Tata: ಹೊಸ ವೈಶಿಷ್ಟ್ಯಗಳನ್ನು ಪಡೆದ ಟಾಟಾ ಟಿಯಾಗೊ ಇವಿ.. ಏನದು?
ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ (Tata Motors) ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿದೆ. ಕಂಪನಿ ಮಾರಾಟಗೊಳಿಸುವ ಟಿಯಾಗೊ ಇವಿ (Tiago EV)ಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಸದ್ಯ ಇದೇ ಕಾರಿನ ಟಾಪ್ ಎಂಡ್ (ಗರಿಷ್ಠ ಶ್ರೇಣಿ) ಮಾದರಿಗಳು ನವೀನ ವೈಶಿಷ್ಟ್ಯವನ್ನು ಪಡೆದಿವೆ.
ಟಾಟಾ ಟಿಯಾಗೊ ಇವಿ (2024) ಹೊಸ ರೀತಿಯ ವೈಶಿಷ್ಟ್ಯ (Features)ಗಳನ್ನು ಹೊಂದಿದೆ. ಆದರೆ ಯಾವುದೇ ರೀತಿಯ ಬೆಲೆ ಏರಿಕೆಯನ್ನು ಪಡೆದುಕೊಂಡಿಲ್ಲ. ಎಕ್ಸ್‌ಝಡ್ ಪ್ಲಸ್ ಟೆಕ್ ಎಲ್‌ಯುಎಕ್ಸ್ ಲಾಂಗ್ ರೇಂಜ್ ಆವೃತ್ತಿ ಆಟೋ ಡಿಮ್ಮಿಂಗ್ ಐಆರ್‌ವಿಎಂ (Auto-Dimming IRVM) ಅನ್ನು ಪಡೆದಿದ್ದರೆ, ಎಕ್ಸ್‌ಝಡ್ ಪ್ಲಸ್ ರೇಂಜ್, ಎಕ್ಸ್‌ಝಡ್ ಪ್ಲಸ್ ಟೆಕ್ ಎಲ್‌ಯುಎಕ್ಸ್ ರೂಪಾಂತರಗಳಲ್ಲಿ ಮುಂಭಾಗದ ಪ್ರಯಾಣಿಕರಿಗಾಗಿ ಫಾಸ್ಟ್ ಚಾರ್ಜಿಂಗ್ ಪೋರ್ಟ್ ನೀಡಲಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ ಇವಿ (Tata Tiago EV) ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ವಿನ್ಯಾಸದ ವಿಚಾರದಲ್ಲೂ ಈ ಕಾರು ಅತ್ಯುತ್ತಮವಾಗಿದ್ದು, ಸಿಗ್ನೇಚರ್ ಟೀಲ್ ಬ್ಲೂ, ಡೇಟೋನಾ ಗ್ರೇ, ಟ್ರಾಪಿಕಲ್ ಮಿಸ್ಟ್, ಪ್ರಿಸ್ಟಿನ್ ವೈಟ್ ಹಾಗೂ ಮಿಡ್‌ನೈಟ್ ಪ್ಲಮ್ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು.
ಈ ಕಾರಿನಲ್ಲಿ 19.2 ಕೆಡಬ್ಲ್ಯೂಹೆಚ್ (kWh) ಮತ್ತು 24 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಉಪಯೋಗ ಮಾಡಲಾಗಿದೆ. ಚಿಕ್ಕದಾದ ಬ್ಯಾಟರಿಯಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್, 61 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 110 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ದೊಡ್ಡದಾದ ಬ್ಯಾಟರಿ ಹೊಂದಿರುವ ಕಾರಿನ ಎಲೆಕ್ಟ್ರಿಕ್ ಮೋಟಾರ್, 75 ಪಿಎಸ್ ಪವರ್ ಮತ್ತು 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಟಾಟಾ ಟಿಯಾಗೊ ಇವಿ ರೂಪಾಂತರಗಳು ಬ್ಯಾಟರಿ ಪ್ಯಾಕ್ ಗೆ ಅನುಗುಣವಾಗಿ ಭರ್ತಿ ಚಾರ್ಜ್ ನಲ್ಲಿ 250 ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತವೆ. ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಈ ಕಾರಿನ ಬ್ಯಾಟರಿ ಶೇಕಡ 10 ರಿಂದ 80% ಚಾರ್ಜ್ ಆಗಲು ಕೇವಲ 57 ನಿಮಿಷ ಸಾಕು. 15ಎ ಸಾಕೆಟ್ ಚಾರ್ಜರ್ ಊಪಯೋಗ ಮಾಡಿದಾಗ ಸುಮಾರು 8 ಗಂಟೆಗಳಲ್ಲಿ ಚಾರ್ಜ್ ಆಗುತ್ತದೆ.
ಟಾಟಾ ಟಿಯಾಗೊ ಇವಿ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಪಡೆದಿದ್ದು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, ರೈನ್ ಸೆನ್ಸಿಂಗ್ ವೈಪರ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್ ಕ್ಯಾಮೆರಾವನ್ನು ಹೊಂದಿದೆ. ಟಾಟಾ ಟಿಯಾಗೊ ಇವಿಗೆ ಸಿಟ್ರಸ್ ಇಸಿ3 ಮತ್ತು ಎಂಜಿ ಕಾಮೆಟ್ ಇವಿಗಳು ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications