲಿ 320 km ರೇಂಜ್ ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 57 PS ಪವರ್ ಮತ್ತು 143 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಸಿಟ್ರಸ್ ಇಸಿ3 ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ, 10.2 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಮ್ಯಾನ್ಯುವಲ್ ಎಸಿ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications