Kia: ನಿನ್ನೆಯಷ್ಟೇ ಬಿಡುಗಡೆ.. 7-ಸೀಟರ್ ಕಿಯಾ ಕಾರ್ನಿವಲ್ ಫ್ಯಾಮಿಲಿ ಕಾರಿನ ಬಗ್ಗೆ ನೀವು ತಿಳಿಯಬೇಕಾದ ವಿಚಾರಗಳಿವು
ಪ್ರಸಿದ್ಧ ಕಾರು ತಯಾರಕ ಕಂಪನಿ ಕಿಯಾ ಮೋಟಾರ್ ಇಂಡಿಯಾ (Kia Motors India), ಗುರುವಾರ ನವದೆಹಲಿಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ 2024ರ ನವೀಕರಿಸಿದ ಕಾರ್ನಿವಲ್ (Carnival) ಎಂಪಿವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. 7 ಆಸನದೊಂದಿಗೆ ಖರೀದಿಗೆ ದೊರೆಯುವ ಈ ಕಾರು, ಅತ್ಯಾಧುನಿಕ ವಿನ್ಯಾಸ (Design) ಹಾಗೂ ವೈಶಿಷ್ಟ್ಯಗಳನ್ನು (Features) ಪಡೆದುಕೊಂಡಿದೆ. ನಾವಿಲ್ಲಿ ಹೊಚ್ಚ ಹೊಸ ಕಿಯಾ ಕಾರ್ನಿವಲ್ ಎಂಪಿವಿಯ ಪ್ರಮುಖಾಂಶಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಲೆ & ಬಣ್ಣಗಳು: ನೂತನ ಕಿಯಾ ಕಾರ್ನಿವಲ್ (Kia Carnival) ಫ್ಯಾಮಿಲಿ ಎಂಪಿವಿ ರೂ.63.90 ಲಕ್ಷ (ಎಕ್ಸ್ ಶೋರೂಂ) ಬೆಲೆಗೆ ಖರೀದಿಗೆ ಲಭ್ಯವಿದೆ. ಲಿಮೋಸಿನ್ ಹಾಗೂ ಲಿಮೋಸಿನ್ ಪ್ಲಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಗ್ಲೇಸಿಯರ್ ವೈಟ್ ಪರ್ಲ್ ಮತ್ತು ಫ್ಯೂಷನ್ ಬ್ಲ್ಯಾಕ್ ಎಂಬ 2 ಆಕರ್ಷಕ ಬಣ್ಣಗಳ (ಕಲರ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ: ಈ ಕಾರು ಹೊರಭಾಗದಲ್ಲಿ (ಔಟ್-ಸೈಡ್) ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ನೂತನ ಎಂಪಿವಿ 5,155 ಎಂಎಂ ಉದ್ದ ಮತ್ತು 1,995 ಎಂಎಂ ಅಗಲ ಕೂಡ ಇದೆ.
ಕಾರ್ಯಕ್ಷಮತೆ: ಹೊಸ ಕಿಯಾ ಕಾರ್ನಿವಲ್ ಎಂಪಿವಿ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 197 ಬಿಹೆಚ್‌ಪಿ ಶಕ್ತಿ (ಪವರ್) ಮತ್ತು 440 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಇಕೋ, ನಾರ್ಮಲ್, ಸ್ಪೋರ್ಟ್ಸ್ ಹಾಗೂ ಸ್ಮಾರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

ವೈಶಿಷ್ಟ್ಯಗಳು: ಈ ಕಿಯಾ ಕಾರ್ನಿವಲ್ ಕಾರು, ಯುವ ಗ್ರಾಹಕರನ್ನು ಸೆಳೆಯುವಂತಹ ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 3-ಜೋನ್ ಕ್ಲೇಮೇಟ್ ಕಂಟ್ರೋಲ್, ಡುಯಲ್ ಸಿಂಗಲ್-ಪೇನ್ ಸನ್‌ರೂಫ್, 12-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಆಸನ (2+2+3) ವ್ಯವಸ್ಥೆಯನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ನೂತನ ಎಂಪಿವಿ, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಸುರಕ್ಷತೆ ಒದಗಿಸುತ್ತದೆ. 8-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾಯಂತಹ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಪ್ರತಿಸ್ಪರ್ಧಿ ಕಾರುಗಳು: ಹೊಸ ಕಿಯಾ ಕಾರ್ನಿವಲ್ ಎಂಪಿವಿಗೆ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross), ನಿಸ್ಸಾನ್ ಎಕ್ಸ್-ಟ್ರಯಲ್ (Nissan X-Trail) ಮತ್ತು ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಕಾರುಗಳು ದೊಡ್ಡ ಎದುರಾಳಿಯಾಗಿವೆ. ಆದರೆ, ಇವುಗಳ ಬೆಲೆ ಹಾಗೂ ವೈಶಿಷ್ಟ್ಯಗಳ ವಿಚಾರದಲ್ಲಿ ನಡುವೆ ಸಾಕಷ್ಟು ವ್ಯತ್ಯಾಸವಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








