7-ಸೀಟರ್.. 8.49 ಲಕ್ಷ ಬೆಲೆ.. ಈ ಜನಪ್ರಿಯ ಕಾರು ಸೋಮವಾರವಷ್ಟೇ ಬಿಡುಗಡೆ, ನೀವು ತಿಳಿದುಕೊಳ್ಳಬೇಕಾದ ವಿಚಾರಗಳಿವು!
ಫ್ರಾನ್ಸ್ ಮೂಲದ ಸಿಟ್ರನ್ (Citroen) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಿ3 (C3), ಬಸಾಲ್ಟ್ (Basalt), ಇಸಿ3 (eC3) ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಸೋಮವಾರ 2024ರ ನವೀಕರಿಸಿದ ಸಿ3 ಏರ್‌ಕ್ರಾಸ್ (C3 Aircross) ಫ್ಯಾಮಿಲಿ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ನಾವಿಲ್ಲಿ ಈ ನೂತನ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆ ಕುರಿತ ಪ್ರಮುಖಾಂಶಗಳನ್ನು ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಬೆಲೆ: ಹೊಸ ಸಿಟ್ರನ್ ಸಿ3 ಏರ್‌ಕ್ರಾಸ್ (Citroen C3 Aircross), ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ರೂ.8.49 ಲಕ್ಷದಿಂದ ರೂ.13.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಯು, ಪ್ಲಸ್ ಮತ್ತು ಮ್ಯಾಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಈ ಕಾರಿನ ಬುಕ್ಕಿಂಗ್ ಕೂಡ ಶುರುವಾಗಿದ್ದು, ಅಕ್ಟೋಬರ್ 8 ರಿಂದ ವಿತರಣೆಗಳು ಆರಂಭವಾಗಲಿದೆ.

ವಿನ್ಯಾಸ: ನೂತನ ಸಿಟ್ರನ್ ಸಿ3 ಏರ್‌ಕ್ರಾಸ್ ಕಾರಿನ ವಿನ್ಯಾಸದಲ್ಲಿ (ಡಿಸೈನ್) ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಇದು ನವೀನವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು 17-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ವಿಶೇಷವಾಗಿ 5 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಲಭ್ಯವಿದೆ. ವಾರಾಂತ್ಯ ಹಾಗೂ ರಜಾದಿನಗಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 511 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ: ಈ ಕಾರು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ (ವೇರಿಯೆಂಟ್) 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. 18 ರಿಂದ 19 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ವೈಶಿಷ್ಟ್ಯಗಳು: ನೂತನ ಸಿಟ್ರನ್ ಸಿ3 ಏರ್‌ಕ್ರಾಸ್ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು (ಫೀಚರ್) ಪಡೆದಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾಗಳನ್ನು ಪಡೆದಿದೆ.
ಒಟ್ಟಾರೆಯಾಗಿ, 'ಸಿಟ್ರನ್ ಸಿ3 ಏರ್‌ಕ್ರಾಸ್' ಫ್ಯಾಮಿಲಿ ಕಾರನ್ನು ಹುಡುಕುತ್ತಿರುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿದೆ. ಇದು ಅತ್ಯಂತ ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಸಹ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು, ಮುಂಬರುವ ದಿನಗಳಲ್ಲಿ ಯಾವ ರೀತಿಯ ಬೇಡಿಕೆ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








