Maruti Dzire: ಶೋರೂಂಗೆ ಬಂದೇ ಬಿಡ್ತು 5-ಸ್ಟಾರ್ ಸೇಫ್ಟಿಯ ಹೊಸ ಮಾರುತಿ ಡಿಜೈರ್.. ಬೆಲೆ ಎಷ್ಟು, ಮೈಲೇಜ್ ಏನು?

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಮನೆ ಮಾತಾಗಿದೆ. ನವೆಂಬರ್ 11 ರಂದು ಎದುರಾಳಿ ಕಂಪನಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು 4ನೇ ತಲೆಮಾರಿನ ನೂತನ ಡಿಜೈರ್ (4th Generation Dzire) ಸೆಡಾನ್‌ನ್ನು ಮಾರಾಟಕ್ಕೆ ತಂದಿತ್ತು. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 'ಗ್ಲೋಬಲ್ ಎನ್‌ಸಿಎಪಿ' ಕೂಡ ಹೊಸ ಡಿಜೈರ್‌ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ.

ಸದ್ಯ, ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್‌ನ್ನು ಕಂಪನಿಯು ತಲುಪಿಸುವುದಕ್ಕೆ ಶುರು ಮಾಡಿದೆ ಎಂದು ವರದಿಯಾಗಿದೆ. ಈ ಡಿಜೈರ್ ಕಾರು, ಕನಿಷ್ಠ ರೂ.6.79 ಲಕ್ಷ ಹಾಗೂ ಗರಿಷ್ಠ ರೂ.10.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈಗಾಗಲೇ ಬುಕ್ಕಿಂಗ್ ಪ್ರಾರಂಭವಾಗಿದ್ದು, ಆಸಕ್ತ ಖರೀದಿದಾರರು ರೂ.11,000 ಮುಂಗಡವಾಗಿ ಪಾವತಿಸುವ ಮೂಲಕ ನೂತನ ಡಿಜೈರ್‌ನ್ನು ಆರ್ಡರ್ ಮಾಡಬಹುದು.

2024 New Maruti Suzuki Dzire Sedan Starts Reaching Dealerships Price Mileage Features Details

ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ 4 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ & ಬ್ಲ್ಯೂಯಿಷ್ ಬ್ಲಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಗ್ರಾಹಕರ ಖರೀದಿಗೆ ಸಿಗುತ್ತದೆ.

ನೂತನ ಡಿಜೈರ್ ಕಾರು, ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. 2,450 ಸೆ.ಮೀ ಉದ್ದದ ವೀಲ್‌ಬೇಸ್‌ನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್‌ನ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.

2024 New Maruti Suzuki Dzire Sedan Starts Reaching Dealerships Price Mileage Features Details

ಈ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಶಕ್ತಿಯುತವಾಗಿರುವ 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ಕೊಡುತ್ತದೆ.

ಹೊಸ ಮಾರುತಿ ಡಿಜೈರ್ ಕಾರು ಹಲವು ನವೀನ ವೈಶಿಷ್ಟ್ಯಗಳನ್ನು (ಫೀಚರ್) ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಸನ್‌ರೂಫ್, ಆಟೋ ಎಸಿ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

2024 New Maruti Suzuki Dzire Sedan Starts Reaching Dealerships Price Mileage Features Details

ನೂತನ ಡಿಜೈರ್ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದ್ದು, ಗ್ಲೋಬಲ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುವ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಈ ಕಾರು, ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.

ಇನ್ನು, ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಡೀಲರ್‌ಶಿಪ್‌ಗಳಿಗೆ ಆಗಮಿಸುತ್ತಿರುವುದು ಗ್ರಾಹಕರಿಗೆ ಖುಷಿ ತಂದಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಕೆಲವೇ ದಿನಗಳಲ್ಲಿ ಈ ಕಾರಿನ ವಿತರಣೆ ಶುರುವಾಗಲಿದೆ. ಆ ಬಳಿಕ ಹೊಸ ಕಾರಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, November 13, 2024, 12:24 [IST]
English summary
2024 new maruti suzuki dzire sedan starts reaching dealerships price mileage features details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+