ಆಗಸ್ಟ್‌ನಲ್ಲಿ ಬಿಡುಗಡೆಯಾದ ಜನಪ್ರಿಯ ಕಾರುಗಳಿವು.. 7.99 ಲಕ್ಷ ಆರಂಭಿಕ ಬೆಲೆ, 5 ಸೀಟರ್.. ಹತ್ತಾರು ವೈಶಿಷ್ಟ್ಯಗಳು!
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಈ ಆಗಸ್ಟ್ (2024) ಮಹತ್ವದ ತಿಂಗಳಾಗಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಿಟ್ರನ್ ಬಸಾಲ್ಟ್ (Citroen Basalt), ಟಾಟಾ ಕರ್ವ್ ಇವಿ (Tata Curvv EV) ಹಾಗೂ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ (Mahindra Thar Roxx 5-Door) ಎಸ್‌ಯುವಿಗಳು ಬಿಡುಗಡೆಗೊಂಡವು. ಇವುಗಳು ಒಂದಕ್ಕಿಂತ ಒಂದು ಅದ್ಭುತವಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ಸಿಗುತ್ತವೆ. ಇಲ್ಲಿ ಈ ನೂತನ ಕಾರುಗಳ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಸಿಟ್ರನ್ ಬಸಾಲ್ಟ್: ಇದೊಂದು ಕೂಪೆ ಎಸ್‌ಯುವಿಯಾಗಿದ್ದು, ರೂ.7.99 ಲಕ್ಷದಿಂದ ರೂ.13.62 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಬಸಾಲ್ಟ್ ಕಾರು 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.
ಟಾಟಾ ಕರ್ವ್ ಇವಿ: ಇದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿ ಆಗಿದೆ. ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 45 ಕೆಡಬ್ಲ್ಯೂಹೆಚ್ ಮತ್ತು 55 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 502 ರಿಂದ 585 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಈ ಕಾರಿನಲ್ಲಿಯೂ 5 ಜನರು ಸಂಚರಿಸಬಹುದು.

ನೂತನ ಕರ್ವ್ ಇವಿಯು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ಒದಗಿಸಲು 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಮಹೀಂದ್ರಾ ಥಾರ್ ರಾಕ್ಸ್ 5-ಡೋರ್: ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದೆ. ರೂ.12.99 ಲಕ್ಷದಿಂದ ರೂ.18.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.0-ಲೀಟರ್ 4-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಇದರೊಳಗೆ 5 ಮಂದಿ ಓಡಾಟ ನಡೆಸಬಹುದು.

ಈ ಥಾರ್ ರಾಕ್ಸ್ 5-ಡೋರ್ ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ 7 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications