ಭಾರೀ ಮೈಲೇಜ್‌ನ ಫ್ಯಾಮಿಲಿ ಕಾರ್ ಆದ ಹ್ಯುಂಡೈ ಅಲ್ಕಾಜರ್ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೆ ಸಜ್ಜು!

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನವೀಕರಿಸಿದ ಅಲ್ಕಾಜರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಕಳೆದ ಬಾರಿ ನವೀಕರಣಗಳೊಂದಿಗೆ ಹ್ಯುಂಡೈ ಅಲ್ಕಾಜರ್ (Hyundai Alcazar) ಎಸ್‍ಯುವಿಯು ಪವರ್‌ಫುಲ್ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿತು. ಇದೀಗ ಈ ಎಸ್‍ಯುವಿಯು ಮತ್ತೊಂದು ಹೊಸ ನವೀಕರಣಕ್ಕೆ ಭರ್ಜರಿಯಾಗಿ ರೆಡಿಯಾಗುತ್ತಿದೆ.

ಈ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿ ಅದೇ ಹೊಸ 1.5-ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಸ್‍ಯುವಿಯಿಂದ ಹಿಂದಿನ ನವೀಕರಣದಲ್ಲಿ ಹಳೆಯ 2.0-ಲೀಟರ್ ನ್ಯಾಚುರಲ್-ಆಸ್ಪೈರರ್ಡ್ ಪೆಟ್ರೋಲ್ ಎಂಜಿನ್ ಅನ್ನು ತೆಗೆದು ಹಾಕಿದೆ. ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ವಿಪ್ರೆಸ್ಟೀಜ್ ಮತ್ತು ಪ್ಲಾಂಟಿನಮ್ 7-ಸೀಟರ್ ರೂಪಾಂತರಗಳನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ನೀಡಲಾಗಿದೆ.

2024 Hyundai Alcazar

ಈ ಎಸ್‍ಯುವಿಯ ಟಾಪ್-ಸ್ಪೆಕ್ ಪ್ಲಾಟಿನಂ (O) ಮತ್ತು ಸಿಗ್ನೇಚರ್ (O) ಆರು-ಆಸನಗಳ ಲೇಔಟ್‌ಗಳು ಮತ್ತು 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್‌ಬಾಕ್ಸ್‌ನೊಂದಿಗೆ ಬರುತ್ತವೆ. ಹೊಸ 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 158 bhp ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ 1.5 ಲೀಟರ್ ಪೆಟ್ರೋಲ್ ಎಂಜಿನ್ RDE (ರಿಯಲ್ ಡ್ರೈವಿಂಗ್ ಎಮಿಷನ್) ಕಂಪ್ಲೈಂಟ್ ಮತ್ತು E20 (ಎಥೆನಾಲ್) ಇಂಧನವನ್ನು ಸಹ ಬೆಂಬಲಿಸುತ್ತದೆ.

ಈ ಎಂಜಿನ್ ಆಯ್ಕೆಗಳಲ್ಲಿ 6-ಮ್ಯಾನುವಲ್ ಗೇರ್ ಬಾಕ್ಸ್ ಮತ್ತು ಹೊಸ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷನ್ ಮತ್ತು DCT ಆಗಿದೆ. ಈ ಎಂಜಿನ್ ಇಂಟಿಗ್ರೇಟೆಡ್ ಸ್ಟಾರ್ಟ್-ಸ್ಟಾಪ್ ಟೆಕ್ ಅನ್ನು ಸಹ ಪಡೆಯುತ್ತದೆ. DCT ಆವೃತ್ತಿಯು 18 ಕಿ.ಮೀ ಮೈಲೇಜ್ ನೀಡುತ್ತದೆ. ಇದರ ಮ್ಯಾನುವಲ್ ಆವೃತ್ತಿಯು 17.5 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ನೀಡಿದೆ.

2024 Hyundai Alcazar

ಈ ಎಂಜಿನ್ 115 bhp ಮತ್ತು 250 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಮಾದರಿಯು ಬಹುಶಃ 2024ರ ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸಬಹುದು.

2024ರ ಜೂನ್ ತಿಂಗಳಿನಲ್ಲಿ ಈ ಹೊಸ ಎಸ್‍ಯುವಿಯು ಬಿಡುಗಡೆಯಾಬಹುದು. 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯ ಪರೀಕ್ಷೆಯು ಸದ್ಯಕ್ಕೆ ನಡೆಯುತ್ತಿದೆ. ಹೊಸ ಅಲ್ಕಾಜರ್ ಎಸ್‍ಯುವಿಯು ರೋಡ್ ಟೆಸ್ಟ್ ನಡೆಸುತ್ತಿರುವುದು ಹಲವು ಬಾರಿ ಕಾಣಿಸಿಕೊಂಡಿದೆ. ಇದರ ಸ್ಪೈ ಚಿತ್ರಗಳು ಬಹಿರಂಗವಾಗಿತ್ತು. ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಮಾದರಿಯು ಮುಂಭಾಗದ ಫಾಸಿಕ ಮತ್ತು ಹಿಂಭಾಗದಲ್ಲಿ ವಿಶಿಷ್ಟವಾದ ಪ್ರೊಫೈಲ್ ಅನ್ನು ಹೊಂದಿರುತ್ತದೆ.

2024 Hyundai Alcazar

ಅಲ್ಕಾಜರ್ ಫೇಸ್‌ಲಿಫ್ಟ್ ಹೊಸ ಹೆಡ್‌ಲ್ಯಾಂಪ್‌ಗಳು ಮತ್ತು ಡಿಆರ್‌ಎಲ್‌ಗಳು, ರಿಫ್ರೆಶ್ಡ್ ಫ್ರಂಟ್ ಬಂಪರ್ ಮತ್ತು ಗ್ರಿಲ್, ಹೊಸ ಅಲಾಯ್ ವೀಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಳಿಗಾಗಿ ವಿಶಿಷ್ಟ ವಿನ್ಯಾಸವನ್ನು ಪಡೆಯಲು ನಿರೀಕ್ಷಿಸಬಹುದು. ಕೆಲವು ಹೊಸ ಬಾಹ್ಯ ಬಣ್ಣದ ಆಯ್ಕೆಗಳನ್ನು ಸೇರಿಸಬಹುದು. ಒಳಗಿನ ಬದಲಾವಣೆಗಳು ಹೊಸ ಕ್ರೆಟಾದಲ್ಲಿ ಕಂಡುಬರುವಂತೆಯೇ ಇರುತ್ತದೆ. ಅಲ್ಕಾಜರ್ ಫೇಸ್‌ಲಿಫ್ಟ್ ಡ್ಯುಯಲ್ 10.25-ಇಂಚಿನ ಮನಬಂದಂತೆ ಇಂಟಿಗ್ರೇಟೆಡ್ ಇನ್ಫೋಟೈನ್‌ಮೆಂಟ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಸ್ಕ್ರೀನ್‌ಗಳನ್ನು ಪಡೆಯುವ ನಿರೀಕ್ಷೆಯಿದೆ.

ಅಲ್ಕಾಜರ್ ಫೇಸ್‌ಲಿಫ್ಟ್‌ನೊಂದಿಗೆ ADAS ಫೀಚರ್ಸ್ ಹೊಂದಿರಲಿದೆ. ಈ ಹೊಸ ನವೀಕರಿಸಿದ ಎಸ್‍ಯುವಿಯಲ್ಲಿ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಇನ್ನು ಈ ಅಲ್ಕಾಜರ್ ಎಸ್‍ಯುವಿ ಮಾದರಿಯು 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC), ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್ (VSM), ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ (HAC) ಮತ್ತು ಎಲ್ಲಾ ವ್ಹೀಲ್ ಗಳಿಗೆ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.

Article Published On: Friday, May 17, 2024, 19:07 [IST]
English summary
2024 hyundai alcazar facelift launch soon details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+