5 ಮಂದಿ ಓಡಾಡಲು ಅದ್ಭುತ ಕಾರುಗಳಿವು.. ರೂ.5.65 ಲಕ್ಷ ಆರಂಭಿಕ ಬೆಲೆ, ಗರಿಷ್ಠ ಮೈಲೇಜ್!

ದೇಶದಲ್ಲಿ ಹತ್ತಾರು ವಾಹನ ತಯಾರಕ ಸಂಸ್ಥೆಗಳಿವೆ. ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿವೆ. ನಿಮ್ಮ ಕುಟುಂಬಕ್ಕಾಗಿ ಬಜೆಟ್ ಬೆಲೆಯಲ್ಲಿ ನೂತನ ಕಾರು ಖರೀದಿಸಲು ಹುಡುಕುತ್ತಿದ್ದರೆ.. ಟಾಟಾ ಟಿಯಾಗೊ, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್ ಕಾರುಗಳು ಉತ್ತಮ ಆಯ್ಕೆಯಾಗಲಿವೆ. ಇವು 5 ಆಸನದೊಂದಿಗೆ ದೊರೆಯಲಿದ್ದು, ಸುಲಭದಾಯಕವಾಗಿ ದೂರದ ಊರುಗಳಿಗೂ ಪ್ರಯಾಣಿಸಬಹುದಾಗಿದೆ. ಅದಕ್ಕೆ ತಕ್ಕಂತೆ ಗರಿಷ್ಠ ಮೈಲೇಜ್‌ನ್ನು ಕೊಡಬಲ್ಲವು. ನಾವಿಲ್ಲಿ ಹೊಸ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಕುರಿತಂತೆ ಮಾತನಾಡೋಣ. ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿದಾರರಿಗೆ ಸಿಗುತ್ತದೆ. ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 19.43 ರಿಂದ 20.01 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 26.49 ರಿಂದ 28.06 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.

5 seater cars Tiago Swift Magnite rs 5 65 lakh starting price good mileage

ಈ ಟಿಯಾಗೊ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್)ಯನ್ನು ಪಡೆದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಬಗ್ಗೆ ಹೇಳುವುದಾದರೆ, ಈ ಹ್ಯಾಚ್‌ಬ್ಯಾಕ್ ರೂ.6.49 ಲಕ್ಷದಿಂದ ರೂ.9.60 ಲಕ್ಷ ಎಕ್ಸ್ (ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

5 seater cars Tiago Swift Magnite rs 5 65 lakh starting price good mileage

ನೂತನ ಸ್ವಿಫ್ಟ್ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6-ಏರ್‌ಬ್ಯಾಗ್‌, ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.

ಕಡೆಯದಾಗಿ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಕುರಿತಂತೆ ಮಾತನಾಡುವುದಾದರೆ, ಈ ಎಸ್‌ಯುವಿ ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.

5 seater cars Tiago Swift Magnite rs 5 65 lakh starting price good mileage

ಈ ನಿಸ್ಸಾನ್ ಮ್ಯಾಗ್ನೈಟ್ 17.40 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, July 12, 2024, 15:41 [IST]
English summary
5 seater cars tiago swift magnite rs 5 65 lakh starting price good mileage
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+