Hyundai: ಹ್ಯುಂಡೈ ಕ್ರೆಟಾಗಾಗಿ ಕ್ಯೂ ನಿಂತ ಗ್ರಾಹಕರು.. ಈ ಕಾರಿಗಾಗಿ ತಿಂಗಳುಗಟ್ಟಲೆ ಕಾಯಲೇಬೇಕು, ರೂ.11 ಲಕ್ಷ ಬೆಲೆ

ಭಾರತದ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಜನಪ್ರಿಯ ಎಸ್‌ಯುವಿಯಾಗಿದ್ದು, ದಿನದಿಂದ ದಿನಕ್ಕೆ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ನೀವು ಈ ಕಾರನ್ನು ಖರೀದಿಸಲು ಬಯಸಿದ್ದರೆ, ವಿತರಣೆಯನ್ನು ಪಡೆಯಲು ತಿಂಗಳುಗಟ್ಟಲೆ ಕಾಯಬೇಕು. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯ ಡೀಸೆಲ್ ಚಾಲಿತ ರೂಪಾಂತರ (ವೇರಿಯೆಂಟ್)ಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು 4 ರಿಂದ 5 ತಿಂಗಳು ಸಮಯಾವಕಾಶ ಬೇಕಾಗುತ್ತದೆ. ಅದೇ ರೀತಿಯಲ್ಲಿ 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳು 3 ರಿಂದ 5 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

2024 Hyundai Creta Facelift Cars Waiting Period Revealed Rs 11 Lakh Price 21 Km Mileage

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಕಾರು ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. ಅತ್ಯುತ್ತಮ ವಿನ್ಯಾಸವನ್ನು ಒಳಗೊಂಡಿರುವ ಈ ಕಾರು, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಫಿಯರಿ ರೆಡ್, ರೇಂಜರ್ ಖಾಕಿ ಬಣ್ಣಗಳೊಂದಿಗೂ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 144 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಶಕ್ತಿ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

2024 Hyundai Creta Facelift Cars Waiting Period Revealed Rs 11 Lakh Price 21 Km Mileage

ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ ಈ ಕಾರು, ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ, 7-ಸ್ಪೀಡ್ ಡಿಸಿಟಿ ಗೇರ್‌ ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳು 17.4-18.4 ಕೆಎಂಪಿಎಲ್ ಹಾಗೂ ಡೀಸೆಲ್ ಮಾದರಿಗಳು 19.1-21.8 ಮೈಲೇಜ್ ನೀಡುತ್ತವೆ.

ನೂತನ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯು ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇ, ಡುಯಲ್ ಝೋನ್ ಎಸಿ, ಸನ್‌ರೂಫ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

2024 Hyundai Creta Facelift Cars Waiting Period Revealed Rs 11 Lakh Price 21 Km Mileage

ಹ್ಯುಂಡೈ ಕ್ರೆಟಾಗೆ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಪೋಕ್ಸ್‌ವ್ಯಾಗನ್ ಟೈಗನ್ ಮತ್ತು ಹೋಂಡಾ ಎಲಿವೇಟ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಬಹುತೇಕರ ಕುಟುಂಬದ ಆಯ್ಕೆಯ ವಾಹನವಾಗಿದೆ ಎಂದು ಹೇಳಬಹುದು. ಮುಂಬರುವ ದಿನದಲ್ಲಿ ಮತ್ತಷ್ಟು ಬೇಡಿಕೆಯನ್ನು ಪಡೆದುಕೊಂಡರೂ ಅಚ್ಚರಿಯಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 16, 2024, 15:21 [IST]
English summary
2024 hyundai creta facelift cars waiting period revealed rs 11 lakh price 21 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+