ಶೀಘ್ರ ಜನಸಾಮಾನ್ಯರಿಗಾಗಿ ಅತಿಕಡಿಮೆ ಬೆಲೆಯ ಹೊಸ ಮಾರುತಿ ಸುಜುಕಿ ಕಾರು ಬಿಡುಗಡೆ.. 5-ಸೀಟರ್, ದುಡ್ಡು ಕೂಡಿಡಿ!
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಪ್ರತಿವರ್ಷ ಹಲವು ಕಾರುಗಳನ್ನು ಪರಿಚಯಿಸುತ್ತಿರುತ್ತದೆ. ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿಸುವ ನಿಟ್ಟಿನಲ್ಲಿ ನವೀಕರಿಸಿದ ಡಿಜೈರ್ (Dzire) ಸೆಡಾನ್‌ನ್ನು ಬಿಡುಗಡೆಗೊಳಿಸಲು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಈ ನೂತನ ಕಾರು, ಜನವರಿಯಲ್ಲಿ ಆಯೋಜಿಸಿರುವ 2025ರ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ (Bharat Mobility Global Expo) ಅನಾವರಣಗೊಳ್ಳುವ ನಿರೀಕ್ಷೆಯಿದೆ. ಇದರ ಒಳ ಹಾಗೂ ಹೊರಭಾಗದ ವಿನ್ಯಾಸ (ಡಿಸೈನ್) ಬಹುತೇಕ ಹೊಸ ತಲೆಮಾರಿನ ಸ್ವಿಫ್ಟ್ (New Generation Swift) ಹ್ಯಾಚ್‌ಬ್ಯಾಕ್‌ಗೆ ಹೋಲಿಕೆಯಾಗುವ ಸಾಧ್ಯತೆಯಿದೆ.
ಮುಂಬರಲಿರುವ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್ ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದುಕೊಂಡಿರಲಿದೆ. ಬಹುತೇಕ ಸನ್‌ರೂಫ್ ಆಯ್ಕೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ಈಚೆಗೆ, ಈ ಕಾರು ರಸ್ತೆಯಲ್ಲಿಯೂ ಪರೀಕ್ಷಾರ್ಥ ಸಂಚಾರ ನಡೆಸುವಾಗಲೂ ಕಂಡುಬಂದಿತ್ತು. ಆಗಿನ ಸ್ಪೈ (ಪತ್ತೇದಾರಿ) ಫೋಟೋಗಳಲ್ಲಿ ವಿನ್ಯಾಸ ಕುರಿತಂತೆ ಹಲವು ಅಂಶಗಳು ಬಹಿರಂಗಗೊಂಡಿದ್ದವು. ನೂತನ ಡಿಜೈರ್ ಸೆಡಾನ್‌ನ ಗ್ರಿಲ್ ಮಧ್ಯೆ ಸುಜುಕಿ ಲೋಗೋ ಹೊಂದಿರುವುದನ್ನು ಗುರುತಿಸಬಹುದಾಗಿತ್ತು.

ಈ ಮಾರುತಿ ಸುಜುಕಿ ಡಿಜೈರ್ ಕಾರು ಸ್ವಿಫ್ಟ್‌ನಲ್ಲಿರುವಂತೆ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದರೊಟ್ಟಿಗೆ ಡುಯಲ್-ಟೋನ್ ಅಲಾಯ್ ವೀಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ವಿನೂತನವಾಗಿ ಮರುವಿನ್ಯಾಸಗೊಳಿಸಲಾದ ಬಂಪರ್‌ನ್ನು ಹೊಂದಿರಬಹುದು ಎನ್ನಲಾಗಿದೆ. ಒಳಭಾಗದ ಕ್ಯಾಬಿನ್ ಕೂಡ ಹೆಚ್ಚು ಅತ್ಯಾಧುನಿಕವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಈ ಕಾರಿನಲ್ಲಿ 5 ಮಂದಿ ಆರದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.
ನೂತನ ಮಾರುತಿ ಸುಜುಕಿ ಡಿಜೈರ್ ಸೆಡಾನ್ 1.2-ಲೀಟರ್ ಝಡ್-ಸೀರೀಸ್ ನ್ಯಾಚುರಲಿ ಆಸ್ಪಿರೇಟೆಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿರಲಿದ್ದು, 82 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 108 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದೆ ಎಂದು ಹೇಳಲಾಗಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ದೊರೆಯುವ ನಿರೀಕ್ಷೆಯಿದೆ.
ಹೊಸ ಮಾರುತಿ ಸುಜುಕಿ ಡಿಜೈರ್ ಭರಪೂರ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ದೊಡ್ಡದಾಗಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, 6-ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಈ ಮಾರುತಿ ಸುಜುಕಿ ಡಿಜೈರ್ ರೂ.6.50 ಲಕ್ಷದಿಂದ ರೂ.10.50 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ನೂತನ ಡಿಜೈರ್ ಸೆಡಾನ್‌ಗೆ ಹೋಂಡಾ ಅಮೇಜ್ (Honda Amaze), ಹ್ಯುಂಡೈ ಔರಾ (Hyundai Aura) ಮತ್ತು ಟಾಟಾ ಟಿಗೊರ್ (Tata Tigor) ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಲಿವೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್, ರೂ.6.49 ಲಕ್ಷದಿಂದ ರೂ.9.59 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್


Click it and Unblock the Notifications