2024ರಲ್ಲಿ ಬಿಡುಗಡೆಗೊಂಡ ಜರ್ಬದಸ್ತ್ ಎಲೆಕ್ಟ್ರಿಕ್ ಕಾರುಗಳು: ಕಡಿಮೆ ಬೆಲೆ, ಲಕ್ಷುರಿ ಫೀಚರ್ಸ್
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಕಂಪನಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌ಯುವಿ ಹಾಗೂ ಎಂಪಿವಿಗಳನ್ನು ಮಾರಾಟ ಮಾಡುತ್ತಿವೆ. ಅದರಲ್ಲೂ ಟಾಟಾ, ಮಾರುತಿ ಸುಜುಕಿ ಹಾಗೂ ಮಹೀಂದ್ರಾ ಸೇರಿದಂತೆ ವಿವಿಧ ಕಾರು ತಯಾರಕರಿಗೆ ಈ ವರ್ಷ ಹೆಚ್ಚು ಮಹತ್ವದಾಗಿದೆ. ಇತ್ತೀಚೆಗೆ ಎಲ್ಲ ಪ್ರಮುಖ ಜನಪ್ರಿಯ ವಾಹನ ತಯಾರಕರು ಎಲೆಕ್ಟ್ರಿಕ್ ಕಾರುಗಳಿಗೆ (Electric car) ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ. ಈ ವರ್ಷ ಹಲವು ಜನಪ್ರಿಯ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೊಂಡಿದ್ದು, ಇವುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಟಾಟಾ ಪಂಚ್ ಇವಿ: ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ಬ್ನ ನಾಲ್ಕನೇ ಎಲೆಕ್ಟ್ರಿಕ್ ಮಾದರಿಯಾಗಿ ಪಂಚ್ ಇವಿ ಮಾದರಿಯನ್ನು ಭಾರತದಲ್ಲಿ ಈ ವರ್ಷ ಬಿಡುಗಡೆಗೊಳಿಸಿತು. ಈ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಈ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನಲ್ಲಿ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ಲಭ್ಯವಿರುತ್ತದೆ.

ಈ ಎಲೆಕ್ಟ್ರಿಕ್ ಕಾರಿನಲ್ಲಿ 25 kWh ಮತ್ತು 35 kWh ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. ಇದರಲ್ಲಿ 25 kWh ಬ್ಯಾಟರಿ ಪ್ಯಾಕ್ ಸಂಪೂರ್ಣವಾಗಿ ಚಾರ್ಜ್ ಮಾಡಿದರೆ 315 ಕಿ.ಮೀ ರೇಂಜ್ ನೀಡುತ್ತದೆ. ಇನ್ನು 35 kWh ಬ್ಯಾಟರಿ ಪ್ಯಾಕ್ 421 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಮಿಡ್ ರೇಂಜ್ ಮಾದರಿಯು 80bhp ಮತ್ತು 114Nm ಟಾರ್ಕ್ ಅನ್ನು ಉತ್ಪಾದಿಸಿದರೆ, ಲಾಂಗ್ ರೇಂಜ್ ಮಾದರಿಯು 120bhp ಮತ್ತು 190Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಹೆಚ್ಚುವರಿಯಾಗಿ, ಬ್ರ್ಯಾಂಡ್ ಎರಡು ಚಾರ್ಜರ್ ಆಯ್ಕೆಗಳನ್ನು ನೀಡೀದು, 7.2 kW ಫಾಸ್ಟ್ಚಾರ್ಜರ್ (LR ರೂಪಾಂತರಕ್ಕೆ ಪ್ರತ್ಯೇಕವಾಗಿ ಲಭ್ಯವಿದೆ) ಮತ್ತು 3.3 kW ವಾಲ್‌ಬಾಕ್ಸ್ ಚಾರ್ಜರ್ ಹೊಂದಿದೆ. ಈ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿವೆ. ಟಾಟಾ ಪಂಚ್ ಇವಿ ಟಾಟಾದ ಹೊಸ Acti.EV (ಅಡ್ವಾನ್ಸ್ಡ್ ಕನೆಕ್ಟೆಡ್ ಟೆಕ್ ಇಂಟೆಲಿಜೆಂಟ್ ಎಲೆಕ್ಟ್ರಿಕ್ ವೆಹಿಕಲ್) ಪ್ಲಾಟ್‌ಫಾರ್ಮ್‌ನ ಆಧಾರವಾಗಿದೆ.

