Kia: ಇನ್ನೋವಾ ಪ್ರತಿಸ್ಪರ್ಧಿ.. ನೂತನ ಕಿಯಾ ಕಾರ್ನಿವಲ್ ಫ್ಯಾಮಿಲಿ ಕಾರು ಬಿಡುಗಡೆ, 7-ಸೀಟರ್, 8 ಏರ್‌ಬ್ಯಾಗ್!

ದಕ್ಷಿಣ ಕೊರಿಯಾ ಮೂಲದ ಕಿಯಾ (Kia), ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. 2019ರಲ್ಲಿ ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿದ ಕಂಪನಿಯು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಸೋನೆಟ್, ಸೆಲ್ಟೋಸ್ ಹಾಗೂ ಇವಿ6 ಸೇರಿದಂತೆ ಹಲವು ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ, ಕಿಯಾ ಮೋಟಾರ್ಸ್ 7 ಆಸನದೊಂದಿಗೆ ಖರೀದಿಗೆ ದೊರೆಯುವ ಟೊಯೊಟಾ ಇನ್ನೋವಾ ಹೈಕ್ರಾಸ್, ನಿಸ್ಸಾನ್ ಎಕ್ಸ್-ಟ್ರಯಲ್ ಮತ್ತು ಮಾರುತಿ ಸುಜುಕಿ ಇನ್ವಿಕ್ಟೋಗೆ ಪ್ರಬಲವಾದ ಸ್ಪರ್ಧೆಯೊಡ್ಡಲು, ಹೊಸ ತಲೆಮಾರಿನ ಕಾರ್ನಿವಲ್ (New-Generation Carnival) ಎಂಪಿವಿಯನ್ನು ಬಿಡುಗಡೆಗೊಳಿಸಿದೆ.

ನವದೆಹಲಿಯಲ್ಲಿ ಇಂದು (ಗುರುವಾರ) ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನೂತನ ಕಿಯಾ ಕಾರ್ನಿವಲ್ (Kia Carnival) ಎಂವಿಪಿಯನ್ನು ಪರಿಚಯಿಸಲಾಗಿದೆ. ಈ ಫ್ಯಾಮಿಲಿ ಕಾರು ಕೊಂಚ ದುಬಾರಿ ದರವನ್ನು ಹೊಂದಿದ್ದು, ರೂ.63.90 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಮಾರಾಟಕ್ಕೆ ಬಂದಿದೆ. ಇದು ಲಿಮೋಸಿನ್ (Limousine) ಮತ್ತು ಲಿಮೋಸಿನ್ ಪ್ಲಸ್ (Limousine Plus) ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

2024 Kia Carnival Mpv Launched In India 7-Seater 8 Airbags ADAS And More Features

ಹಳೆಯ ಕಾರ್ನಿವಲ್‌ಗೆ ಹೋಲಿಕೆ ಮಾಡಿದರೆ, ಹೊಸ ತಲೆಮಾರಿನ ಎಂಪಿವಿ ಹೊರಭಾಗದ ವಿನ್ಯಾಸದಲ್ಲಿ (ಡಿಸೈನ್) ಹಲವು ಬದಲಾವಣಿಗಳನ್ನು ಪಡೆದುಕೊಂಡಿದೆ. ಹೊಸದಾಗಿರುವ ಗ್ರಿಲ್‌ನ್ನು ಹೊಂದಿದೆ. ಆಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ಎಲ್' ಆಕಾರಕ್ಕೆ ಹೋಲುವ ಎಲ್‌ಇಡಿ ಡಿಆರ್‌ಎಲ್‌ಗಳು, ಟೈಲ್‌ಗೇಟ್‌ನಲ್ಲಿ ಎಲ್ಇಡಿ ಲೈಟ್ ಬಾರ್, ವಿನೂತನವಾಗಿರುವ ಅಲಾಯ್ ವೀಲ್‌ಗಳು ಮತ್ತು ರೂಫ್ ರೈಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಶಾರ್ಕ್ ಫಿನ್ ಆಂಟೆನಾವನ್ನು ಪಡೆದಿದೆ.

ಈ ಕಿಯಾ ಕಾರ್ನಿವಲ್ ಎಂಪಿವಿ ಶಕ್ತಿಯುತ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌‌ನ್ನು ಒಳಗೊಂಡಿದೆ. ಇದು 197 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 440 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

2024 Kia Carnival Mpv Launched In India 7-Seater 8 Airbags ADAS And More Features

ನೂತನ ಕಾರಿನಲ್ಲಿ 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ (12.3-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 3-ಜೋನ್ ಕ್ಲೇಮೇಟ್ ಕಂಟ್ರೋಲ್, ಡುಯಲ್ ಸಿಂಗಲ್-ಪೇನ್ ಸನ್‌ರೂಫ್, 12-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಿಯಾ ಕಾರ್ನಿವಲ್ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 8-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

2024 Kia Carnival Mpv Launched In India 7-Seater 8 Airbags ADAS And More Features

ಒಟ್ಟಾರೆಯಾಗಿ ಹೊಸ ತಲೆಮಾರಿನ ಕಿಯಾ ಕಾರ್ನಿವಲ್ ಅದ್ಬುತವಾದ ಎಂಪಿವಿಯಾಗಿದೆ. ಈಗಾಗಲೇ, 2,796 ಹೆಚ್ಚು ಗ್ರಾಹಕರು ಈ ಕಾರನ್ನು ಬುಕ್ಕಿಂಗ್ ಮಾಡಿದ್ದಾರೆ. ಶೀಘ್ರದಲ್ಲಿಯೇ ಈ ಕಾರಿನ ವಿತರಣೆಗಳು ಕೂಡ ಶುರುವಾಗಲಿದೆ. ಮುಂಬರುವ ದಿನಗಳಲ್ಲಿ ನೂತನ ಕಾರ್ನಿವಲ್ ಎಂಪಿವಿ ದೇಶೀಯ ಗ್ರಾಹಕರಿಂದ ಯಾವ ರೀತಿಯ ಬೇಡಿಕೆ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, October 3, 2024, 13:44 [IST]
English summary
2024 kia carnival mpv launched in india 7 seater 8 airbags adas and more features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+