BYD Atto 3: ಭಾರತದಲ್ಲಿ 521 ಕಿ.ಮೀ ಓಡುವ ಈ ಚೀನಾ ಎಲೆಕ್ಟ್ರಿಕ್ ಕಾರು ಆಕರ್ಷಕ ಬೆಲೆಯಲ್ಲಿ ಬಿಡುಗಡೆ

ಬಿವೈಡಿ ಇಂಡಿಯಾ ತನ್ನ ನವೀಕರಿಸಿದ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷವಾಗಿದೆ. ಈ ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿದ್ದು, ಇದನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತವನ್ನು ಪಾವತಿಸಿ ಬುಕ್ ಮಾಡಬಹುದು. ಇನ್ನು ಹೊಸ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯ ವಿತರಣೆಯು ಮುಂಬರುವ ವಾರಗಳಲ್ಲಿ ಪ್ರಾರಂಭವಾಗಬಹುದು.

ಹೊಸ ಅಪ್‌ಡೇಟ್‌ನೊಂದಿಗೆ, ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿ ಡೈನಾಮಿಕ್, ಪ್ರೀಮಿಯಂ ಮತ್ತು ಸುಪೀರಿಯರ್ ಎಂಬ ಮೂರು ರೂಪಾಂತರಗಳನ್ನು ಪಡೆಯುತ್ತದೆ. ಎಂಟ್ರ್ ಲೆವೆಲ್ ಡೈನಾಮಿಕ್ ರೂಪಾಂತರವು 49.92kWh ಬ್ಯಾಟರಿ ಪ್ಯಾಕ್ ಅನ್ನು ಪಡೆದರೆ, ಎರಡನೆಯದು ದೊಡ್ಡದಾದ 60.48kWh ಯುನಿಟ್ ಅನ್ನು ಪಡೆಯುತ್ತದೆ. ರೇಂಜ್ ಸಂಬಂಧಿಸಿದಂತೆ, ಚಿಕ್ಕ ಬ್ಯಾಟರಿ ಪ್ಯಾಕ್ ಸಿಂಗಲ್ ಚಾರ್ಜ್‌ನಲ್ಲಿ 468 ಕಿಮೀ ರೇಂಜ್ ಅನ್ನು ನೀಡುತ್ತದೆ.

2024 BYD Atto 3

ಮತ್ತೊಂದೆಡೆ, ದೊಡ್ಡ ಬ್ಯಾಟರಿ ಪ್ಯಾಕ್ ಸಿಂಗಲ್ ಚಾರ್ಜ್‌ನಲ್ಲಿ 521 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಚಾರ್ಜಿಂಗ್ ವಿಷಯದಲ್ಲಿ, ಬಿವೈಡಿ ಆಟ್ಟೊ 3 ಬ್ಯಾಟರಿ ಪ್ಯಾಕ್ ಫಾಸ್ಟ್ ಚಾರ್ಜರ್ ಅನ್ನು ಬಳಸಿಕೊಂಡು ಕೇವಲ 50 ನಿಮಿಷಗಳಲ್ಲಿ ಶೂನ್ಯದಿಂದ 80 ಪ್ರತಿಶತದವರೆಗೆ ಚಾರ್ಜ್ ಮಾಡಬಹುದು. ಹೊಸ ರೂಪಾಂತರಗಳ ಹೊರತಾಗಿ, BYD Atto 3 ಈಗ 'ಕಾಸ್ಮೊಸ್ ಬ್ಲ್ಯಾಕ್' ಎಂಬ ಹೊಸ ಬಣ್ಣದ ಆಯ್ಕೆಯಿಂದ ಪ್ರಯೋಜನ ಪಡೆಯುತ್ತದೆ.

