Renault: 5-ಸೀಟರ್.. 2025ಕ್ಕೆ ಲಕ್ಷುರಿ ಫೀಚರ್‌ಗಳಿರುವ ಹೊಸ 'ಡಸ್ಟರ್' ಕಾರು ಬಿಡುಗಡೆ.. ಬೆಲೆ ಇಷ್ಟೇನಾ?

ವಿದೇಶಿ ಮೂಲದ ರೆನಾಲ್ಟ್ (Renault) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತಿಕಡಿಮೆ ಬೆಲೆಗೆ ಕ್ವಿಡ್, ಕಿಗರ್ ಮತ್ತು ಟ್ರೈಬರ್ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. 2025ಕ್ಕೆ ಹೊಸ ತಲೆಮಾರಿನ ಡಸ್ಟರ್ (New Generation Duster) ಎಸ್‌ಯುವಿ ಬಿಡುಗಡೆಗೊಳಿಸಲು ಕಂಪನಿಯು ಭರದಿಂದ ಸಿದ್ಧತೆ ನಡೆಸುತ್ತಿದೆ. ಇತ್ತೀಚೆಗೆ ರೈಟ್ ಹ್ಯಾಂಡ್ ಡ್ರೈವ್ (RHD) ಇರುವ ಡಸ್ಟರ್ ಕಾರನ್ನು ದಕ್ಷಿಣ ಆಫ್ರಿಕಾದಲ್ಲಿ ಅನಾವರಣಗೊಳಿಸಲಾಗಿದೆ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಎಲ್ಲ ಕಾರುಗಳು 'ರೈಟ್ ಹ್ಯಾಂಡ್ ಡ್ರೈವ್' ಹೊಂದಿವೆ. ಈ ಹಿನ್ನೆಲೆ, ನಮ್ಮಲ್ಲಿ ಸಹ 'ರೆನಾಲ್ಟ್ ಡಸ್ಟರ್' ಎಸ್‌ಯುವಿ ಬಿಡುಗಡೆಯಾಗುವ ಕಾಲ ಸನಿಹದಲ್ಲಿದೆ ಎಂದು ಹೇಳಬಹುದು. ದಕ್ಷಿಣ ಆಫ್ರಿಕಾದಲ್ಲಿ ಪ್ರದರ್ಶನ ಮಾಡಲಾಗಿರುವ ನೂತನ ಡಸ್ಟರ್ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ.

2025 Renault Duster SUV Unveiled In South Africa India Launch Soon Expected Price And Mileage Details

ಈ ರೆನಾಲ್ಟ್ ಡಸ್ಟರ್ ಎಸ್‌ಯುವಿ ಮುಂಭಾಗ (ಫ್ರಂಟ್) ದೊಡ್ಡದಾದ ಗ್ರಿಲ್, ಆಕರ್ಷಕವಾದ, ಹೆಡ್‌ಲೈಟ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಡಿಆರ್‌ಎಲ್‌ಗಳು, ಸರ್ಕ್ಯುಲರ್ ಫಾಗ್ ಲೈಟ್‌ಗಳನ್ನು ಹೊಂದಿದೆ. ಹಿಂಭಾಗ (ರೇರ್) ಉತ್ತಮವಾಗಿರುವ ಟೈಲ್‌ಲೈಟ್‌ಗಳು ಮತ್ತು ಸ್ಪೋರ್ಟಿ ರೂಫ್ ಸ್ಪಾಯ್ಲರ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಪಡೆದಿದೆ. ಜೊತೆಗೆ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ನೂತನ ಕಾರು 4,343 ಎಂಎಂ ಉದ್ದ, 1,813 ಎಂಎಂ ಅಗಲ & 1,661 ಎಂಎಂ ಎತ್ತರವಿದೆ. 2,657 ಎಂಎಂ ಉದ್ದವಿರುವ ವೀಲ್‌ಬೇಸ್ ಹಾಗೂ 217 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 472 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

2025 Renault Duster SUV Unveiled In South Africa India Launch Soon Expected Price And Mileage Details

ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್‌ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಸ್ಕ್ರೀನ್, ಆಟೋ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ 3ಡಿ ಸೌಂಡ್ ಸಿಸ್ಟಮ್‌ ಮತ್ತು 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಈ ಕಾರಿನ ಪವರ್‌ಟ್ರೇನ್ ಕುರಿತಂತೆ ಸ್ಪಷ್ಟವಾದ ವಿವರಗಳು ತಿಳಿದುಬಂದಿಲ್ಲ. ಆದರೆ, ಹೆಬ್ರಿಡ್ ಎಂಜಿನ್ ಹೊಂದಿರುವುದು ಬಹುತೇಕ ಖಚಿತವಾಗಿದೆ. ನೂತನ ಡಸ್ಟರ್ ಎಸ್‌ಯುವಿ 1.2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನೊಂದಿಗೆ 1.6-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದ್ದು, ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. 24.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡಬಹುದು ಎನ್ನಲಾಗಿದೆ.

2025 Renault Duster SUV Unveiled In South Africa India Launch Soon Expected Price And Mileage Details

ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿ ರೂ.10 ಲಕ್ಷ ಆಸುಪಾಸಿನ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಹೇಳಲಾಗಿದೆ. ಈ ಕಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರಿಡರ್, ಹ್ಯುಂಡೈ ಕ್ರೆಟಾ, ಎಂಜಿ ಆಸ್ಟರ್, ಕಿಯಾ ಸೆಲ್ಟೋಸ್, ಸ್ಕೋಡಾ ಕುಶಾಕ್, ಪೋಕ್ಸ್‌ವ್ಯಾಗನ್ ಟೈಗನ್, ಹೋಂಡಾ ಎಲಿವೇಟ್, ಸಿಟ್ರನ್ ಸಿ3 ಏರ್‌ಕ್ರಾಸ್, ಟಾಟಾ ಕರ್ವ್ ಮತ್ತು ಸಿಟ್ರನ್ ಬಸಾಲ್ಟ್ ಎಸ್‌ಯುವಿಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ.

ಒಟ್ಟಾರೆಯಾಗಿ 2022ರಲ್ಲಿ ನಾನಾ ಕಾರಣಗಳಿಗೆ ಈ ರೆನಾಲ್ಟ್ ಡಸ್ಟರ್ ಎಸ್‌ಯುವಿ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಹೊಸ ಅವತಾರದಲ್ಲಿ ಮಾರಾಟಕ್ಕೆ ತರುತ್ತಿರುವುದು ಗ್ರಾಹಕರಿಗೆ ಖುಷಿ ನೀಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, 2025ರಲ್ಲಿ ಈ ಕಾರು ಆದ್ದೂರಿಯಾಗಿ ಬಿಡುಗಡೆಯಾಗಲಿದೆ. ಮಾರಾಟಕ್ಕೆ ಬಂದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, November 18, 2024, 9:39 [IST]
English summary
2025 renault duster suv unveiled in south africa india launch soon expected price mileage details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+