Aston Martin: ವಿಮಾನದಂತಹ ಸೌಕರ್ಯವಿರುವ ಆಸ್ಟನ್ ಮಾರ್ಟಿನ್ ವಾಂಟೇಜ್ ಕಾರು ಬಿಡುಗಡೆ.. ಬೆಲೆ ಎಷ್ಟಿದೆ?
ಬ್ರಿಟಿಷ್ ಐಷಾರಾಮಿ ಸ್ಪೋರ್ಟ್ಸ್ ಕಾರು ತಯಾರಕ ಕಂಪನಿಯಾಗಿ ಆಸ್ಟನ್ ಮಾರ್ಟಿನ್ (Aston Martin) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಶ್ರೀಮಂತ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಂದು 2024ರ ಹೊಚ್ಚ ಹೊಸ ವಾಂಟೇಜ್ (Vantage) ಸ್ಪೋರ್ಟ್ಸ್ ಕಾರನ್ನು ಆದ್ದೂರಿಯಾಗಿ ಬಿಡುಗಡೆ ಮಾಡಿದೆ. ಈ ಕಾರು ವಿಮಾನದಂತಹ ವಿನ್ಯಾಸ (Design) ಮತ್ತು ವೈಶಿಷ್ಟ್ಯಗಳನ್ನು (Features) ಪಡೆದುಕೊಂಡಿದೆ. ಬನ್ನಿ.. ನೂತನ ಆಸ್ಟನ್ ಮಾರ್ಟಿನ್ ವಾಂಟೇಜ್ ಕಾರಿನ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ಹೊಸ ಆಸ್ಟನ್ ಮಾರ್ಟಿನ್ ವಾಂಟೇಜ್ (Aston Martin Vantage) ಸ್ಪೋರ್ಟ್ ಕಾರು, ಸಾಕಷ್ಟು ಐಷಾರಾಮಿ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ದುಬಾರಿ ಬೆಲೆಯನ್ನು ಹೊಂದಿದೆ. ರೂ.3.99 ಕೋಟಿ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರಿನ ವಿತರಣೆ 2024ರ ನಾಲ್ಕನೇ ತ್ರೈಮಾಸಿಕದಲ್ಲಿ (ಅಕ್ಟೋಬರ್ - ಡಿಸೆಂಬರ್ ಅವಧಿ) ಆರಂಭವಾಗಲಿದೆ.

ಆಸ್ಟನ್ ಮಾರ್ಟಿನ್ ವಾಂಟೇಜ್ ಕಾರು ಹೊರಭಾಗದಲ್ಲಿ ನವೀನ ಶೈಲಿಯ ವಿನ್ಯಾಸವನ್ನು (ಡಿಸೈನ್) ಹೊಂದಿದೆ. ಮುಂಭಾಗ (ಫ್ರಂಟ್) ದೊಡ್ಡದಾದ ಗ್ರಿಲ್‌ನ್ನು ಒಳಗೊಂಡಿದೆ. ಆಕರ್ಷಕವಾದ ಹೆಡ್‌ಲೈಟ್‌ಗಳು, ನೂತನವಾಗಿರುವ 3-ಪೀಸ್ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಹಿಂಭಾಗವು (ರೇರ್) ವಿನ್ಯಾಸವು ಉತ್ತಮವಾಗಿದ್ದು, ಅತ್ಯಾಧುನಿಕ ಬಂಪರ್ ಹಾಗೂ ಡಿಫ್ಯೂಸರ್‌ನ್ನು ಪಡೆದಿದೆ.
ನೂತನ ಆಸ್ಟನ್ ಮಾರ್ಟಿನ್ ವಾಂಟೇಜ್ ಕಾರು 4.0 ಲೀಟರ್ ಟ್ವಿನ್ ಟರ್ಬೊ ವಿ8 ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 665 ಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಮತ್ತು 800 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ಹೊಚ್ಚ ಹೊಸ ವಾಂಟೇಜ್ ಕಾರು ಹಿಂದಿನ ಮಾದರಿಗೆ (ಮಾಡೆಲ್) ಹೋಲಿಕೆ ಮಾಡಿದರೆ ಹೆಚ್ಚುವರಿಯಾಗಿ 155 ಹೆಚ್‌ಪಿ ಗರಿಷ್ಠ ಶಕ್ತಿ ಮತ್ತು 115 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 3.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದ್ದು, 325 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು (ಗರಿಷ್ಠ ವೇಗ) ಹೊಂದಿದೆ. ಈ ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಬಹುದು.
ಆಸ್ಟನ್ ಮಾರ್ಟಿನ್ ವಾಂಟೇಜ್ ಕಾರು ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪೇ, 10.25-ಇಂಚಿನ ಡಿಜಿಟಲ್ ಡ್ರೈವರ್‌ಗಳ ಡಿಸ್ಪ್ಲೇ, 1170ಡಬ್ಲ್ಯೂ 15-ಸ್ಪೀಕರ್ ಬೋವರ್ & ವಿಲ್ಕಿನ್ಸ್ ಸೌಂಡ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್, 3ಡಿ ಲೈವ್ ಮ್ಯಾಪಿಂಗ್, ಡುಯಲ್ ಝೋನ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಮಾರ್ಟಿನ್ ವಾಂಟೇಜ್ ಸ್ಪೋರ್ಟ್ಸ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಆಟೋನಮಸ್ ಎಮರ್ಜೆನ್ಸಿ ಬ್ರೇಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಆಟೋಮೆಟಿಕ್ ಪಾರ್ಕಿಂಗ್ ಅಂಶಗಳನ್ನು ಪಡೆದಿರುವ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯವನ್ನು ಹೊಂದಿದೆ. ಈ ಕಾರಿಗೆ ಪೋರ್ಷೆ 911 ಟರ್ಬೊ ಎಸ್ ಮತ್ತು ಫೆರಾರಿ ರೋಮಾಗಳು ಪ್ರಬಲವಾದ ಪ್ರತಿಸ್ಪರ್ಧಿಗಳಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








