2024 Swift: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ.. ರೂ.6.49 ಲಕ್ಷ ಬೆಲೆ.. 6 ಏರ್‌ಬ್ಯಾಗ್, ಮತ್ತೇನು ವಿಶೇಷತೆಗಳು?

ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಗುರುವಾರ ಹೊಚ್ಚ ಹೊಸ 'ಸ್ವಿಫ್ಟ್‌' ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರೊಂದಿಗೆ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆ ಬಗ್ಗೆ ಸಂಪೂರ್ಣವಾದ ವಿವರ ಇಲ್ಲಿದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಕಾರು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ರೂಪಾಂತರ (ವೇರಿಯೆಂಟ್)ಗಳು ಮತ್ತು ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

2024 Maruti Suzuki Swift Car Launched In India Rs 6 49 Lakh Price 25 Km Mileag

ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಹೊಂದಿದೆ. ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ನವೀನವಾಗಿರುವ ಬಂಪರ್‌ಗಳು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಕ್ (ಕಪ್ಪು) ಬಣ್ಣದಲ್ಲಿರುವ ಗ್ರಿಲ್, ಎಲ್ಇಡಿ ಫಾಗ್ ಲೈಟ್‌ಗಳು, 15-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಸ್, ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ.

ಈ ಮಾರುತಿ ಸುಜುಕಿ ಸ್ವಿಫ್ಟ್ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 80 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

2024 Maruti Suzuki Swift Car Launched In India Rs 6 49 Lakh Price 25 Km Mileag

ನೂತನ ಹ್ಯಾಚ್‌ಬ್ಯಾಕ್‌ ಒಳಭಾಗವು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಈ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಮಾರುತಿ ಸುಜುಕಿ ಸ್ವಿಫ್ಟ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಎಲ್ಲ ಮಾದರಿಗಳು 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್‌ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಶೀಘ್ರದಲ್ಲಿಯೇ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗೂ ಒಳಪಡುವ ಸಾಧ್ಯತೆಯಿದೆ.

2024 Maruti Suzuki Swift Car Launched In India Rs 6 49 Lakh Price 25 Km Mileag

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ಹುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಕಾರುಗಳು ಪ್ರಬಲ ಎದುರಾಳಿಯಾಗಿವೆ. ಮೇ.1 ರಿಂದಲೇ ಈ ಕಾರಿನ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.11 ಸಾವಿರ ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು. ನೂತನ ಸ್ವಿಫ್ಟ್ ಭರಪೂರ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ದರದಲ್ಲಿ ಸಿಗುವುದರಿಂದ ಹಲವರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 9, 2024, 14:05 [IST]
English summary
2024 maruti suzuki swift car launched in india rs 6 49 lakh price 25 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+