ನೋಡಲು ಸುಂದರ.. ಬೈಕ್‌ನಂತೆ ಮೈಲೇಜ್.. 5-ಸೀಟರ್, 7 ಲಕ್ಷಕ್ಕೆ ಸಿಗುವ ಜನಪ್ರಿಯ ಕಾರುಗಳಿವು!
ಭಾರತದ ಮಾರುಕಟ್ಟೆಯಲ್ಲಿ ಹತ್ತಾರು ಕಾರುಗಳು ಖರೀದಿಗೆ ಲಭ್ಯವಿವೆ. ಬಹುತೇಕರು ಕೈಗೆಟುಕುವ ಬೆಲೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನೂತನ ಕಾರನ್ನು ತೆಗೆದುಕೊಳ್ಳಲು ಇಷ್ಟಪಡುತ್ತಾರೆ. ಆದರೆ, ಹ್ಯಾಚ್‌ಬ್ಯಾಕ್, ಎಸ್‌ಯುವಿ ಹಾಗೂ ಎಂಪಿವಿಯಲ್ಲಿ ಯಾವುದನ್ನು ಖರೀದಿ ಮಾಡಬೇಕು ಎಂಬ ಗೊಂದಲದಲ್ಲಿರುತ್ತಾರೆ. ನಾವಿಲ್ಲಿ ಅಂತಹದ್ದೇ 7 ಲಕ್ಷ ಆರಂಭಿಕ ಬೆಲೆಯಲ್ಲಿ ಸಿಗುವ ಜನಪ್ರಿಯ ಮಾರುತಿ ಸುಜುಕಿ ಫ್ರಾಂಕ್ಸ್, ಟಾಟಾ ನೆಕ್ಸಾನ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರುಗಳ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಬಗ್ಗೆ ಮಾತನಾಡೋಣ. ಇದೊಂದು ಎಸ್‌ಯುವಿ ಆಗಿದ್ದು, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡದ್ದು, 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಈ ಫ್ರಾಂಕ್ಸ್ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಹೋಲ್ಡ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿ ಕುರಿತಂತೆ ಹೇಳುವುದಾದರೆ, ಇದು ರೂ.8 ಲಕ್ಷದಿಂದ ರೂ.14.75 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17.18 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿಯೂ 5 ಜನರು ಆರಾಮದಾಯಕವಾಗಿ ಪ್ರಯಾಣಿಸಬಹುದು.

ನೂತನ ಟಾಟಾ ನೆಕ್ಸಾನ್ ಕಾರಿನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್ ಮತ್ತು 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಹೊಂದಿದೆ.
ಕಡೆಯದಾಗಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ಬಗ್ಗೆ ಮಾತನಾಡುವುದಾದರೆ, ಇದು ರೂ.7.79 ಲಕ್ಷದಿಂದ 15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ ಕೂಡ 5 ಮಂದಿ ಓಡಾಟ ನಡೆಸಬಹುದು.

ಹೊಸ ಎಕ್ಸ್‌ಯುವಿ 3ಎಕ್ಸ್ಒ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್ ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications