ಗರಿಷ್ಠ ಸುರಕ್ಷತೆ, 521 ಕಿ.ಮೀ ಓಡುವ ಚೀನಾ ಎಲೆಕ್ಟ್ರಿಕ್ ಕಾರನ್ನು ತೆಗೆದುಕೊಳ್ಳಬೇಕೇ.. ವಿಶೇಷತೆಗಳೇನು?
ಬಿವೈಡಿ ಇಂಡಿಯಾ ತನ್ನ ನವೀಕರಿಸಿದ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷವಾಗಿದೆ. ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿದ್ದು, ಇದನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತವನ್ನು ಪಾವತಿಸಿ ಬುಕ್ ಮಾಡಬಹುದು. ಇನ್ನು ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯ ವಿತರಣೆಯು ಶೀಘ್ರದಲ್ಲೇ ಪ್ರಾರಂಭವಾಗಬಹುದು ಎಂದು ನಿರೀಕ್ಷಿಸುತ್ತೇವೆ.
ರೂಪಾಂತರಗಳು ಮತ್ತು ಬಣ್ಣಗಳ ಆಯ್ಕೆಗಳು: ಈ ಹೊಸ ಅಪ್‌ಡೇಟ್‌ನೊಂದಿಗೆ, ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿ ಡೈನಾಮಿಕ್, ಪ್ರೀಮಿಯಂ ಮತ್ತು ಸುಪೀರಿಯರ್ ಎಂಬ ಮೂರು ರೂಪಾಂತರಗಳನ್ನು ಪಡೆಯುತ್ತದೆ. ಇದರೊಂದಿಗೆ, ಬಿವೈಡಿ ಅಟ್ಟೊ 3 ಎಲೆಕ್ಟ್ರಿಕ್ ಕಾರು ಕಾಸ್ಮೊಸ್ ಬ್ಲ್ಯಾಕ್ ಜೊತೆಗೆ ಸ್ಕೀ ವೈಟ್, ಬೌಲ್ಡರ್ ಗ್ರೇ ಮತ್ತು ಸರ್ಫ್ ಬ್ಲೂ ಎಂಬ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಬ್ಯಾಟರಿ ಪ್ಯಾಕ್: ಎಂಟ್ರ್ ಲೆವೆಲ್ ಡೈನಾಮಿಕ್ ರೂಪಾಂತರವು 49.92kWh ಬ್ಯಾಟರಿ ಪ್ಯಾಕ್ ಅನ್ನು ಪಡೆದರೆ, ಎರಡನೆಯದು ದೊಡ್ಡದಾದ 60.48kWh ಯುನಿಟ್ ಅನ್ನು ಪಡೆಯುತ್ತದೆ. ರೇಂಜ್ ಸಂಬಂಧಿಸಿದಂತೆ, ಚಿಕ್ಕ ಬ್ಯಾಟರಿ ಪ್ಯಾಕ್ ಸಿಂಗಲ್ ಚಾರ್ಜ್‌ನಲ್ಲಿ 468 ಕಿಮೀ ರೇಂಜ್ ಅನ್ನು ನೀಡುತ್ತದೆ.ಮತ್ತೊಂದೆಡೆ, ದೊಡ್ಡ ಬ್ಯಾಟರಿ ಪ್ಯಾಕ್ ಸಿಂಗಲ್ ಚಾರ್ಜ್‌ನಲ್ಲಿ 521 ಕಿ.ಮೀ ರೇಂಜ್ ಅನ್ನು ನೀಡುತ್ತದೆ.
ಚಾರ್ಜಿಂಗ್: ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಕಾರು ಬ್ಯಾಟರಿ ಪ್ಯಾಕ್ ಫಾಸ್ಟ್ ಚಾರ್ಜರ್ ಅನ್ನು ಬಳಸಿಕೊಂಡು ಕೇವಲ 50 ನಿಮಿಷಗಳಲ್ಲಿ ಶೂನ್ಯದಿಂದ 80 ಪ್ರತಿಶತದವರೆಗೆ ಚಾರ್ಜ್ ಮಾಡಬಹುದು. ಹೊಸ ರೂಪಾಂತರಗಳ ಹೊರತಾಗಿ, BYD Atto 3 ಈಗ 'ಕಾಸ್ಮೊಸ್ ಬ್ಲ್ಯಾಕ್' ಎಂಬ ಹೊಸ ಬಣ್ಣದ ಆಯ್ಕೆಯಿಂದ ಪ್ರಯೋಜನ ಪಡೆಯುತ್ತದೆ.

ಫೀಚರ್ಸ್: ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಕಾರಿನಲ್ಲಿ 12.8-ಇಂಚಿನ ಟಚ್‌ಸ್ಕ್ರೀನ್ ಜೊತೆ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಹೊಂದಿದೆ. ಇದರೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ವೈರ್‌ಲೆಸ್ ಚಾರ್ಜರ್, 360-ಡಿಗ್ರಿ ಸರೌಂಡ್ ಕ್ಯಾಮೆರಾ, ಎಲೆಕ್ಟ್ರಿಕ್ ಟೈಲ್‌ಗೇಟ್, ಲೆವೆಲ್ 2 ಎಡಿಎಎಸ್ ಸೂಟ್ ಮತ್ತು ಪನರೊಮಿಕ್ ಸನ್‌ರೂಫ್ ಅನ್ನು ಹೊಂದಿದೆ.
ವಿನ್ಯಾಸ: ಈ ಹೊಸ ಬಿವೈಡಿ ಆಟ್ಟೊ ಎಲೆಕ್ಟ್ರಿಕ್ ಎಸ್‍ಯುವಿ ತನ್ನ ದೊಡ್ಡ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಬಲವಾದ ಲೈನ್ ಮತ್ತು ಪೂರ್ಣ-ಅಗಲದ ಎಲ್ಇಡಿ ಟೈಲ್‌ಲೈಟ್‌ಗಳೊಂದಿಗೆ ಸ್ಪೋರ್ಟಿ ಮತ್ತು ಅತ್ಯಾಧುನಿಕವಾಗಿ ಕಾಣುತ್ತದೆ. ಇನ್ನು ಇಲ್ಲಿಯವರೆಗೆ, ಬಿವೈಡಿ ಆಟ್ಟೊ 3 ನೇರ ಪ್ರತಿಸ್ಪರ್ಧಿಯನ್ನು ಹೊಂದಿಲ್ಲ. ಮಾರುಕಟ್ಟೆಯಲ್ಲಿರುವ ಹ್ಯುಂಡೈ Ioniq 5 ಹೆಚ್ಚು ಪ್ರೀಮಿಯಂ ಸ್ಥಾನವನ್ನು ಹೊಂದಿದೆ.

ಇನ್ನು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೆರಿದೆ. ಏರುತ್ತಿರುವ ಇಂಧನ ಬೆಲೆಗಳಿಂದ ಪಾರಾಗಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ. ಇದರಿಂದ ಜನರು ಈಗ ನಿಧಾನವಾಗಿ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದ ಹಿಂದಿನ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯು ಕೂಡ ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








