ಹೊಸ ಮಾರುತಿ ಸ್ವಿಫ್ಟ್‌ ಬದಲಿಗೆ ಬಲೇನೋ ಯಾಕೆ ಬೆಸ್ಟ್‌?: ಪವರ್‌ ಮತ್ತು ಮೈಲೇಜ್‌ನಲ್ಲಿ ಬಲೇನೋ ಟಾಪ್‌!

ನಿಮಗೆಲ್ಲಾ ತಿಳಿದಿರುವಂತೆ ಬಹು ನಿರೀಕ್ಷಿತ ಮಾರುತಿ ಸುಜುಕಿ ಸ್ವಿಫ್ಟ್ 2024 ಕೆಲ ದಿನಗಳ ಹಿಂದೆಯಷ್ಟೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಹೊಸ ಎಂಜಿನ್ ಮತ್ತು ಇತರ ಫೀಚರ್‌ ಜೊತೆ ಬಂದಿರುವ ಈ ಕಾರು ಕಳೆದ ಬಾರಿಯ ಸ್ವಿಫ್ಟ್‌ಗಿಂತ ಬೆಲೆಯೂ ಕೊಂಚ ಹೆಚ್ಚಾಗಿರುವುದು ಎಲ್ಲರಿಗೂ ತಿಳಿದಿದೆ.

ಇಂತಹ ಸಂಧರ್ಭದಲ್ಲಿ ಈ ಕಾರಿನ ಬದಲಿಗೆ ಯಾವ ಕಾರು ಕೊಳ್ಳಬಹುದು ಎಂಬುದಕ್ಕೆ ಇಲ್ಲಿದೆ ಉತ್ತರ. ಹಲವರಿಗೆ ಹೊಸ ಮಾರುತಿ ಸುಜುಕಿ ಕಾರಿನ ಡಿಸೈನ್‌ ಇಷ್ಟವಾಗಿಲ್ಲ ಎನ್ನಲಾಗುತ್ತಿದೆ. ಇದಕ್ಕಿಂತಲೂ ಕಳೆದ ಬಾರಿಯ ಸ್ವಿಫ್ಟ್ ಕೊಂಚ ಹೆಚ್ಚು ಚೆನ್ನಾಗಿತ್ತು ಎಂಬ ಮಾತುಗಳಿದೆ. ಈ ಬಾರಿಯ ಸ್ವಿಫ್ಟ್‌ನ ಎಂಜಿನ್‌ ಬದಲಾಗಿದ್ದು, 4 ಸಿಲಿಂಡರ್‌ ಬದಲಾಗಿ ಮೂರು ಸಿಲಿಂಡರ್‌ ಜೊತೆ ಬಂದಿದ್ದು, ಪವರ್‌ ಕೊಂಚ ಕಡಿಮೆಯಾಗಿದೆ.

2024 Maruti Suzuki Swift VS Maruti Suzuki Baleno Price Engine And Power Comparison

ಇನ್ನು ಹೊಸ ಮಾರುತಿ ಸುಜುಕಿ ಕಾರಿನ ಬೆಲೆಗೆ ಮಾರುತಿಯ ಮತ್ತೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿರುವ ಬಲೇನೋ ಸಹ ದೊರೆಯುತ್ತದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಬಲೆನೊ ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ ಮತ್ತು ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರೈಂಡರ್ ಗ್ರೇ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರ (ವೇರಿಯೆಂಟ್)ಗಳು ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಹ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

2024 Maruti Suzuki Swift VS Maruti Suzuki Baleno Price Engine And Power Comparison

ಮಾರುತಿ ಬಲೆನೋ ಮತ್ತು ಮಾರುತಿ ಸ್ವಿಫ್ಟ್ (2024 Maruti Suzuki Swift) ಕಾರುಗಳ ಬೆಲೆಯಲ್ಲಿ ಕೆಲವೇ ಕೆಲವು ಸಾವಿರ ರೂಗಳಷ್ಟು ಮಾತ್ರವೇ ಅಂತರವಿದೆ. ಆದರೆ ನಿಮಗೆ ಬಲೇನೋ ಕಾರು ಸ್ವಿಫ್ಟ್‌ಹಿಂತ ಹೆಚ್ಚು ಪ್ರೀಮಿಯಂ ಆಗಿದ್ದು, ಹಲವಾರು ಫೀಚರ್‌ಗಳು ಸಹ ನಿಮಗೆ ಈ ಕಾರಿನಲ್ಲಿ ಲಭ್ಯವಾಗಲಿದೆ. ಮುಖ್ಯವಾಗಿ ಈ ಕಾರಿನ ಎಂಜಿನ್‌ ಮತ್ತು ಪವರ್‌ ವಿಭಾಗದ ಕುರಿತು ನೋಡುವಾಗ ನಮಗೆ ಅದರ ವ್ಯತ್ಯಾಸ ತಿಳಿಯುತ್ತದೆ.

ಮಾರುತಿ ಬಲೇನೋ 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಇಂಧನ ದಕ್ಷತೆ ಕುರಿತು ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 22.35 ಕೆಎಂಪಿಎಲ್ - 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

2024 Maruti Suzuki Swift VS Maruti Suzuki Baleno Price Engine And Power Comparison

ಈ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ 1.2 - ಲೀಟರ್ 3 - ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5 - ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ ಬಾಕ್ಸ್‌ನ್ನು ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಕಾರಾಗಿದ್ದರೂ ಉತ್ತಮವಾದ ಇಂಧನ ದಕ್ಷತೆಯನ್ನು ಒಳಗೊಂಡಿದ್ದು, 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಬಲೆನೊ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 4-ಸ್ಪೀಕರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಹಾಗೂ 3 - ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.

Article Published On: Monday, May 13, 2024, 16:53 [IST]
English summary
2024 maruti suzuki swift vs maruti suzuki baleno price engine and power comparison
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+