2024 Tata Punch: ಸದ್ದಿಲ್ಲದೇ ಟಾಟಾ ಪಂಚ್ ಫೇಸ್‌ಲಿಫ್ಟ್ ಕಾರು ಬಿಡುಗಡೆ.. 6 ಲಕ್ಷ, 5-ಸೀಟರ್.. ಹೊಸ ವೈಶಿಷ್ಟ್ಯಗಳೇನು?

ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್ 2ರಂದು ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಹೊಸ ಕರ್ವ್ (Curvv) ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರನ್ನು ಪರಿಚಯಿಸಿ ಸರಿಯಾಗಿ 15 ಕಳೆದಿದೆ. ಇದೀಗ ಕಂಪನಿಯು ಸದ್ದಿಲ್ಲದೇ ಒಂದಷ್ಟು ನವೀಕರಣಗಳೊಂದಿಗೆ ಪಂಚ್ ಫೇಸ್‌ಲಿಫ್ಟ್ (Punch Facelift) ಎಸ್‌ಯುವಿಯನ್ನು ಮಾರಾಟಕ್ಕೆ ತಂದಿದೆ. ಬನ್ನಿ.. ಈ ಕಾರಿನ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯಗಳ (Features) ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ಬೆಲೆ & ರೂಪಾಂತರಗಳು: ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ರೂ.6.12 ಲಕ್ಷದಿಂದ ರೂ.9.45 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಪ್ಯೂರ್, ಪ್ಯೂರ್ (ಒ), ಕ್ರಿಯೇಟಿವ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್ ಎಸ್, ಅಡ್ವೆಂಚರ್ ಹಾಗೂ ಅಡ್ವೆಂಚರ್ ಎಸ್ ಸೇರಿದಂತೆ ಒಟ್ಟು 10 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಿದೆ.

2024 Tata Punch Facelift Launched In India Rs 6 12 Lakh Starting Price Details

ಕಾರ್ಯಕ್ಷಮತೆ: 2024ರ ನವೀಕರಿಸಿದ ಟಾಟಾ ಪಂಚ್ ಫೇಸ್‌ಲಿಫ್ಟ್ ಕಾರು ಹಳೆಯ ಪಂಚ್‌ನಂತೆ 1.2-ಲೀಟರ್ 3-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 87 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಈ ಹೊಸ ಎಸ್‌ಯುವಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿಯೂ ಲಭ್ಯವಿದೆ. ಇದರಲ್ಲಿ 5-ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಜೊತೆಗೆ ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ವಿಶಾಲವಾದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

2024 Tata Punch Facelift Launched In India Rs 6 12 Lakh Starting Price Details

ವೈಶಿಷ್ಟ್ಯಗಳು: ಟಾಟಾ ಪಂಚ್ ಫೇಸ್‌ಲಿಫ್ಟ್ ರೂಪಾಂತರಗಳಿಗೆ ಅನುಗುಣವಾಗಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ. ಬೃಹತ್ ಗಾತ್ರದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಚಾರ್ಜರ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ರೇರ್ ಎಸಿ ವೆಂಟ್‌ಗಳು ಎಲೆಕ್ಟ್ರಿಕ್ ಸನ್‌ರೂಫ್‌ನ್ನು ಹೊಂದಿದೆ.

ಪ್ರತಿಸ್ಪರ್ಧಿ ಕಾರುಗಳು: ಈ ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿಗೆ ಹುಂಡೈ ಎಕ್ಸ್‌ಟರ್ ಹಾಗೂ ಸಿಟ್ರನ್ ಸಿ3 ಕಾರುಗಳು ನೇರ ಎದುರಾಳಿಯಾಗಿವೆ. 2025ರ ಹಣಕಾಸು ವರ್ಷದಲ್ಲಿ ದೇಶದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಕಾರು ಎಂಬ ಹೆಗ್ಗಳಿಕೆಗೂ ಟಾಟಾ ಪಂಚ್ ಪಾತ್ರವಾಗಿದೆ. 2024ರ ಆಗಸ್ಟ್‌ವರೆಗೆ ಬರೋಬ್ಬರಿ 4 ಲಕ್ಷ ಯುನಿಟ್ ಪಂಚ್ ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿದೆ. ಮುಂಬರುವ ದಸರಾ ಹಾಗೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನೂತನ ಕಾರಿಗೆ ಹೆಚ್ಚಿನ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

2024 Tata Punch Facelift Launched In India Rs 6 12 Lakh Starting Price Details

ಟಾಟಾ ಪಂಚ್ ಇವಿಯೂ ಖರೀದಿಗೆ ಲಭ್ಯ: ಟಾಟಾ ಪಂಚ್ ಎಲೆಕ್ಟ್ರಿಕ್ ರೂಪದಲ್ಲಿಯೂ ಖರೀದಿಗೆ ಲಭ್ಯವಿದೆ. ಇದು ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ) ದರವನ್ನು ಹೊಂದಿದೆ. 25 ಮತ್ತು 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 265 ರಿಂದ 365 ಕಿಲೋಮೀಟರ್ ಓಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 17, 2024, 16:43 [IST]
English summary
2024 tata punch facelift launched in india rs 6 12 lakh starting price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+