Maruti Suzuki: ಈ ಕಾರಿನಲ್ಲಿದೆ 6 ಏರ್‌ಬ್ಯಾಗ್.. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ, 27 ಕಿ.ಮೀ ಮೈಲೇಜ್
ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯು ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಗ್ರ್ಯಾಂಡ್ ವಿಟಾರಾ (Grand Vitara) ಎಸ್‌ಯುವಿಯು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ.
ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರು ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸುವ ಸಲುವಾಗಿ 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ ಹಾಗೂ ಹಿಲ್ ಡಿಸೆಂಟ್ ಕಂಟ್ರೋಲ್‌ಗಳನ್ನು ಪಡೆದಿದೆ.

ಈ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ ಪ್ಲಸ್, ಆಲ್ಫಾ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯನ್ನು ಹೊಂದಿದ್ದು, ನೋಡುಗರ ಸೆಳೆಯುವಂತಹ ಅತ್ಯಾಧುನಿಕ ವಿನ್ಯಾಸವನ್ನು ಕೂಡ ಪಡೆದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ನವೀನ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ನೂತನ ಕಾರು ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1.5-ಲೀಟರ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ಪಡೆದಿರುವ ಮಾದರಿಗಳು, ಕ್ರಮವಾಗಿ 103 ಪಿಎಸ್ ಹಾಗೂ 137 ಪಿಎಸ್ ಗರಿಷ್ಠ ಪವರ್ (ಶಕ್ತಿ) ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ.

ಮತ್ತೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಪವರ್‌ಟ್ರೇನ್ ಪಡೆದಿರುವ ಸಿಎನ್‌ಜಿ ಚಾಲಿತ ಕಾರು, 93 ಪಿಎಸ್ ಗರಿಷ್ಠ ಶಕ್ತಿ ಮತ್ತು 122 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಗ್ರ್ಯಾಂಡ್ ವಿಟಾರಾ ಆವೃತ್ತಿಗಳು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನೊಂದಿಗೂ ಸಿಗುತ್ತವೆ. ಪೆಟ್ರೋಲ್ ರೂಪಾಂತರಗಳು 19.38 - 27.97 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.
ಹೊಚ್ಚ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ಹೆಡ್ಸ್ ಅಪ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಮಾರುತಿ ಗ್ರ್ಯಾಂಡ್ ವಿಟಾರಾ ಕಾರಿಗೆ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಎಂಜಿ ಆಸ್ಟರ್, ಟೊಯೊಟಾ ಹೈರೈಡರ್, ಸಿಟ್ರನ್ ಸಿ3 ಏರ್‌ಕ್ರಾಸ್, ಮಹೀಂದ್ರಾ ಸ್ಕಾರ್ಪಿಯೊ ಕ್ಲಾಸಿಕ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಮುಂಬರುವ ದಿನಗಳಲ್ಲಿ ಗ್ರ್ಯಾಂಡ್ ವಿಟಾರಾ ಕಾರು 7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications