Maruti Suzuki: 30+ Km ಮೈಲೇಜ್, 2 ದಶಕಗಳ ಬಳಿಕ ಈ ಕಾರಿನಲ್ಲಿ ಹೊಸ ಎಂಜಿನ್.. ಕೇವಲ 7 ಲಕ್ಷಕ್ಕೆ ಬಿಡುಗಡೆ?

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಇಂಡಿಯಾದ ಮಾತೃ ಸಂಸ್ಥೆ ಜಪಾನ್ ಮೂಲದ ಸುಜುಕಿ, ಸದ್ದಿಲ್ಲದೇ ಹೊಚ್ಚ ಹೊಸ ವ್ಯಾಗನ್ಆರ್‌ ಹ್ಯಾಚ್‌ಬ್ಯಾಕ್‌ನ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮಾದರಿಯನ್ನು (ಮಾಡೆಲ್) ಅಭಿವೃದ್ಧಿಪಡಿಸುತ್ತಿದೆ. ಮೊದಲಿಗೆ ಈ ಕಾರು 2025ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬರಲಿದ್ದು, ಅದೇ ವರ್ಷ ವರ್ಷ ದೇಶೀಯ ಮಾರುಕಟ್ಟೆಯಲ್ಲಿಯೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆದರೆ, ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಾಗುವ ನೂತನ ಸುಜುಕಿ ವ್ಯಾಗನ್ಆರ್‌ (Suzuki WagonR) ಹೈಬ್ರಿಡ್ ಕಾರು, ಹೊರ ಹಾಗೂ ಒಳಭಾಗದ ವಿನ್ಯಾಸದಲ್ಲಿ ಹತ್ತಾರು ಬದಲಾವಣೆ ಪಡೆದುಕೊಂಡಿರುವ ನೀರಿಕ್ಷೆಯಿದೆ. ಈ ಕಾರು, ಶಕ್ತಿಯುತವಾದ ಎಲೆಕ್ಟ್ರಿಕ್ ಮೋಟಾರ್‌ನ್ನು ಸಂಪರ್ಕಿಸಲಾದ 666 ಸಿಸಿ ಸಾಮರ್ಥ್ಯದ 3-ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

30 Plus Km Mileage Maruti Suzuki Wagonr Get Strong Hybrid Engine Launch In 2025 Expected

ಈ ಎಂಜಿನ್‌ ಪೆಟ್ರೋಲ್ ಮೋಡ್‌ನಲ್ಲಿ 53 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 58 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. ಎಲೆಕ್ಟ್ರಿಕ್ ಮೋಡ್‌ನಲ್ಲಿ 10 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 29.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ ಎಂದು ಹೇಳಲಾಗಿದೆ.

ಹೊಸ ಸುಜುಕಿ ವ್ಯಾಗನ್ಆರ್‌ ಹೈಬ್ರಿಡ್ ಕಾರು, ಇಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎಂದು ತಿಳಿದುಬಂದಿದೆ. ಈ ಹೈಬ್ರಿಡ್ ಚಾಲಿತ ಕಾರುಗಳು ಕಡಿಮೆ ಇಂಗಾಲ ಹೊರಸೂಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಕೂಡ ಗುರುತಿಸಿಕೊಂಡಿವೆ. ನೂತನ ವ್ಯಾಗನ್ಆರ್‌ 30 ಕೆಎಂಪಿಎಲ್‌ಗೂ ಅಧಿಕ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

30 Plus Km Mileage Maruti Suzuki Wagonr Get Strong Hybrid Engine Launch In 2025 Expected

ಸಾಮಾನ್ಯ ಕಾರುಗಳಿಗೆ ಹೋಲಿಕೆ ಮಾಡಿದರೆ, ಹೈಬ್ರಿಡ್ ಕಾರುಗಳು ಕೊಂಚ ಹೆಚ್ಚಿನ ದರವನ್ನು ಹೊಂದಿರುತ್ತವೆ. ಆದರೆ, ನೂತನ ಸುಜುಕಿ ವ್ಯಾಗನ್ಆರ್‌ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಬರುವ ಸಾಧ್ಯತೆಯಿದೆ. ಸರಿ ಸುಮಾರು ರೂ.7.22 ಲಕ್ಷ (ಎಕ್ಸ್ ಶೋರೂಂ) ಆಸುಪಾಸಿನಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ.

1993 ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಮೊದಲ ಬಾರಿಗೆ 'ಸುಜುಕಿ ವ್ಯಾಗನ್ಆರ್‌' ಹ್ಯಾಚ್‌ಬ್ಯಾಕ್‌ನ್ನು ಪರಿಚಯಿಸಲಾಯಿತು. ಸರಿ ಸುಮಾರು 6 ವರ್ಷಗಳ ನಂತರ ಅಂದರೆ 1999 ರಲ್ಲಿ ಅದೇ ಕಾರನ್ನು 'ಮಾರುತಿ ಸುಜುಕಿ ವ್ಯಾಗನ್ಆರ್‌' ಹೆಸರಲ್ಲಿ ಭಾರತದಲ್ಲಿಯೂ ಬಿಡುಗಡೆಗೊಳಿಸಲಾಯಿತು. ಅಂದಿನಿಂದಲೂ ಈ ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ಮಧ್ಯಮ ವರ್ಗದ ಜನರ ಮನಸ್ಸನ್ನು ಗೆದ್ದಿದೆ.

ಸದ್ಯ, ದೇಶೀಯವಾಗಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ವ್ಯಾಗನ್ಆರ್‌ ಕಾರಿನ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್), ರೂ.5.54 ಲಕ್ಷ ಬೆಲೆಯನ್ನು ಹೊಂದಿದೆ ಗರಿಷ್ಠ ಶ್ರೇಣಿ ರೂಪಾಂತರ (ಟಾಪ್ ಎಂಡ್ ವೇರಿಯೆಂಟ್) ರೂ.7.33 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ.

ಈ ಮಾರುತಿ ವ್ಯಾಗನ್ಆರ್‌ ಹ್ಯಾಚ್‌ಬ್ಯಾಕ್‌ 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 23.56 ರಿಂದ 33.48 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಡಿಸ್‌ಪ್ಲೇ (7-ಇಂಚು), 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ & ಸ್ಟೀರಿಂಗ್-ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, November 12, 2024, 9:30 [IST]
English summary
30 plus km mileage maruti suzuki wagonr get strong hybrid engine launch in 2025 expected
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+