2024ರ ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಜಬರ್ದಸ್ತ್ ಕಾರುಗಳಿವು.. ಗ್ರಾಹಕರು ಮುಗಿಬೀಳುವುದು ಪಕ್ಕಾ!

ಪ್ರಪಂಚದಲ್ಲಿಯೇ ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆ, ಈ ಅಕ್ಟೋಬರ್ ತಿಂಗಳು ಕಾರು ತಯಾರಕ ಕಂಪನಿಗಳಿಗೆ ತುಂಬಾ ಮಹತ್ವವೆನಿಸಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಹಲವು ಇಂಧನ ಹಾಗೂ ವಿದ್ಯುತ್ ಚಾಲಿತ ಕಾರುಗಳು ಮಾರಾಟಕ್ಕೆ ಬಂದವು. ಪ್ರಮುಖವಾಗಿ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಎಸ್‌ಯುವಿ, ಕಿಯಾ ಕಾರ್ನಿವಲ್ ಎಂಪಿವಿ (Kia Carnival) ಹಾಗೂ ಬಿವೈಡಿ ಇಮ್ಯಾಕ್ಸ್ 7 (BYD eMax 7) ಎಂಪಿವಿಗಳು ಬಿಡುಗಡೆಯಾಗಿದ್ದವು. ಬನ್ನಿ.. ಈ ಕಾರುಗಳ ವಿಶೇಷತೆ ಕುರಿತಂತೆ ಒಂದಷ್ಟು ಮಾಹಿತಿ ತಿಳಿಯೋಣ.

ಮೊದಲಿಗೆ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಗ್ಗೆ ಮಾತನಾಡೋಣ. ಇದೊಂದು ಎಸ್‌ಯುವಿಯಾಗಿದ್ದು, ಕನಿಷ್ಠ ರೂ..5.99 ಲಕ್ಷ ಹಾಗೂ ಗರಿಷ್ಠ ರೂ.11.50 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ವಿಸಿಯಾ, ವಿಸಿಯಾ ಪ್ಲಸ್ ಹಾಗೂ ಅಸೆಂಟಾ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

2024 October Famous Cars Launched Nissan Magnite Facelift Kia Carnival BYD eMAX 7

ಈ ಮ್ಯಾಗ್ನೈಟ್ ಕಾರು, ಶಕ್ತಿಯುತವಾಗಿರುವ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಸರಿ ಸುಮಾರು 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ (7-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 4-ಕಲರ್ ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

2024 October Famous Cars Launched Nissan Magnite Facelift Kia Carnival BYD eMAX 7

ಹೊಸ ಕಿಯಾ ಕಾರ್ನಿವಲ್ (Kia Carnival) ಎಂವಿಪಿ ಕುರಿತಂತೆ ಹೇಳುವುದಾದರೆ, ಇದು ರೂ.63.90 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 2.2-ಲೀಟರ್ ಡೀಸೆಲ್ ಎಂಜಿನ್‌‌ ಮತ್ತು 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. ಈ ಕಾರಿನಲ್ಲಿ 7-ಮಂದಿ ಸುಲಭವಾಗಿ ದೂರದ ಊರುಗಳಿಗೆ ಪ್ರಯಾಣಿಯಬಹುದು.

ಈ ಕಿಯಾ ಕಾರ್ನಿವಲ್ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ (12.3-ಇಂಚು), 3-ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು 12-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 8-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

2024 October Famous Cars Launched Nissan Magnite Facelift Kia Carnival BYD eMAX 7

ಕಡೆಯದಾಗಿ ಬಿವೈಡಿ ಇಮ್ಯಾಕ್ಸ್ (BYD eMAX 7) ಎಲೆಕ್ಟ್ರಿಕ್ ಎಂಪಿವಿ ಬಗ್ಗೆ ಮಾತನಾಡುವುದಾದರೆ, ಈ ಕಾರು ಕನಿಷ್ಠ ರೂ.26.90 ಲಕ್ಷ ಹಾಗೂ ಗರಿಷ್ಠ ರೂ.29.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 55.4 ಮತ್ತು 71.8 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 420 ರಿಂದ 530 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

ನೂತನ ಬಿವೈಡಿ ಇಮ್ಯಾಕ್ಸ್ ಎಂಪಿವಿಯಲ್ಲಿ 6 ಅಥವಾ 7 ಆಸನದೊಂದಿಗೆ ಲಭ್ಯವಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 6-ಸ್ಪೀಕರ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, November 1, 2024, 13:57 [IST]
English summary
2024 october famous cars launched nissan magnite facelift kia carnival byd emax 7
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+