2 ಕುಟುಂಬ ಪ್ರಯಾಣಿಸಬಹುದು: ಫ್ಯಾಮಿಲಿ ಕಾರ್ ಹ್ಯುಂಡೈ ಅಲ್ಕಾಜರ್ ಆಕ್ಸೆಸರೀಸ್ ಬಿಡುಗಡೆ
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ತನ್ನ ಬಹುನಿರೀಕ್ಷಿತ 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift ) ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಇದು 6 ಮತ್ತು 7-ಸೀಟರ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ. ಹೊಸ ಅಲ್ಕಾಜರ್ ಫೇಸ್‌ಲಿಫ್ಟ್‌ನ ಪೆಟ್ರೋಲ್ ರೂಪಾಂತರದ ಬೆಲೆಗಳು ರೂ 14.99 ಲಕ್ಷದಿಂದ ಪ್ರಾರಂಭವಾದರೆ, ಡೀಸೆಲ್ ರೂಪಾಂತರಗಳ ಪ್ರಾರಂಭಿಕ ಬೆಲೆಯು ರೂ.15.99 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ರಿಫ್ರೆಶ್ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿವೆ.
ಹ್ಯುಂಡೈ ಕಂಪನಿಯು ಅಲ್ಕಾಜರ್ ಎಸ್‌ಯುವಿಗೆ ವ್ಯಾಪಕ ಆಕ್ಸೆಸರೀಸ್ ಅನ್ನು ಪರಿಚಯಿಸಿದೆ. ಈ ಎಸ್‍ಯುವಿಗೆ ಲುಕ್‌ಗೆ ಮತ್ತು ಕೆಲವು ಪ್ರಾಯೋಗಿಕತೆಯನ್ನು ಹೆಚ್ಚಿಸಲು ಕೆಲವು 46 ಆಕ್ಸೆಸರೀಸ್ ವ್ಯಾಪಕ ಶ್ರೇಣಿಯನ್ನು ಹೊಂದಿದೆ. ಅಲ್ಕಾಜರ್ ಎಸ್‍ಯುವಿಯ ನಿರೀಕ್ಷಿತ ಖರೀದಿದಾರರು ಮೂರು ಆಕ್ಸೆಸರಿ ಪ್ಯಾಕೇಜ್‌ಗಳನ್ನು ಆಯ್ಕೆ ಮಾಡಬಹುದು. ಇದರಲ್ಲಿ ಬಹುಮುಖ ಪ್ಯಾಕ್ ಬೆಲೆ ರೂ.24,672 ಆದರೆ, ಸೌಂದರ್ಯದ ಉತ್ಸಾಹಿಗಳಿಗೆ ಅರ್ಬನಸ್ ಪ್ಯಾಕ್ ಬೆಲೆ ರೂ.16,114 ಮತ್ತು ವೆಂಚರಸ್ ಪ್ಯಾಕ್ ಬೆಲೆ ರೂ.18,262 ಆಗಿದೆ.

ಎಲ್ಲಾ ಆಕ್ಸೆಸರೀಸ್ ಗಳನ್ನು ಮೊಬಿಸ್ ಇಂಡಿಯಾ ವಿನ್ಯಾಸಗೊಳಿಸಿದೆ ಮತ್ತು ತಯಾರಿಸಿದೆ, ಇದು ಹೆಚ್ಚಿನ ಹ್ಯುಂಡೈ ವಾಹನಗಳಿಗೆ ಆಟೋಮೋಟಿವ್ ಭಾಗಗಳು ಮತ್ತು ಆಕ್ಸೆಸರೀಸ್ ಗಳನ್ನು ಉತ್ಪಾದಿಸುತ್ತದೆ. ಇವುಗಳನ್ನು ಅಧಿಕೃತ ಹ್ಯುಂಡೈ ಡೀಲರ್‌ಶಿಪ್‌ನಿಂದ ನೇರವಾಗಿ ಖರೀದಿಸಬಹುದು ಅಥವಾ ಹೊಸ ಅಲ್ಕಾಜರ್ ಅನ್ನು ಖರೀದಿಸುವಾಗ ಆರ್ಡರ್ ಮಾಡಬಹುದು.
ಹೊಸ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಹೊರಭಾಗದಲ್ಲಿ ವಿನೂತನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಎಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಒಳಭಾಗದ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ.

ಈ ಹೊಸ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್, ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ 9 ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಈ ಹೊಸ ಪ್ರೀಮಿಯಂ ಎಸ್‍ಯುವಿಯು 4,560 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,710 ಎಂಎಂ ಎತ್ತರವಿದ್ದು, 2,760 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಈ ಹೊಸ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 6 ಏರ್‌ಬ್ಯಾಗ್‌ನ್ನು ಪಡೆದಿದೆ. 6/7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಸಿಗುತ್ತದೆ.

ಹೊಸ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಮೊದಲಿಗೆ 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್ 158 ಬಿಹೆಚ್‍ಪಿ ಗರಿಷ್ಠ ಪವರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತಾದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 113 ಬಿಹೆಚ್‍ಪಿ ಗರಿಷ್ಠ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.
ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಸ್ನೋ, ಮಡ್, ಮತ್ತು ಸ್ಯಾಂಡ್ ಹೆಸರಿನ 3 ಟ್ರಾಕ್ಷನ್ ಮೋಡ್‌ಗಳನ್ನು ಪಡೆದಿದ್ದು, ಸ್ಟಾರ್ಟ್/ ಸ್ಟಾಪ್ ಸಿಸ್ಟಮ್‌ಗಳನ್ನು ಒಳಗೊಂಡಿದೆ.
ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯು ಸ್ಮಾರ್ಟ್ ಕ್ರೂಸ್ ಕಂಟ್ರೋಲ್, ಸರೌಂಡ್ ವ್ಯೂ ಮಾನಿಟರ್ (SVM), ಬ್ಲೈಂಡ್ ಸ್ಪಾಟ್ ವ್ಯೂ ಮಾನಿಟರ್ (BVM), ಫಾರ್ವರ್ಡ್ ಕೊಲಿಷನ್ ವಾರ್ನಿಂಗ್ ಮತ್ತು ಹುಂಡೈ ಸ್ಮಾರ್ಟ್‌ಸೆನ್ಸ್ ಲೆವೆಲ್ 2 ADAS ನಂತಹ 70 ಕ್ಕೂ ಹೆಚ್ಚು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








