ಹೊಸ ಮಾರುತಿ ಕಾರಿಗೆ ಫುಲ್ ಡಿಮ್ಯಾಂಡ್: 8 ಲಕ್ಷ ಬೆಲೆ, 6 ಏರ್‌ಬ್ಯಾಗ್‌, 25 ಕಿ.ಮೀ ಮೈಲೇಜ್

ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಕಾರು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಬೆಂಗಳೂರಿನಲ್ಲಿ ಇದರ ಆನ್‌ರೋಡ್‌ ಬೆಲೆಯ ವಿಚಾರಕ್ಕೆ ಬಂದರೆ ಬೇಸ್ ವೇರಿಯೆಂಟ್ (ಆರಂಭಿಕ ರೂಪಾಂತರ) 'ಎಲ್ಎಕ್ಸ್ಐ' ರೂ.7.86 ಲಕ್ಷ, 'ವಿಎಕ್ಸ್ಐ' ರೂ.8.82 ಲಕ್ಷ, 'ಝಡ್ಎಕ್ಸ್ಐ' ರೂ.10.02 ಲಕ್ಷ ಮತ್ತು ಟಾಪ್ ಎಂಡ್ ಮಾಡೆಲ್ (ಗರಿಷ್ಠ ಶ್ರೇಣಿ) ಆಗಿರುವ 'ಝಡ್ಎಕ್ಸ್ಐ ಪ್ಲಸ್' ಎಎಂಟಿ ಡಿಟಿ ರೂ.11.63 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ಸುಧಾರಿತ ಮೈಲೇಜ್: ಈ ಮಾರುತಿ ಸುಜುಕಿ ಸ್ವಿಫ್ಟ್ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 80 ಪಿಎಸ್ ಗರಿಷ್ಠ ಪವರ್ ಹಾಗೂ 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

2024-maruti-suzuki-swift-price-features-emi-details

ಸುರಕ್ಷತೆ: ಹೊಸ ಜೆನ್ ಮಾರುತಿ ಸುಜುಕಿ ಸ್ವಿಫ್ಟ್ನಲ್ಲಿ ಮೊದಲಿಗಿಂತ ಸುರಕ್ಷತೆ ಹೆಚ್ಚಿಸಲಾಗಿದ್ದು, ಎಲ್ಲ ಮಾದರಿಗಳು 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್‌ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಹಣಕ್ಕೆ ತಕ್ಕ ಮೌಲ್ಯವಿದೆಯೇ?: ನಮಗೆ ತಿಳಿದುರುವಂತೆ ಈ ಬೆಲೆಗೆ ಇಷ್ಟು ಫೀಚರ್‌ಗಳನ್ನು ಒಳಗೊಂಡಿರುವ ಬೆಸ್ಟ್ ಹ್ಯಾಚ್‌ಬ್ಯಾಕ್ ಎಂದೇ ಹೇಳಬಹುದು. ಕಾರೆಂದರೆ ಕೇವಲ ಡಿಸೈನ್, ಫೀಚರ್ಸ್, ಮೈಲೇಜ್ ಮಾತ್ರವಲ್ಲ ಗುಣಮಟ್ಟ ಕೂಡ ಮುಖ್ಯವಾಗಿರುವ ಕಾರಣ ಸುರಕ್ಷತಾ ರೇಟಿಂಗ್ ಬರುವವರೆಗು ಕಾಯಬೇಕಿದೆ. ಒಟ್ಟಾರೆ ಸಿಟಿ ಡ್ರೈವ್‌ಗೆ ಇದು ಉತ್ತಮ ಕಾರೆಂದು ಹೇಳಬಹುದು.

2024-maruti-suzuki-swift-price-features-emi-details

ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ, ಖರೀದಿಸಿದರೆ ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.12,404 ಇಎಂಐ (EMI) ಕಟ್ಟಬೇಕು. ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಜೊತೆಗೆ ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್‌ಗೆ ಹುಂಡೈ ಎಕ್ಸ್‌ಟರ್ ಹಾಗೂ ಟಾಟಾ ಪಂಚ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆಗಳು ಮತ್ತು ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

2024-maruti-suzuki-swift-price-features-emi-details

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್‌, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್, ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, June 9, 2024, 14:00 [IST]
English summary
2024 maruti suzuki swift price features emi details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+