Sunroof Cars: ಸನ್‌ರೂಫ್‌ನೊಂದಿಗೆ ಸಿಗುವ ಜನಪ್ರಿಯ ಕಾರುಗಳಿವು.. ಬಜೆಟ್ ಬೆಲೆ, ಗರಿಷ್ಠ ಮೈಲೇಜ್!

ಸನ್‌ರೂಫ್ (Sunroof) ಚಾಲಕ ಹಾಗೂ ಪ್ರಯಾಣಿಕರಿಗೆ ಸುಂದರವಾದ ನೀಲಿ ಆಕಾಶದ ಸೌಂದರ್ಯ ಸವಿಯಲು ಅನುವು ಮಾಡಿಕೊಡುತ್ತದೆ. ಇದರಿಂದ ಪ್ರತಿಯೊಬ್ಬರು ತಮ್ಮ ಕಾರಿನಲ್ಲಿ ಸನ್‌ರೂಫ್ ಇರಬೇಕೆಂದು ಬಯಸುತ್ತಾರೆ. ಆದರೆ, ಬಹುತೇಕ ಖರೀದಿದಾರರು ಹಣಕಾಸಿನ ಸಮಸ್ಯೆಯಿಂದ ಈ ವೈಶಿಷ್ಟ್ಯ (ಫೀಚರ್) ಇಲ್ಲದಿರುವ ಕಾರನ್ನು ತೆಗೆದುಕೊಂಡು ಬಿಡುತ್ತಾರೆ. ನಾವಿಲ್ಲಿ ಕೈಗೆಟುಕುವ ದರದಲ್ಲಿ ಸನ್‌ರೂಫ್ ಪಡೆದುಕೊಂಡಿರುವ ಹಾಗೂ ಗರಿಷ್ಠ ಮೈಲೇಜ್ ನೀಡುವ ಜನಪ್ರಿಯ ಕಾರುಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಸನ್‌ರೂಫ್ ಆಯ್ಕೆಯಲ್ಲಿ ಏಪ್ರಿಲ್‌ನಲ್ಲಿ ಬಿಡುಗಡೆಗೊಂಡ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿಯ ಬಗ್ಗೆ ಮಾತನಾಡೋಣ. ಈ ಕಾರು ರೂ.7.49 ಲಕ್ಷದಿಂದ ರೂ.15.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ.

Affordable Price Sunroof Cars XUV 3XO Grand Vitara Creta Seltos

ಈ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ 20.6 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡೀಪ್ ಫಾರೆಸ್ಟ್, ಡ್ಯೂನ್ ಬೀಜ್, ಎವರೆಸ್ಟ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್-ಝೋನ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯು ಸನ್‌ರೂಫ್‌ನೊಂದಿಗೆ ದೊರೆಯುತ್ತದೆ. ಈ ಕಾರು ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದ್ದು, 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Affordable Price Sunroof Cars XUV 3XO Grand Vitara Creta Seltos

ನೂತನ ಗ್ರ್ಯಾಂಡ್ ವಿಟಾರಾ ಕಾರಿನಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡನಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಏರ್‌ಬ್ಯಾಗ್ TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿಯು ಅತ್ಯಾಧುನಿಕ ಸನ್‌ರೂಫ್‌ನೊಂದಿಗೆ ದೊರೆಯುತ್ತದೆ. ರೂ.11 ಲಕ್ಷದಿಂದ ರೂ.20.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Affordable Price Sunroof Cars XUV 3XO Grand Vitara Creta Seltos

ಕಿಯಾ ಸೆಲ್ಟೋಸ್ (Kia Seltos) ಕಾರು ಸನ್‌ರೂಫ್‌ ಆಯ್ಕೆಯಲ್ಲಿ ಸಿಗುತ್ತದೆ. ಇದು ರೂ.10.90 ಲಕ್ಷದಿಂದ ರೂ.20.35 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಪಡೆದಿದ್ದು, 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡುಯಲ್ 10.25-ಇಂಚಿನ ಡಿಸ್ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, July 3, 2024, 17:29 [IST]
English summary
Affordable price sunroof cars xuv 3xo grand vitara creta seltos
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+