2024 Swift: ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ ಕಾರಿನ ವಿತರಣೆ ಆರಂಭ.. ಖುಷಿಯಲ್ಲಿ ಕುಟುಂಬ!

ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಜನಪ್ರಿಯತೆಯನ್ನು ಗಳಿಸಿದೆ. ಕಳೆದ ಗುರುವಾರ (ಮೇ.9) ದೇಶೀಯ ಮಾರುಕಟ್ಟೆಯಲ್ಲಿ ನೂತನ 'ಸ್ವಿಫ್ಟ್‌' ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಸದ್ಯ, ಈ ಕಾರಿನ ವಿತರಣೆಯು ಶುರುವಾಗಿದೆ ಎಂಬ ವಿವರಗಳು ಲಭಿಸಿವೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಹ್ಯಾಚ್‌ಬ್ಯಾಕ್‌ನ್ನು ಕುಟುಂಬವೊಂದಕ್ಕೆ ಡಿಲೆವರಿ ಮಾಡಲಾಗಿದ್ದು, ಶೋರೂಂ ಸಿಬ್ಬಂದಿಗಳು ಈ ಕಾರಿನ ಕೀಯನ್ನು ಹಸ್ತಾಂತರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿವೆ. ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕೂಡ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ಗಳ ವಿತರಣೆ ಆರಂಭವಾಗಿದೆ ಎಂದು ವರದಿಯಾಗಿದೆ.

2024 New Maruti Suzuki Swift Deliveries Begin Car Price Rs 6 49 Lakh 25 Km Mileage

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ ಕಾರಿನ ಬುಕ್ಕಿಂಗ್‌ನಲ್ಲಿಯೂ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದೆ. ಮೇ.1ರಿಂದ ಕಂಪನಿಯು ಈ ಹ್ಯಾಚ್‌ಬ್ಯಾಕ್‌ಗಾಗಿ ಆರ್ಡರ್ ತೆಗೆದುಕೊಳ್ಳುವುದನ್ನು ಪ್ರಾರಂಭಿಸಿತ್ತು. ಕೇವಲ 8 ದಿನಗಳಲ್ಲಿ 10,000ಕ್ಕೂ ಹೆಚ್ಚಿನ ಗ್ರಾಹಕರು ಸ್ವಿಫ್ಟ್‌ ಕಾರನ್ನು ಕಾಯ್ದಿರಿಸಿದ್ದರು. ಈಗಲೂ ಬುಕ್ಕಿಂಗ್ ಮಾಡಲು ಅವಕಾಶವಿದ್ದು, ಆಸಕ್ತ ಖರೀದಿದಾರರು ರೂ.11,000 ಹಣವನ್ನು ಮುಂಗಡವಾಗಿ ಪಾವತಿಸುವ ಮೂಲಕ ಆರ್ಡರ್ ಮಾಡಬಹುದು.

ದೇಶೀಯವಾಗಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಸ್ವಿಫ್ಟ್‌ ಕಾರು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ರೂಪಾಂತರ (ವೇರಿಯೆಂಟ್)ಗಳು ಹಾಗೂ ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಸಿಜ್ಲಿಂಗ್ ರೆಡ್ ನಾವೆಲ್ ಆರೆಂಜ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಓಡಾಟವನ್ನು ನಡೆಸಬಹುದು.

2024 New Maruti Suzuki Swift Deliveries Begin Car Price Rs 6 49 Lakh 25 Km Mileage

ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ ಕಾರು ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ನವೀಕೃತ ಬಂಪರ್‌ಗಳು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, 15 - ಇಂಚಿನ ಅಲಾಯ್ ವೀಲ್ಸ್, ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ.

ಈ ಸ್ವಿಫ್ಟ್ ಕಾರು 1.2 - ಲೀಟರ್ 3 - ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5 - ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಇಂಧನ ದಕ್ಷತೆ (Fuel efficiency) ವಿಚಾರಕ್ಕೆ ಬರುವುದಾದರೆ, 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್ 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌,ಅನ್ನು ಪಡೆದಿದೆ. ಈ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಪ್ರಬಲ ಪ್ರತಿಸ್ಫರ್ಧಿಗಳಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 14, 2024, 15:23 [IST]
English summary
2024 new maruti suzuki swift deliveries begin car price rs 6 49 lakh 25 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+