Citroen C3 Aircross: ನವೀಕರಣದೊಂದಿಗೆ ಸಿಟ್ರನ್ ಸಿ3 ಏರ್‌ಕ್ರಾಸ್ ಕಾರು ಬಿಡುಗಡೆ.. 7-ಸೀಟರ್, 8.49 ಲಕ್ಷ ಆರಂಭಿಕ ಬೆಲೆ

ಫ್ರಾನ್ಸ್ ಮೂಲದ ಸಿಟ್ರನ್ (Citroen) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ಹ್ಯುಂಡೈ ಹಾಗೂ ಕಿಯಾ ಸೇರಿದಂತೆ ಇತರೆ ವಿದೇಶಿ ಕಂಪನಿಗಳಂತೆ ಹೆಚ್ಚು ಜನಪ್ರಿಯತೆ ಗಳಿಸಲು ವಿಫಲವಾಗಿದೆ. ಆದರೂ, ಈಚೆಗೆ ಬಿಡುಗಡೆಯಾಗಿದ್ದ ಬಸಾಲ್ಟ್ (Basalt) ಗೇಮ್ ಚೇಂಜರ್ ಎಸ್‌ಯುವಿಯಾಗಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದರೊಂದಿಗೆ ಕಂಪನಿಯು ನಿಧಾನವಾಗಿ ಲಾಭದ ಹಾದಿಗೆ ಮರುಳುತ್ತಿದೆ. ಸೋಮವಾರ ನವೀಕರಿಸಿದ ಸಿ3 ಏರ್‌ಕ್ರಾಸ್ ಫ್ಯಾಮಿಲಿ ಎಸ್‌ಯುವಿಯನ್ನು ಮಾರಾಟಕ್ಕೆ ತಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹಲವು ನವೀಕರಣಗಳೊಂದಿಗೆ ಪರಿಚಯಿಸಲಾಗಿರುವ 2024ರ ಸಿಟ್ರನ್ ಸಿ3 ಏರ್‌ಕ್ರಾಸ್ (Citroen C3 Aircross) ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.8.49 ಲಕ್ಷದಿಂದ ರೂ.13.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಯು (You), ಪ್ಲಸ್ (Plus) ಹಾಗೂ ಮ್ಯಾಕ್ಸ್ (Max) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

2024 Updated Citroen C3 Aircross Suv Launched In India Rs 8 49 Lakh Price Details

ಈ ಕಾರಿನ ವಿನ್ಯಾಸದಲ್ಲಿ (ಡಿಸೈನ್) ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ಹಿಂದಿನ ಮಾದರಿಗೆ (ಮಾಡೆಲ್) ಹೋಲಿಕೆ ಮಾಡಿದರೆ, ನೂತನವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, 17-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 5 ಅಥವಾ 5+2 ಆಸನ ವ್ಯವಸ್ಥೆಯನ್ನು ಹೊಂದಿದ್ದು, 511 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ನವೀಕರಿಸಿದ ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

2024 Updated Citroen C3 Aircross Suv Launched In India Rs 8 49 Lakh Price Details

ಮತ್ತೊಂದು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 205 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

ನೂತನ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡೇ/ನೈಟ್ ಐಆರ್‌ವಿಎಂ (ಇನ್-ಸೈಡ್ ರೇರ್‌ವ್ಯೂ ಮಿರರ್) ಮತ್ತು ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸಿಟ್ರನ್ ಸಿ3 ಏರ್‌ಕ್ರಾಸ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾಗಳನ್ನು ಒಳಗೊಂಡಿದೆ. ಈ ಕಾರಿಗೆ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, September 30, 2024, 18:03 [IST]
English summary
2024 updated citroen c3 aircross suv launched in india rs 8 49 lakh price details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+