ಇದರೊಂದಿಗೆ, ಬಿವೈಡಿ ಅಟ್ಟೊ 3 ಎಲೆಕ್ಟ್ರಿಕ್ ಕಾರು ಕಾಸ್ಮೊಸ್ ಬ್ಲ್ಯಾಕ್ ಜೊತೆಗೆ ಸ್ಕೀ ವೈಟ್, ಬೌಲ್ಡರ್ ಗ್ರೇ ಮತ್ತು ಸರ್ಫ್ ಬ್ಲೂ ಎಂಬ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಲೆಕ್ಟ್ರಿಕ್ ಕಾರಿನಲ್ಲಿ 12.8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ವೈರ್‌ಲೆಸ್ ಚಾರ್ಜರ್, 360-ಡಿಗ್ರಿ ಸರೌಂಡ್ ಕ್ಯಾಮೆರಾ, ಎಲೆಕ್ಟ್ರಿಕ್ ಟೈಲ್‌ಗೇಟ್, ಲೆವೆಲ್ 2 ಎಡಿಎಎಸ್ ಸೂಟ್ ಮತ್ತು ಪನರೊಮಿಕ್ ಸನ್‌ರೂಫ್ ಅನ್ನು ಹೊಂದಿದೆ.

2024 BYD Atto 3

ಬಿವೈಡಿ ಇಂಡಿಯಾದ ಎಲೆಕ್ಟ್ರಿಕ್ ಪ್ಯಾಸೆಂಜರ್ ವೆಹಿಕಲ್ಸ್ (EPV) ವ್ಯವಹಾರದ ಮುಖ್ಯಸ್ಥ ರಾಜೀವ್ ಚೌಹಾನ್ ಅವರು ಮಾತನಾಡಿ, ಬಿವೈಡಿ ಆಟ್ಟೊ 3 ನಾಮಿಕ್, ಪ್ರೀಮಿಯಂ ಮತ್ತು ಸುಪೀರಿಯರ್ - ಈ ವಿಸ್ತೃತ ಸರಣಿಯನ್ನು ಪರಿಚಯಿಸುವುದು ನಮಗೆ ಮಹತ್ವದ ಮೈಲಿಗಲ್ಲು ಮತ್ತು ಭಾರತದ ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಪ್ರಮುಖ ಕ್ಷಣ. ನಾವು ಕಾಸ್ಮೊಸ್ ಬ್ಲ್ಯಾಕ್ ಆವೃತ್ತಿಯನ್ನು ಸಹ ಪರಿಚಯಿಸಿದ್ದೇವೆ, ನಮ್ಮ ಹೊಸ ತಂಡಕ್ಕೆ ಶೈಲಿ ಮತ್ತು ಬಣ್ಣದ ಅಂಶವನ್ನು ಸೇರಿಸಿದ್ದೇವೆ ಎಂದರು.

ನಮ್ಮ ವೈವಿಧ್ಯಮಯ ಕೊಡುಗೆಗಳು ನಮ್ಮ ಉತ್ಪನ್ನದ ಪೋರ್ಟ್‌ಫೋಲಿಯೊವನ್ನು ವಿಸ್ತರಿಸುವುದಲ್ಲದೆ ಹೆಚ್ಚು ಒಳಗೊಳ್ಳುವ ಇವಿ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತವೆ. ಪ್ರೀಮಿಯಂ ಎಲೆಕ್ಟ್ರಿಕ್ ಮೊಬಿಲಿಟಿಯನ್ನು ವಿಶಾಲವಾದ ಗ್ರಾಹಕರ ಸೆಳೆಯುವಂತೆ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಹೊಸ ರೂಪಾಂತರಗಳ ಬಿಡುಗಡೆಯೊಂದಿಗೆ, ಈ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಒಂದು ಹೆಜ್ಜೆ ಹತ್ತಿರವಾಗಿದ್ದೇವೆ ಎಂದು ಹೇಳಿದರು.

2024 BYD Atto 3

ಇನ್ನು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೆರಿದೆ. ಏರುತ್ತಿರುವ ಇಂಧನ ಬೆಲೆಗಳಿಂದ ಪಾರಾಗಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ. ಇದರಿಂದ ಜನರು ಈಗ ನಿಧಾನವಾಗಿ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದ ಹಿಂದಿನ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯು ಕೂಡ ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, July 10, 2024, 13:44 [IST]
English summary
2024 byd atto 3 launched in india price range features details
Read more on byd india new launches
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+