Kia Sonet: ಕಿಯಾ ಸೋನೆಟ್ ಫೇಸ್‌ಲಿಫ್ಟ್‌ ವಿಡಿಯೋ ರಿವ್ಯೂ, ಭರ್ಜರಿ ಗುರು!

ಜನಪ್ರಿಯ ಕಾರು ತಯಾರಕ ಕಂಪನಿ ಕಿಯಾ (Kia), ನವೀಕರಿಸಿದ ಸೋನೆಟ್ (Sonet Facelift) ಎಸ್‌ಯುವಿಯನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪರಿಚಯಿಸಿತ್ತು. ನೂತನ ಕಾರನ್ನು ಟೆಸ್ಟ್ ಡ್ರೈವ್ ನಡೆಸಲು ನಮ್ಮ ತಂಡಕ್ಕೆ ಅವಕಾಶ ದೊರೆಯಿತು. ಈ ಕಾರು, ವಿನ್ಯಾಸ ಮತ್ತು ವೈಶಿಷ್ಟ್ಯಗಳೆರಡರಲ್ಲೂ ಅತ್ಯುತ್ತಮವಾಗಿದ್ದು, ಬನ್ನಿ ಹೇಗಿದೆ ಎಂಬುದನ್ನು ತಿಳಿಯೋಣ.

ಹೊಸ ಕಿಯಾ ಸೋನೆಟ್ ಫೇಸ್‌ಲಿಫ್ಟ್‌ ಎಸ್‌ಯುವಿ, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 82 bhp ಪವರ್, 115 Nm ಪೀಕ್ ಟಾರ್ಕ್, ಮತ್ತೊಂದು 998 ಸಿಸಿ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್, 182 bhp ಗರಿಷ್ಠ ಪವರ್ ಹಾಗೂ 172 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ, 5-ಸ್ವೀಡ್ ಮ್ಯಾನುವಲ್ 6-ಸ್ವೀಡ್ ಐಎಂಟಿ, 7-ಸ್ವೀಡ್ ಡಿಸಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ ಪಡೆದಿದೆ.

ಈ ಕಾರಿನ 1.5-ಲೀಟರ್ ಟರ್ಬೊ ಡಿಸೇಲ್ ಎಂಜಿನ್ 114 bhp ಪವರ್ ಮತ್ತು 250 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಐಎಂಟಿ ಹಾಗೂ 6-ಸ್ವೀಡ್ ಟಾರ್ಕ್ ಕನ್ವರ್ಟರ್ ಆಟೋಮೆಟಿಕ್ ಟ್ರಾನ್ಸ್ಮಿಷನ್ (ಗೇರ್‌ಬಾಕ್ಸ್‌) ಆಯ್ಕೆಯಲ್ಲಿ ಹೊಂದಿದೆ. ಇದಕ್ಕೆ ಅನುಗುಣವಾಗಿ ಉತ್ತಮ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

ವಿನ್ಯಾಸದ ವಿಚಾರದಲ್ಲಿಯೂ ಕಿಯಾ ಸೋನೆಟ್ ಫೇಸ್‌ಲಿಫ್ಟ್‌ ಎಸ್‌ಯುವಿ ಅತ್ಯುತ್ತಮವಾಗಿದ್ದು, ಮುಂಭಾಗ ಹುಲಿಯ ಮೂಗಿನ (Tiger Nose) ಆಕಾರದ ಗ್ರೀಲ್, ನವೀನ 'ಕ್ರೌನ್ ಜ್ಯುವೆಲ್' ಎಲ್‌ಇಡಿ ಹೆಡ್‌ಲ್ಯಾಂಪ್‌, ಅತ್ಯಾಧುನಿಕ ಎಲ್ಇಡಿ ಡಿಆರ್‌ಎಲ್‌ ಹೊಂದಿದೆ. ಸೈಡ್ (ಬದಿ) ವಿನ್ಯಾಸ ಅಷ್ಟಾಗಿ ಬದಲಾಗಿಲ್ಲ. 16 - ಇಂಚಿನ ಡುಯಲ್-ಟೋನ್ ಅಲಾಯ್ ವೀಲ್ಸ್ ಅನ್ನು ಪಡೆದಿದ್ದು, ಹಿಂಭಾಗವು ಅತ್ಯಾಧುನಿಕವಾಗಿದೆ.

2024 Kia Sonet Facelift

ಈ ಕಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, 10.25 - ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ನವೀನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕಿಯಾ ಕನೆಕ್ಟ್ ಸೂಟ್‌, ಒಟಿಎ ಅಪ್ಡೇಟ್, ಸೆಂಟ್ರಲ್ ಏರ್ ವೆಂಟ್ಸ್, ಸ್ಮಾರ್ಟ್ ಏರ್ ಪ್ಯೂರಿಫೈಯರ್ ಸಿಸ್ಟಮ್, 4 - ವೇ ಪವರ್ ಡ್ರೈವರ್ ಸೀಟ್, 7 - ಸ್ಪೀಕರ್ ಪ್ರೀಮಿಯಂ ಆಡಿಯೊ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಕಿಯಾ ಸೋನೆಟ್ ಫೇಸ್‌ಲಿಫ್ಟ್‌ ಉತ್ತಮವಾಗಿದ್ದು, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್, ಫ್ರಂಟ್, ರೇರ್ ಪಾರ್ಕಿಂಗ್ ಸೆನ್ಸಾರ್ಸ್, 360-ಡಿಗ್ರಿ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಡಿಸ್ಕ್ ಬ್ರೇಕ್‌ ಹೊಂದಿದೆ. ಜೊತೆಗೆ ಅಪಘಾತವನ್ನು ತಡೆಯಲು ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 11, 2024, 10:23 [IST]
English summary
2024 kia sonet facelift suv review video
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+