Swift: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಬುಕ್ಕಿಂಗ್‌ನಲ್ಲಿ ಸುನಾಮಿ.. ರೂ.6 ಲಕ್ಷದ ಈ ಕಾರಿಗಾಗಿ ಮುಗಿಬಿದ್ದ ಗ್ರಾಹಕರು!
ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಭರ್ಜರಿ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ನ್ನು ಗುರುವಾರ ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಕಳೆದ ವಾರದಿಂದಲೇ (ಮೇ.1) ಬುಕ್ಕಿಂಗ್‌ನ್ನು ಆರಂಭಿಸಿತ್ತು.
ಸದ್ಯ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರಿಗಾಗಿ ಗ್ರಾಹಕರು ಕೂಡ ಮುಗಿಬಿದ್ದಿದ್ದು, ತಾಮುಂದು, ನಾಮುಂದು ಎಂದು ಬುಕ್ಕಿಂಗ್ ಮಾಡುತ್ತಿದ್ದಾರೆ. ಕಂಪನಿಯು ಆರ್ಡರ್ ತೆಗೆದುಕೊಳ್ಳುವುದನ್ನು ಶುರು ಮಾಡಿದ 8 ದಿನಗಳಲ್ಲಿ 10,000ಕ್ಕೂ ಹೆಚ್ಚಿನ ಗ್ರಾಹಕರು ಈ ಕಾರನ್ನು ಕಾಯ್ದಿರಿಸಿದ್ದಾರೆ ಎಂಬ ವಿವರಗಳು ಲಭ್ಯವಾಗಿವೆ. ನೀವು ಸ್ವಿಫ್ಟ್‌ನ್ನು ಖರೀದಿಸಲು ಆಲೋಚಿಸಿದ್ದರೆ ರೂ.11,000 ಮೊತ್ತವನ್ನು ಮುಂಗಡವಾಗಿ ಪಾವತಿಸುವ ಮೂಲಕ ಬುಕ್ಕಿಂಗ್ ಮಾಡಬಹುದು.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್)ಗಳು ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಹ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಹೊಸ ಕಾರು ಅತ್ಯಾಧುನಿಕ ವಿನ್ಯಾಸ (ಡಿಸೈನ್)ವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬ್ಲ್ಯಾಕ್ (ಕಪ್ಪು) ಬಣ್ಣದಲ್ಲಿರುವ ಗ್ರಿಲ್, ಎಲ್ಇಡಿ ಫಾಗ್ ಲೈಟ್‌ಗಳು, 15 - ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಸ್, ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಜೊತೆಗೆ 2,450 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ 1.2 - ಲೀಟರ್ 3 - ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5 - ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್‌ನ್ನು ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಕಾರಾಗಿದ್ದರೂ ಉತ್ತಮವಾದ ಇಂಧನ ದಕ್ಷತೆಯನ್ನು ಒಳಗೊಂಡಿದ್ದು, 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.
ಮಾರುತಿ ಸುಜುಕಿ ಸ್ವಿಫ್ಟ್ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಹಾಗೂ 3 - ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಈ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ಹುಂಡೈ ಎಕ್ಸ್‌ಟರ್ ಹಾಗೂ ಟಾಟಾ ಪಂಚ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಗಳಾಗಿವೆ. ಜೂನ್‌ನಿಂದ ವಿತರಣೆಗಳು ಶುರುವಾಗಲಿದೆ ಎಂದು ವರದಿಯಾಗಿದೆ. ಬುಕ್ಕಿಂಗ್ ಆರಂಭವಾಗಿ ಕೆಲವೇ ದಿನಗಳಲ್ಲಿಯೇ ನೂತನ ಸ್ವಿಫ್ಟ್ ದೊಡ್ಡ ಪ್ರಮಾಣದಲ್ಲಿ ಆರ್ಡರ್ ಪಡೆದಿದ್ದು, ಹ್ಯಾಚ್‌ಬ್ಯಾಕ್ ಮೇಲೆ ಗ್ರಾಹಕರಿಗಿದ್ದ ನಿರೀಕ್ಷೆಗಳು ದುಪ್ಪಟಾಗಿವೆ. ಮುಂಬರುವ ದಿನಗಳಲ್ಲಿ ಭಾರೀ ಬೇಡಿಕೆ ಸೃಷ್ಟಿಯಾದರೂ ಅಚ್ಚರಿಯಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications