ಪ್ರಖ್ಯಾತ ಕಂಪನಿಗಳ ಜಬರ್ದಸ್ತ್ ಕಾರುಗಳು ಬರಲಿವೆ.. 5-ಸೀಟರ್.. ಅತಿಕಡಿಮೆ ಬೆಲೆ?
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಕಂಪನಿಯಿಂದ ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಕಾರುಗಳು ಮಾರಾಟಕ್ಕೆ ಬರುತ್ತಿರುತ್ತವೆ. ಶೀಘ್ರದಲ್ಲಿಯೇ ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG), ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಮತ್ತು ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch facelift) ಎಸ್‌ಯುವಿಗಳು ಬಿಡುಗಡೆಯಾಗಲಿವೆ. ಬನ್ನಿ.. ಈ ಕಾರುಗಳ ನಿರೀಕ್ಷಿತ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ಟಾಟಾ ನೆಕ್ಸಾನ್ ಸಿಎನ್‌ಜಿ: ಈ ಕಾರಿನ ಮೇಲೆ ಗ್ರಾಹಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, ತಿಂಗಳಾಂತ್ಯದಲ್ಲಿ ಅಥವಾ ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಯಾಗಬಹುದು. ರೂ.9 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ನೂತನ ಟಾಟಾ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ 26.99 ಕೆಎಂ/ಕೆಜಿವರೆಗೆ ಮೈಲೇಜ್ ಕೊಡಬಹುದು ಎನ್ನಲಾಗಿದೆ. ಈ ಕಾರು 5-ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ದೊರೆಯಲಿದ್ದು, ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 230 ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.
ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್: ನವೀಕರಿಸಿದ ನಿಸ್ಸಾನ್ ಮ್ಯಾಗ್ನೈಟ್ ಕಾರನ್ನು ಅಕ್ಟೋಬರ್ 4ರಂದು ಮಾರಾಟಕ್ಕೆ ತರಲು ಕಂಪನಿಯು ದಿನಾಂಕ ನಿಗದಿಪಡಿಸಿದೆ. ರೂ.6.30 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿಕೊಂಡಿರಬಹುದು. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಈ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಸಿಂಗಲ್ ಪೇನ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ. 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾದಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.
ಟಾಟಾ ಪಂಚ್ ಫೇಸ್‌ಲಿಫ್ಟ್: ಬಹಳಷ್ಟು ಹೊಸತನಗಳಿಗೆ ಸಾಕ್ಷಿಯಾಗಿರುವ ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿಯು ಈ ವರ್ಷಾಂತ್ಯದೊಳಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ರೂ.6 ಲಕ್ಷ ಬೆಲೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ನೂತನ ಕಾರು 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ ಹಲವು ಅತ್ಯಾಧುನಿಕ ವೈಶಿಷ್ಟ್ಯವನ್ನು ಹೊಂದಿರುವ ಸಾಧ್ಯತೆಯಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ಗಳು ಮತ್ತು ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications