2 ಕುಟುಂಬ ಪ್ರಯಾಣಿಸಬಹುದು: ಭಾರೀ ಮೈಲೇಜ್‌ನ ಫ್ಯಾಮಿಲಿ ಕಾರ್ ಹ್ಯುಂಡೈ ಅಲ್ಕಾಜರ್ ವಿಶೇಷತೆಗಳೇನು?

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ತನ್ನ ಬಹುನಿರೀಕ್ಷಿತ 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift ) ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಇದು 6 ಮತ್ತು 7-ಸೀಟರ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ. ಹೊಸ ಅಲ್ಕಾಜರ್ ಫೇಸ್‌ಲಿಫ್ಟ್‌ನ ಪೆಟ್ರೋಲ್ ರೂಪಾಂತರದ ಬೆಲೆಗಳು ರೂ 14.99 ಲಕ್ಷದಿಂದ ಪ್ರಾರಂಭವಾದರೆ, ಡೀಸೆಲ್ ರೂಪಾಂತರಗಳ ಪ್ರಾರಂಭಿಕ ಬೆಲೆಯು ರೂ.15.99 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಹ್ಯುಂಡೈ ಅಲ್ಕಾಜರ್ಎಸ್‍ಯುವಿಯು ರಿಫ್ರೆಶ್ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿವೆ.

ವಿನ್ಯಾಸ: 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಹೊರಭಾಗದಲ್ಲಿ ವಿನೂತನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಎಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಒಳಭಾಗದ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ.

Hyundai Alcazar Facelift

ಬಣ್ಣಗಳ ಆಯ್ಕೆ ಮತ್ತು ಆಯಾಮಗಳು: ಹೊಸ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್, ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ 9 ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಈ ಹೊಸ ಪ್ರೀಮಿಯಂ ಎಸ್‍ಯುವಿಯು 4,560 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,710 ಎಂಎಂ ಎತ್ತರವಿದ್ದು, 2,760 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಫೀಚರ್ಸ್: ನೂತನ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್‌, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 6 ಏರ್‌ಬ್ಯಾಗ್‌ನ್ನು ಪಡೆದಿದೆ. 6/7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಸಿಗುತ್ತದೆ.

Hyundai Alcazar Facelift

ಎಂಜಿನ್: ಹೊಸ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಮೊದಲಿಗೆ 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್ 158 ಬಿಹೆಚ್‍ಪಿ ಗರಿಷ್ಠ ಪವರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತಾದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 113 ಬಿಹೆಚ್‍ಪಿ ಗರಿಷ್ಠ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.

ಗೇರ್‌ಬಾಕ್ಸ್‌: ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಸ್ನೋ, ಮಡ್, ಮತ್ತು ಸ್ಯಾಂಡ್ ಹೆಸರಿನ 3 ಟ್ರಾಕ್ಷನ್ ಮೋಡ್‌ಗಳನ್ನು ಪಡೆದಿದ್ದು, ಸ್ಟಾರ್ಟ್/ ಸ್ಟಾಪ್ ಸಿಸ್ಟಮ್‌ಗಳನ್ನು ಒಳಗೊಂಡಿದೆ.

Hyundai Alcazar Facelift

ಮೈಲೇಜ್: ಪೆಟ್ರೋಲ್ ಎಂಜಿನ್ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮಾದರಿಯು 17.5 ಕಿ.ಮೀ ಮೈಲೇಜ್ ಮತ್ತು 7-ಸ್ಪೀಡ್ ಡಿಸಿಟಿ ಟ್ರಾನ್ಸ್‌ಮಿಷನ್ ಮಾದರಿಯು 18 ಕಿ.ಮೀ ಮೈಲೇಜ್ ಅನ್ನು ಹೊಂದಿದೆ. ಡೀಸೆಲ್ ಎಂಜಿನ್ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮಾದರಿಯು 20.4 ಕಿ.ಮೀ ಮೈಲೇಜ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಮಾದರಿಯು 18.1ಕಿ.ಮೀ ಮೈಲೇಜ್ ನೀಡುತ್ತದೆ.

ಸುರಕ್ಷರಾ ಫೀಚರ್ಸ್: ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯು ಸ್ಮಾರ್ಟ್ ಕ್ರೂಸ್ ಕಂಟ್ರೋಲ್, ಸರೌಂಡ್ ವ್ಯೂ ಮಾನಿಟರ್ (SVM), ಬ್ಲೈಂಡ್ ಸ್ಪಾಟ್ ವ್ಯೂ ಮಾನಿಟರ್ (BVM), ಫಾರ್ವರ್ಡ್ ಕೊಲಿಷನ್ ವಾರ್ನಿಂಗ್ ಮತ್ತು ಹುಂಡೈ ಸ್ಮಾರ್ಟ್‌ಸೆನ್ಸ್ ಲೆವೆಲ್ 2 ADAS ನಂತಹ 70 ಕ್ಕೂ ಹೆಚ್ಚು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದರೊಂದಿಗೆ ಸ್ಟ್ಯಾಂಡರ್ಡ್ ಸುರಕ್ಷತಾ ವೈಶಿಷ್ಟ್ಯಗಳು ಆರು ಏರ್‌ಬ್ಯಾಗ್‌ಗಳು, ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್, ಎಲ್ಲಾ ನಾಲ್ಕು ಡಿಸ್ಕ್ ಬ್ರೇಕ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (ಹೈಲೈನ್), ಡಿಜಿಟಲ್ ಕೀ, ಹಿಲ್ ಡಿಸೆಂಟ್ ಕಂಟ್ರೋಲ್ ಇತರವುಗಳಲ್ಲಿ ಸೇರಿವೆ.

Article Published On: Monday, September 9, 2024, 16:48 [IST]
English summary
2024 hyundai alcazar facelift suv top things
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+