Dzire - Kylaq: ವಾರದ ಅಂತರದಲ್ಲಿ 2 ಹೊಸ ಕಾರುಗಳು ಮಾರಾಟಕ್ಕೆ ಬಂದಿವೆ.. 5-ಸೀಟರ್, ಭರ್ಜರಿ ಫೀಚರ್‌ಗಳು!

ಪ್ರಪಂಚದಲ್ಲಿ ಭಾರತ ಅತಿ ದೊಡ್ಡದಾದ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ವಿವಿಧ ಕಂಪನಿಗಳ ಹೊಸ-ಹೊಸ ಕಾರುಗಳು ಮಾರಾಟಕ್ಕೆ ಬರುತ್ತಿರುತ್ತವೆ. ಈ ನವೆಂಬರ್ ವಾಹನ ತಯಾರಕ ಕಂಪನಿಗಳಿಗೆ ಮಹತ್ವದ ತಿಂಗಳಾಗಿದ್ದು, ಬಹುನೀರಿಕ್ಷಿತ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್‌ ಹಾಗೂ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿಗಳು ಬಿಡುಗಡೆಯಾಗಿವೆ. ಈ ಕಾರುಗಳು ಒಂದಕ್ಕಿಂತ ಒಂದು ಅದ್ಭುತವಾಗಿದ್ದು, ಗ್ರಾಹಕರನ್ನು ಸೆಳೆಯುತ್ತಿವೆ. ಬನ್ನಿ.. ಈ ಕಾರುಗಳ ಬೆಲೆ ಮತ್ತು ವಿಶೇಷತೆಗಳ ಕುರಿತಂತೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮೊದಲಿಗೆ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ ಬಗ್ಗೆ ಮಾತನಾಡೋಣ. ಈ ಕಾರು, ರೂ.6.79 ಲಕ್ಷದಿಂದ ರೂ.10.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಎಲ್ಎಕ್ಸ್ಐ ಮತ್ತು ವಿಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.

2024 November First 15 Days Two New Cars Launched Maruti Suzuki Dzire And Skoda Kylaq Details

ನೂತನ ಮಾರುತಿ ಡಿಜೈರ್ ಕಾರು 1.2-ಲೀಟರ್ 3-ಸಿಲಿಂಡರ್ ಝಡ್ ಸೀರೀಸ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5-ಜನರು ಓಡಾಟ ನಡೆಸಬಹುದು.

ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಸೆಂಟರ್ ಆರ್ಮ್‌ರೆಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

2024 November First 15 Days Two New Cars Launched Maruti Suzuki Dzire And Skoda Kylaq Details

ಸ್ಕೋಡಾ ಕೈಲಾಕ್ ಎಸ್‌ಯುವಿ ಕುರಿತಂತೆ ಹೇಳುವುದಾದರೆ, ಇದು ರೂ.7.89 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇದು ಕೂಡ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 446 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನೂತನ ಸ್ಕೋಡಾ ಕೈಲಾಕ್ ಕಾರು 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 115 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 178 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

ಈ ಕೈಲಾಕ್ ಎಸ್‌ಯುವಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಇನ್ಸ್ಟ್ರುಮೆಂಟ್ ಪ್ಯಾನೆಲ್ (8-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಒಟ್ಟಾರೆಯಾಗಿ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ ಮತ್ತು ಸ್ಕೋಡಾ ಕೈಲಾಕ್ ಎಸ್‌ಯುವಿಗಳು ಒಂದಕ್ಕಿಂತ ಒಂದು ಉತ್ತಮವಾಗಿವೆ. ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ಮಾರಾಟಕ್ಕೆ ಬಂದಿರುವುದರಿಂದ ಬಹುತೇಕರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಮುಂಬರುವ ದಿನಗಳಲ್ಲಿ ಈ ಕಾರುಗಳಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, November 17, 2024, 9:00 [IST]
English summary
2024 november first 15 days two new cars launched maruti suzuki dzire and skoda kylaq details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+