11 ಲಕ್ಷಕ್ಕೆ ಪವರ್‌ಫುಲ್ ಡೀಸೆಲ್ ಕಾರು: 20 ಕಿ.ಮೀ ಮೈಲೇಜ್, 6 ಏರ್‌ಬ್ಯಾಗ್ ಜೊತೆಗೆ ಸನ್‌ರೂಫ್!
ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ (Hyundai) ತನ್ನ 2024ರ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಕಾರು 1.5 NA ಪೆಟ್ರೋಲ್ ಹಾಗೂ 1.5 ಟರ್ಬೋ ಸೇರಿದಂತೆ 1.5 ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
ಇದರ 1.5-ಲೀಟರ್ ಡಿಸೇಲ್ ಎಂಜಿನ್ 116 PS ಪವರ್, 250 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, 19.1 kmpl ನಿಂದ 21.8 kmpl ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ಬೇಸ್ ವೇರಿಯೆಂಟ್ ರೂ.11 ಲಕ್ಷದಿಂದ ಆರಂಭವಾಗಿ ಟಾಪ್ ವೇರಿಯೆಂಟ್ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ 10.25 - ಇಂಚಿನ ಡಿಸ್ಪ್ಲೇ, ಡುಯಲ್-ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಎಸ್‌ಯುವಿ, ಸುರಕ್ಷತೆಯ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು, 6 - ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS , 360-ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಫೀಚರ್ಸ್ ಮಾತ್ರವಲ್ಲದೇ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಕಾರು ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್, ಎಸ್ಎಕ್ಸ್(ಒ) ರೂಪಾಂತರಗಳು (Variants), ರೇಂಜರ್ ಖಾಕಿ, ಅಬಿಸ್ ಬ್ಲಾಕ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ ಸೇರಿದಂತೆ 6-ಮೊನೊಟೋನ್, 1-ಡುಯಲ್ ಟೋನ್ ಬಣ್ಣಗಳ ಆಯ್ಕೆಯನ್ನು ಸಿಗುತ್ತದೆ. ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್, ಹೆಚ್ಚಿನ ಸಂಖ್ಯೆಯಲ್ಲಿ ಯುವ ಗ್ರಾಹಕರನ್ನು ಸೆಳೆಯುವ ಸಲುವಾಗಿ ಆಕರ್ಷಕ ವಿನ್ಯಾಸವನ್ನು ಹೊಂದಿದೆ.
ಪ್ರಸ್ತುತ ಹೊಸ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಬುಕ್ ಮಾಡಿದ ಗ್ರಾಹಕರು ಪೆಟ್ರೋಲ್-ಚಾಲಿತ ಕ್ರೆಟಾಗಾಗಿ ಮೂರರಿಂದ ನಾಲ್ಕು ತಿಂಗಳವರೆಗೆ ಕಾಯುವ ಅವಧಿಯನ್ನು ಹೊಂದಿದ್ದರೇ, ಡೀಸೆಲ್ ರೂಪಾಂತರಗಳು 7 ತಿಂಗಳವರೆಗೆ ಕಾಯುವ ಅವಧಿಯನ್ನು ಹೊಂದಿದೆ. ಡೀಲರ್‌ಶಿಪ್, ವೇರಿಯೆಂಟ್, ಬಣ್ಣ, ಎಂಜಿನ್, ಟ್ರಾನ್ಸ್‌ಮಿಷನ್ ಮತ್ತು ಇತರ ಅಂಶಗಳನ್ನು ಅವಲಂಬಿಸಿ ಡೆಲಿವರಿ ಅವಧಿ ಬದಲಾಗಬಹುದು. ನಿಖರವಾದ ಮಾಹಿತಿಗಾಗಿ ನಿಮ್ಮ ಹತ್ತಿರದ ಅಧಿಕೃತ ಡೀಲರ್‌ಶಿಪ್‌ಗೆ ಭೇಟಿ ನೀಡಿ.

ಪೆಟ್ರೋಲ್ ಎಂಜಿನ್ ಆಯ್ಕೆಗಳು: ಇದರಲ್ಲಿ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 PS ಪವರ್ ಹಾಗೂ 144 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ವೀಡ್ ಮ್ಯಾನುವಲ್/ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಮತ್ತೊಂದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 PS ಗರಿಷ್ಠ ಪವರ್, 253 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಒಳಗೊಂಡಿದೆ.
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಪೆಟ್ರೋಲ್ ರೂಪಾಂತರಗಳು 17.4 kmpl ನಿಂದ 18.4 kmpl ಮೈಲೇಜ್ ನೀಡುತ್ತವೆ. ಈ ಹೊಸ ಎಸ್‍ಯುವಿಯ ಮುಂಭಾಗ ಎಲ್ ಆಕಾರದ ಎಲ್ಇಡಿ ಡಿಆರ್‌ಎಲ್, ನವೀನವಾದ ಎಲ್ಇಡಿ ಹೆಡ್‌ಲೈಟ್, ಹೊಸದಾದ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್ ಅನ್ನು ಪಡೆದಿದೆ. ಹಾಗೆಯೇ 17-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಸ್ ಒಳಗೊಂಡಿದೆ.


Click it and Unblock the Notifications