ಹೊಸ ಮಾರುತಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನಲ್ಲಿಯೇ ಭಾರೀ ಮೈಲೇಜ್.. CNG ಕಾರುಗಳನ್ನು ಯಾರು ಕೊಳ್ಳುವರು?

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದ್ದು, ಇಲ್ಲಿಯವರೆಗೂ ದೇಶೀಯ ಮಾರುಕಟ್ಟೆಯಲ್ಲಿ ಯಾವುದೇ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಿಲ್ಲ. ಆದರೂ ಕಂಪನಿಯು ಸಾಂಪ್ರದಾಯಿಕ ಶೈಲಿಯ ಇಂಧನ ಚಾಲಿತ ಕಾರುಗಳ ಕಾರ್ಯಕ್ಷಮತೆಯಲ್ಲಿ ನಿರಂತರವಾಗಿ ಬದಲಾವಣೆಗಳನ್ನು ಮಾಡಿಕೊಂಡು ಬಂದಿದೆ.

ಪೆಟ್ರೋಲ್‌ನಂತೆ ಸಿಎನ್‌ಜಿ ವಿಭಾಗದಲ್ಲಿಯೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಅದಕ್ಕೆ ಸಾಕ್ಷಿ ಎಂಬಂತೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಸಿಎನ್‌ಜಿ ಚಾಲಿತ ಹ್ಯಾಚ್‌ಬ್ಯಾಕ್‌ ಹಾಗೂ ಎಸ್‌ಯುವಿಗಳನ್ನು ಕಂಪನಿಯು ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಹೊಚ್ಚ ಹೊಸ ನಾಲ್ಕನೇ ತಲೆಮಾರಿನ (Fourth Generation) 'ಸ್ವಿಫ್ಟ್‌' ಕಾರನ್ನು ಅದ್ದೂರಿಯಾಗಿ ಪರಿಚಯಿಸಿತ್ತು. ಇದು ಮೊದಲಿಗಿಂತಲೂ ಹೆಚ್ಚು ಆಕರ್ಷಕವಾದ ವಿನ್ಯಾಸ, ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆಯನ್ನು ಹೊಂದಿದೆ.

2024 Maruti Suzuki Swift Car Give 25 72 Km Mileage Best Option To Buy Rs 6 49 Lakh Starting Price

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಹ್ಯಾಚ್‌ಬ್ಯಾಕ್‌, 4-ಸಿಲಿಂಡರ್ ಬದಲಿಗೆ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿರುವುದರಿಂದ ಅಧಿಕ ಮೈಲೇಜ್ ನೀಡುತ್ತದೆ. ಸಾಮಾನ್ಯವಾಗಿ ಸಿಎನ್‌ಜಿ ಮಾದರಿಗಳು 1 ಕೆಜಿ ಇಂಧನ (ಫ್ಯುಯೆಲ್)ವನ್ನು ದಹಿಸಿ, ಸರಾಸರಿ 26 ರಿಂದ 34 ಕಿಲೋಮೀಟರ್ ಕ್ರಮಿಸಬಲ್ಲವು. ಆದರೆ, ಸ್ವಿಫ್ಟ್‌ ಕಾರು 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ತಲೆಮಾರಿನ ಸ್ವಿಫ್ಟ್‌ ಬೆಲೆ, ರೂಪಾಂತರಗಳು ಮತ್ತು ಬಣ್ಣಗಳು: ಈ ಹ್ಯಾಚ್‌ಬ್ಯಾಕ್‌ ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ರೂಪಾಂತರ (ವೇರಿಯೆಂಟ್)ಗಳು ಹಾಗೂ ಸಿಜ್ಲಿಂಗ್ ರೆಡ್, ಪರ್ಲ್, ಮ್ಯಾಗ್ಮಾ ಗ್ರೇ, ಆರ್ಕ್ಟಿಕ್ ವೈಟ್, ನಾವೆಲ್ ಆರೆಂಜ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

2024 Maruti Suzuki Swift Car Give 25 72 Km Mileage Best Option To Buy Rs 6 49 Lakh Starting Price

ವಿನ್ಯಾಸ ಹಾಗೂ ವೈಶಿಷ್ಟ್ಯಗಳು: ನೂತನ ಕಾರು ಅತ್ಯಾಧುನಿಕ ವಿನ್ಯಾಸ (ಡಿಸೈನ್)ವನ್ನು ಪಡೆದಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, 15-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಈ ಹ್ಯಾಚ್‌ಬ್ಯಾಕ್‌ ಬೆಲೆಗೆ ತಕ್ಕಂತೆ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. ಎಲ್ಲ ಮಾದರಿಗಳು 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್‌ನ್ನು ಪಡೆದಿವೆ.

2024 Maruti Suzuki Swift Car Give 25 72 Km Mileage Best Option To Buy Rs 6 49 Lakh Starting Price

ಸದ್ಯ ವಿವಿಧ ರಾಜ್ಯಗಳಲ್ಲಿ ಹೊಸ ಸ್ವಿಫ್ಟ್‌ ಕಾರಿನ ವಿತರಣೆಗಳು ಶುರುವಾಗಿದೆ ಎಂದು ತಿಳಿದುಬಂದಿದೆ. ಈ ಹ್ಯಾಚ್‌ಬ್ಯಾಕ್‌ ಸಿಎನ್‌ಜಿ ಚಾಲಿತ ಕಾರುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಹೆಚ್ಚಿನ ಮೈಲೇಜ್ ನೀಡುವ ಹಿನ್ನೆಲೆ ಗ್ರಾಹಕರಿಂದ ಕೂಡ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೊಡ್ಡಸಂಖ್ಯೆಯಲ್ಲಿ ಬುಕ್ಕಿಂಗ್‌ನ್ನು ಪಡೆದುಕೊಳ್ಳುತ್ತಿದೆ. ಮುಂಬರುವ ಹಬ್ಬಗಳ ಸೀಸನ್‌ನಲ್ಲಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ಗೆ ಮತ್ತಷ್ಟು ಬೇಡಿಕೆ ಬರಬಹುದು ಎಂದು ಅಂದಾಜಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 23, 2024, 11:09 [IST]
English summary
2024 maruti suzuki swift car give 25 72 km mileage best option to buy rs 6 49 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+