2024 Hyundai Alcazar: ಬಹುನಿರೀಕ್ಷಿತ ಹ್ಯುಂಡೈ ಅಲ್ಕಾಜರ್ ಫ್ಯಾಮಿಲಿ ಕಾರು ಬಿಡುಗಡೆ.. ರೂ.14.99 ಲಕ್ಷ.. 7-ಸೀಟರ್!
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಹ್ಯುಂಡೈ ಕಂಪನಿಯು ಸೋಮವಾರ 2024ರ ನವೀಕರಿಸಿದ ಅಲ್ಕಾಜರ್ (Alcazar) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಬನ್ನಿ.. ಈ ಕಾರಿನ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯಗಳ (Features) ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ಬೆಲೆ: ನೂತನ ಹ್ಯುಂಡೈ ಅಲ್ಕಾಜರ್ (Hyundai Alcazar) ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಪೆಟ್ರೋಲ್ (Petrol) ಚಾಲಿತ ರೂಪಾಂತರ (ವೇರಿಯೆಂಟ್) ರೂ.14.99 ಲಕ್ಷ ಹಾಗೂ ಡೀಸೆಲ್ (Diesel) ಚಾಲಿತ ರೂಪಾಂತರ ರೂ.15.99 ಲಕ್ಷ ಎಕ್ಸ್ ಶೋರೂಂ ಆರಂಭಿಕ ಬೆಲೆಯನ್ನು ಪಡೆದಿದೆ.

ವಿನ್ಯಾಸ: ಈ ನವೀಕರಿಸಿದ ಅಲ್ಕಾಜರ್ ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಹೊರಭಾಗದಲ್ಲಿ ವಿನೂತನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಎಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಒಳಭಾಗದ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ.
ಹೊಸ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್, ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ 9 ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಜೊತೆಗೆ ಈ ಕಾರು 4,560 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,710 ಎಂಎಂ ಎತ್ತರವಿದ್ದು, 2,760 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ: ನೂತನ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್ 158 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 113 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿದೆ.
ಈ ಕಾರು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಸ್ನೋ, ಮಡ್, ಮತ್ತು ಸ್ಯಾಂಡ್ ಹೆಸರಿನ 3 ಟ್ರಾಕ್ಷನ್ ಮೋಡ್‌ಗಳನ್ನು ಪಡೆದಿದ್ದು, ಸ್ಟಾರ್ಟ್/ ಸ್ಟಾಪ್ ಸಿಸ್ಟಮ್‌ಗಳನ್ನು ಒಳಗೊಂಡಿದೆ.

ವೈಶಿಷ್ಟ್ಯಗಳು: ನೂತನ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 6 ಏರ್‌ಬ್ಯಾಗ್‌ನ್ನು ಪಡೆದಿದೆ. 6/7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಸಿಗುತ್ತದೆ.
ಪ್ರತಿಸ್ಪರ್ಧಿ ಕಾರುಗಳು: ಹ್ಯುಂಡೈ ಅಲ್ಕಾಜರ್ ಎಸ್‌ಯುವಿಗೆ ಸಾಲು ಸಾಲು ಎದುರಾಳಿಗಳಿವೆ. ಪ್ರಮುಖವಾಗಿ ಟಾಟಾ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ700, ಎಂಜಿ ಹೆಕ್ಟರ್, ಸಿಟ್ರನ್ ಸಿ3 ಏರ್‌ಕ್ರಾಸ್ ಮತ್ತು ಕಿಯಾ ಕ್ಯಾರೆನ್ಸ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.. ನೀವು ಹೊಚ್ಚ ಹೊಸ ಫ್ಯಾಮಿಲಿ (ಕುಟುಂಬ) ಕಾರನ್ನು ಖರೀದಿಸಲು ಯೋಚಿಸಿದ್ದರೆ, ಅಲ್ಕಾಜರ್ ಉತ್ತಮ ಆಯ್ಕೆಯಾಗಲಿದ್ದು, ಮುಂಬರುವ ಹಬ್ಬದ ಋತುವಿನಲ್ಲಿ ಈ ಕಾರಿಗೆ ದೊಡ್ಡಮಟ್ಟದಲ್ಲಿ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