ಎಂಜಿ ವಿಂಡ್ಸರ್ ಇವಿ: ಭಾರತೀಯ ಮಾರುಕಟ್ಟೆಯಲ್ಲಿ ಗ್ಲೋಸ್ಟರ್, ಹೆಕ್ಟರ್ ಪ್ಲಸ್, ಕಾಮೆಟ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ನಡುವೆ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸಿದೆ. ಇದರ ಭಾಗವಾಗಿ ಎಂಜಿ ಕಂಪನಿಯು ಎಂಜಿ ವಿಂಡ್ಸರ್ ಇವಿ (MG Windsor EV) ಮಾದರಿಯನ್ನು ಬಿಡುಗಡೆಗೊಳಿಸಿ ಹೊಸ ಸಂಚಲನವನ್ನು ಸೃಷ್ಟಿಸಿತು.
ಎಂಜಿ ವಿಂಡ್ಸರ್ ಇವಿ ಕಾರಿನಲ್ಲಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಅನ್ನು ಹೊಂದಿದೆ. ಇದರೊಂದಿಗೆ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಕರ್ವ್: ಜನಪ್ರಿಯ ಮತ್ತು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ (Tata Motors) ತನ್ನ ಟಾಟಾ ಕರ್ವ್ ಇವಿ (Tata Curvv EV) ಕೂಪೆ ಎಸ್‍ಯುವಿಯನ್ನು ಬಿಡುಗಡೆಗೊಳಿಸಿಟೂ. ಟಾಟಾ ಎಲೆಕ್ಟ್ರಿಕ್ ಕಾರು ಕ್ರಿಯೆಟಿವ್, Accomplished, Accomplished+ S, ಎಂಪವರ್ಡ್+ ಮತ್ತು ಎಂಪವರ್ಡ್+ A ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. ಈ ಹೊಸ ಎಲೆಕ್ಟ್ರಿಕ್ ಮಾದರಿಯು ಎಸ್‍ಯುವಿ ಕೂಪೆ ಬಾಡಿ ಸ್ಟೈಲ್ ಅನ್ನು ಹೊಂದಿದೆ.
ಟಾಟಾ ಕರ್ವ್ ಇವಿಯುಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳನ್ನು ಹೊಂದಿವೆ. ಇದರಲ್ಲಿ 45 kWh ಬ್ಯಾಟರಿ ಪ್ಯಾಕ್ 502 ಕಿ.ಮೀ ರೇಂಜ್ ನೀಡಿದರೆ, 55 kWh ಬ್ಯಾಟರಿ ಪ್ಯಾಕ್ 585 ಕಿ.ಮೀ ರೇಂಜ್ ನೀಡುತ್ತದೆ. ಈ ಎಲೆಕ್ಟ್ರಿಕ್ ಕಾರನ್ನು ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 10 ನಿಮಿಷಗಳು ಚಾರ್ಜ್ ಮಾಡಿದರೆ 150 ಕಿಮೀ ರೇಂಜ್ ಅನ್ನು ನೀಡುತ್ತದೆ. ಇದಲ್ಲದೆ, ಈ ಹೊಸ ಎಲೆಕ್ಟ್ರಿಕ್ ಕಾರಿನ ಟಾಪ್ ಸ್ಪೀಡ್ 160 ಕಿ.ಮೀ ಆಗಿದೆ.


Click it and Unblock the Notifications








