Swift CNG: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಕಾರು ಬಿಡುಗಡೆ.. 33 ಕಿ.ಮೀ ಮೈಲೇಜ್, ಬೆಲೆ ಇಷ್ಟು ಕಡಿಮೆಯೇ?
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki India Limited - MSIL), ಈ ವರ್ಷದ ಮೇನಲ್ಲಿ ಪೆಟ್ರೋಲ್ ಚಾಲಿತ ಹೊಸ ತಲೆಮಾರಿನ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಪರಿಚಯಿಸಿತ್ತು. ಈ ಕಾರಿಗೆ ಗ್ರಾಹಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 4 ತಿಂಗಳಲ್ಲಿ ಬರೋಬ್ಬರಿ 67,000 ಯುನಿಟ್ ಮಾರಾಟವಾಗಿವೆ. ಸದ್ಯ, ಕಂಪನಿಯು ಸಿಎನ್‌ಜಿ ಚಾಲಿತ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ್ನು ಮಾರಾಟಕ್ಕೆ ತಂದಿದೆ. ಬನ್ನಿ.. ಈ ನೂತನ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾದ ವಿವರ ತಿಳಿಯೋಣ.
ನೂತನ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ (Maruti Suzuki Swift CNG) ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ರೂ.8.19 ಲಕ್ಷದಿಂದ ರೂ.9.19 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ವಿಎಕ್ಸ್ಐ, ವಿಎಕ್ಸ್ಐ (ಒ) ಮತ್ತು ಝಡ್ಎಕ್ಸ್ಐ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಖರೀದಿಗೆ ದೊರೆಯಲಿದ್ದು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಕಾರು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಹೊಂದಿದೆ. 69 ಪಿಎಸ್ ಗರಿಷ್ಠ ಅಶ್ವ ಶಕ್ತಿ (ಪವರ್) ಹಾಗೂ 102 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 32.85 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.
ನೂತನ ಸ್ವಿಫ್ಟ್ ಸಿಎನ್‌ಜಿ ಹ್ಯಾಚ್‌ಬ್ಯಾಕ್ ಪೆಟ್ರೋಲ್ ಚಾಲಿತ ಮಾದರಿಯಂತೆ ಬಹುತೇಕ ವಿನ್ಯಾಸ (ಡಿಸೈನ್) ಹಾಗೂ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ. ಈ ಸ್ವಿಫ್ಟ್ ಸಿಎನ್‌ಜಿ ಕಾರು ಸಹ 7-ಇಂಚಿನ ಸ್ಮಾರ್ಟ್ ಪ್ಲೇ ಪ್ರೊ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ರೇರ್ ಎಸಿ ವೆಂಟ್‌ಗಳನ್ನು ಪಡೆದಿದೆ.

ವಿಶೇಷವಾಗಿ ದೇಶದ ಕಾರು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಇಂಡಿಯಾ ಅತಿದೊಡ್ಡ ಸಿಎನ್‌ಜಿ ಪೋರ್ಟ್‌ಫೋಲಿಯೊವನ್ನು ಹೊಂದಿದೆ. ಕಂಪನಿ ಬಹುತೇಕ ಕಾರುಗಳು ಸಿಎನ್‌ಜಿ ಎಂಜಿನ್ ಚಾಲಿತವಾಗಿವೆ. ಅವುಗಳಲ್ಲಿ ಬ್ರೆಝಾ ಎಸ್‌ಯುವಿ, ಡಿಜೈರ್ ಸೆಡಾನ್ ಹಾಗೂ ಎರ್ಟಿಗಾ ಎಂಪಿವಿಗೆ ಹೆಚ್ಚಿನ ಬೇಡಿಕೆಯಿದೆ. 2024ರ ಆಗಸ್ಟ್‌ನಲ್ಲಿ ಮಾರುತಿ ಸುಜುಕಿ 49,602 ಯುನಿಟ್ ಸಿಎನ್‌ಜಿ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ.
2024ರ ಪೆಟ್ರೋಲ್ ಚಾಲಿತ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದು ರೂ.6.49 ಲಕ್ಷದಿಂದ ರೂ.9.59 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ 3 ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.8 - 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಪೆಟ್ರೋಲ್ ಚಾಲಿತ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕೂಡ 5 ಆಸನಗಳನ್ನು ಹೊಂದಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್ ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications