Honda: 19 Km ಮೈಲೇಜ್.. 8 ಲಕ್ಷಕ್ಕೆ ಹೊಸ 'ಹೋಂಡಾ ಅಮೇಜ್' ಕಾರು ಬಿಡುಗಡೆ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!
ಹೋಂಡಾ ಕಾರ್ಸ್ ಇಂಡಿಯಾ (Honda Cars India), ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಡಿಜೈರ್ ಕಾರಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಬುಧವಾರ ಹೊಸ ತಲೆಮಾರಿನ ಅಮೇಜ್ (Amaze) ಸೆಡಾನ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದ್ದು, ಆಕರ್ಷಕ ವಿನ್ಯಾಸ ಹಾಗೂ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಲೆ & ರೂಪಾಂತರಗಳು (Price & Variants): ಹೊಚ್ಚ ಹೊಸ ಹೋಂಡಾ ಅಮೇಜ್ (Honda Amaze) ಸೆಡಾನ್ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ. ಈ ಕಾರು, ರೂ.8 ಲಕ್ಷದಿಂದ ರೂ.10.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿ, ವಿಎಕ್ಸ್ ಮತ್ತು ಝಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ವಿನ್ಯಾಸ (Design): ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಹೊಸದಾದ ಬಂಪರ್‌ಗಳನ್ನು ಪಡೆದಿದೆ. ವಿನೂತನವಾದ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 15-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance): ನೂತನ ಹೋಂಡಾ ಅಮೇಜ್ ಸೆಡಾನ್ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18.65 ರಿಂದ 19.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಆಸನ ಆಯ್ಕೆ & ವೈಶಿಷ್ಟ್ಯಗಳು (Seating Capacity & Features): ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (8-ಇಂಚು), ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, 3 - ಸ್ಪೋಕ್ ಸ್ಟೀರಿಂಗ್ ವೀಲ್ ಹಾಗೂ ಪ್ಯಾಡಲ್ ಶಿಫ್ಟರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.

ಹೊಸ ಹೋಂಡಾ ಅಮೇಜ್ ಸೆಡಾನ್‌ನ ವಿತರಣೆಗಳು 2025ರ ಜನವರಿಯಿಂದ ಶುರುವಾಗಲಿದೆ. ಈ ಕಾರಿಗೆ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ನೇರ ಎದುರಾಳಿಯಾಗಿದೆ. ಇದರೊಟ್ಟಿಗೆ ಹ್ಯುಂಡೈ ಔರಾ (Hyundai Aura) ಮತ್ತು ಟಾಟಾ ಟಿಗೂರ್ (Tata Tigor) ಕಾರುಗಳು ಕೂಡ ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








