ಪರಿಸರ ಪ್ರೇಮ ಮೆರೆದ ಖ್ಯಾತ ನಟಿ.. ಕೋಟಿ ಬೆಲೆಯ ಬಿಎಂಡಬ್ಲ್ಯೂ ಎಲೆಕ್ಟ್ರಿಕ್ ಕಾರನ್ನು ಮನೆಗೆ ತಂದ್ರು!

ನಟಿ ನೇಹಾ ಪೆಂಡ್ಸೆ (Neha Pendse) ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಮತ್ತು ಮರಾಠಿ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ದೊಡ್ಡಮಟ್ಟದಲ್ಲಿ ಫ್ಯಾನ್ಸ್ ಫಾಲೋಯಿಂಗ್ ಹೊಂದಿದ್ದಾರೆ. ನಿರ್ಮಾಪಕಿಯಾಗಿಯೂ ನೇಹಾ ಗುರುತಿಸಿಕೊಂಡಿದ್ದು, 39ನೇ ವಯಸ್ಸಿನಲ್ಲಿ ಕೂಡ ಚಿತ್ರರಂಗದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಸ್ಯಾಂಡಲ್‌ವುಡ್‌ನ ಇನ್ಸ್ ಪೆಕ್ಟರ್ ಝಾನ್ಸಿ ಹಾಗೂ ಪರೋಡಿ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಈಚೆಗೆ ನೇಹಾ ದುಬಾರಿ ಬೆಲೆಯ ಹೊಚ್ಚ ಹೊಸ ಬಿಎಂಡಬ್ಲ್ಯೂ ಐಎಕ್ಸ್ (BMW iX) ಎಲೆಕ್ಟ್ರಿಕ್ ಕಾರು ಖರೀದಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ.

ನೂತನ ಎಲೆಕ್ಟ್ರಿಕ್ ಎಸ್‌ಯುವಿಯನ್ನು ನಟಿ ನೇಹಾ ಪೆಂಡ್ಸೆ ಹತ್ತುತ್ತಿರುವ ವಿಡಿಯೋವನ್ನು 'ಕಾರ್ಸ್ ಫಾರ್ ಯು' ಯುಟ್ಯೂಬ್ ವಾಹಿನಿಯಲ್ಲಿ ಹಂಚಿಕೊಳ್ಳಲಾಗಿದೆ. ಇತ್ತೀಚೆಗೆ ಈ 'ಬಿಎಂಡಬ್ಲ್ಯೂ ಐಎಕ್ಸ್' ಕಾರನ್ನು ನೇಹಾ ಅವರು ಕೊಂಡುಕೊಂಡಿದ್ದಾರೆ ಎನ್ನಲಾಗಿದೆ. ಬಾಲಿವುಡ್ ಖ್ಯಾತ ನಟ ರಿತೇಶ್ ದೇಶ್‌ಮುಖ್ ಸೇರಿದಂತೆ ಹಲವರು ಸೆಲೆಬ್ರಿಟಿಗಳು ಸಹ ಬಿಎಂಡಬ್ಲ್ಯೂ ಐಎಕ್ಸ್ ಎಸ್‌ಯುವಿಯ ಮಾಲೀಕರಾಗಿದ್ದಾರೆ.

Actress Neha Pendse Buys New BMW iX Electric Car 635 Km Range Details

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಬಿಎಂಡಬ್ಲ್ಯೂ ಐಎಕ್ಸ್ (BMW iX) ಎಲೆಕ್ಟ್ರಿಕ್ ಕಾರು ರೂ.1.40 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಎಸ್‌ಯುವಿಯು ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಮಿನರಲ್ ವೈಟ್, ಫೈಟೋನಿಕ್ ಬ್ಲೂ, ಸ್ಟಾರ್ಮ್ ಬೇ ಮೆಟಾಲಿಕ್, ಸೋಫಿಸ್ಟೊ ಗ್ರೇ ಬ್ರಿಲಿಯಂಟ್ ಎಫೆಕ್ಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಕಾರು 105.2 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 635 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಜೊತೆಗೆ AWD (ಆಲ್-ವೀಲ್-ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 523 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 765 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Actress Neha Pendse Buys New BMW iX Electric Car 635 Km Range Details

ಬಿಎಂಡಬ್ಲ್ಯೂ ಐಎಕ್ಸ್ ಎಲೆಕ್ಟ್ರಿಕ್ ಕಾರಿನ ಬ್ಯಾಟರಿಯು 195 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 10 - 80% ಚಾರ್ಜ್ ಆಗಲು 35 ನಿಮಿಷ ತೆಗೆದುಕೊಳ್ಳುತ್ತದೆ. ಅದೇ ರೀತಿಯಲ್ಲಿ 50 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್‌ನಲ್ಲಿ 97 ನಿಮಿಷಗಳಲ್ಲಿ ಶೇಕಡ 10 - 80% ಚಾರ್ಜ್ ಆಗುತ್ತದೆ.

22 ಕೆಡಬ್ಲ್ಯೂ ಎಸಿ ಹೋಂ ಚಾರ್ಜರ್ ಆಯ್ಕೆಯಲ್ಲಿ ಈ ಎಸ್‌ಯುವಿಯ ಬ್ಯಾಟರಿ ಪ್ಯಾಕ್ ಶೇಕಡ 0 - 100% ಚಾರ್ಜ್ ಆಗಲು 5.5 ಗಂಟೆ ಬೇಕಾಗುತ್ತದೆ. 11 ಕೆಡಬ್ಲ್ಯೂ ಎಸಿ ಚಾರ್ಜರ್‌ನಲ್ಲಿ 11 ಗಂಟೆಯಲ್ಲಿ ಶೇಕಡ 0 - 100% ಚಾರ್ಜ್ ಆಗಿ ಬಿಡುತ್ತದೆ.

ನೂತನ ಬಿಎಂಡಬ್ಲ್ಯೂ ಐಎಕ್ಸ್ ಎಲೆಕ್ಟ್ರಿಕ್ ಕಾರು 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 14.9-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, 18-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಏರ್ ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, June 11, 2024, 13:24 [IST]
English summary
Actress neha pendse buys new bmw ix electric car 635 km range details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+