Tata Punch: ಶೋರೂಂಗೆ ಬಂತು ಹೊಸ ಟಾಟಾ ಪಂಚ್ ಕಾರು: ಬಿಡುಗಡೆಯಾಗಿ ವಾರವಷ್ಟೇ.. 6 ಲಕ್ಷ, 5-ಸೀಟರ್!

ಟಾಟಾ ಮೋಟಾರ್ಸ್ (Tata Motors) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಒಂದರಂತೆ ಒಂದರ ಮೇಲೆ ಹಲವು ಕಾರುಗಳನ್ನು ಮಾರಾಟಕ್ಕೆ ತರುತ್ತಿದೆ. ಕಳೆದ ಮಂಗಳವಾರ (ಸೆಪ್ಟೆಂಬರ್ 17) ಒಂದಷ್ಟು ನವೀಕರಣಗಳನ್ನು ಪಡೆದುಕೊಂಡಿರುವ ಪಂಚ್ ಫೇಸ್‌ಲಿಫ್ಟ್ (Punch Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಸದ್ಯ, ಈ ಕಾರು ದೇಶಾದ್ಯಂತ ಹಲವು ಡೀಲರ್‌ಶಿಪ್‌ಗಳನ್ನು ತಲುಪಲು ಶುರುವಾಗಿದ್ದು, ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕೆಲವೇ ದಿನಗಳಲ್ಲಿ ವಿತರಣೆ ಕೂಡ ಆರಂಭವಾಗುವ ನಿರೀಕ್ಷೆಯಿದೆ.

ಹೊಚ್ಚ ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಕಾರು ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ. ಇದು ರೂ.6.12 ಲಕ್ಷದಿಂದ ರೂ.9.45 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. ಪ್ಯೂರ್, ಪ್ಯೂರ್ (ಒ), ಕ್ರಿಯೇಟಿವ್ ಪ್ಲಸ್, ಅಕಾಂಪ್ಲಿಶ್ಡ್ ಪ್ಲಸ್ ಎಸ್, ಅಡ್ವೆಂಚರ್ ಮತ್ತು ಅಡ್ವೆಂಚರ್ ಎಸ್, ಅಡ್ವೆಂಚರ್ ರಿದಮ್ ಒಳಗೊಂಡಂತೆ 10 ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.

2024 Tata Punch Facelift Reaching Dealerships Delivery Soon 6 Lakh 5 Seater

ಈ ಕಾರು, ಶಕ್ತಿಯುತವಾಗಿರುವ 1.2-ಲೀಟರ್ 3-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 87 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿ ಫ್ಯಾಕ್ಟರಿ-ಫಿಟೆಡ್ ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. ಈ ಕಾರಿನಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗುವಾಗ ಸ್ವಲ್ಪ ಹೆಚ್ಚಿನ ಲಗೇಜ್ ಕೊಂಡೊಯ್ಯಲು 366 ಲೀಟರ್‌ನ ಬೂಟ್ ಸ್ಪೇಸ್‌ನ್ನು ಪಡೆದಿದೆ.

2024 Tata Punch Facelift Reaching Dealerships Delivery Soon 6 Lakh 5 Seater

ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿ ರೂಪಾಂತರಗಳನ್ನು ಅವಲಂಭಿಸಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ವೈರ್‌ಲೆಸ್ ಚಾರ್ಜರ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಡುಯಲ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, 4 ಸ್ಪೀಕರ್‌ಗಳು, ರೇರ್ ಎಸಿ ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್‌ ಸೇರಿದಂತೆ ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಮೋಟಾರ್ಸ್, ಇಂದು (ಸೆಪ್ಟೆಂಬರ್ 24) ನೆಕ್ಸಾನ್ ಸಿಎನ್‌ಜಿ ಹಾಗೂ ದೊಡ್ಡ ಗ್ರಾತ್ರದ ಬ್ಯಾಟರಿ ಪ್ಯಾಕ್‌ನೊಂದಿಗೆ ಮೇಲ್ದರ್ಜೆಗೇರಿಸಲಾದ ನೆಕ್ಸಾನ್‌ ಇವಿಯನ್ನು ಮಾರಾಟಕ್ಕೆ ತಂದಿದೆ. ಟಾಟಾ ನೆಕ್ಸಾನ್ ಸಿಎನ್‌ಜಿ ಕಾರು ರೂ.8.99 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಹಾಗೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24 ಕೆಎಂ/ಕೆಜಿ ಸಹ ಮೈಲೇಜ್ ಕೊಡುತ್ತದೆ ಎಂದು ವರದಿಯಾಗಿದೆ.

2024 Tata Punch Facelift Reaching Dealerships Delivery Soon 6 Lakh 5 Seater

ಇನ್ನು, ಬೃಹತ್ ಗಾತ್ರದ 45 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ 'ನೆಕ್ಸಾನ್‌ ಇವಿ' ರೂ.13.99 ಲಕ್ಷದಿಂದ ರೂ.16.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇದೇ ಬ್ಯಾಟರಿಯನ್ನು ಪಡೆದಿರುವ 'ನೆಕ್ಸಾನ್‌ ಇವಿ ರೆಡ್ ಡಾರ್ಕ್ ಎಡಿಷನ್' ರೂ.17.19 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇವೆರಡು ಮಾದರಿಗಳು ಸಂಪೂರ್ಣ ಚಾರ್ಜ್‌ನಲ್ಲಿ 489 ಕಿಲೋಮೀಟರ್​ವರೆಗೆ ಓಡುತ್ತವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 24, 2024, 17:41 [IST]
English summary
2024 tata punch facelift reaching dealerships delivery soon 6 lakh 5 seater
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+