ಮಾರುತಿ ಸ್ವಿಫ್ಟ್, ಡಿಜೈರ್‌ಗೆ ಪ್ರತಿಸ್ಪರ್ಧಿಯಾಗಿ ಬಿಡುಗಡೆಯಾಗಲಿವೆ ಈ ಹೊಸ 'ಟಾಟಾ' ಕಾರುಗಳು: ಅತಿಕಡಿಮೆ ಬೆಲೆ?
ಟಾಟಾ ಮೋಟಾರ್ಸ್ (Tata Motors), ವಿಶ್ವವಿಖ್ಯಾತ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಕಾರುಗಳು ಸುರಕ್ಷತೆಗೆ ಹೆಸರುವಾಸಿಯಾಗಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಟಾಟಾ ಕಂಪನಿಯು ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಡಿಜೈರ್ ಕಾರುಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಹೊಚ್ಚ ಹೊಸ ಫೇಸ್‌ಲಿಫ್ಟ್ ಟಿಯಾಗೊ ಹ್ಯಾಚ್‌ಬ್ಯಾಕ್ ಮತ್ತು ಟಿಗೂರ್ ಸೆಡಾನ್‌ನ್ನು ಮಾರಾಟಕ್ಕೆ ತರಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ. ನೂತನ ಕಾರುಗಳನ್ನು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2025ರಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.
ವಿನ್ಯಾಸ (Design): ನೂತನ (Tiago) ಮತ್ತು ಟಿಗೂರ್ (Tigor) ಫೇಸ್‌ಲಿಫ್ಟ್ ಮಾಡೆಲ್‌ಗಳು ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಹೊಸದಾಗಿರುವ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ರೇಡಿಯೇಟರ್ ಗ್ರಿಲ್, ಬಂಪರ್‌ಗಳು, ಅಲಾಯ್ ವೀಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಳನ್ನು ಪಡೆದಿರಬಹುದು ಎನ್ನಲಾಗಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯನ್ನು ಒಳಗೊಂಡಿರಲಿವೆ ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು (Features): ಇವೆರೆಡು ಕಾರುಗಳು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಟೈಪ್ ಸಿ ಪೋರ್ಟ್‌ಗಳು ಮತ್ತು ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಇದರೊಟ್ಟಿಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿವೆ.
ಕಾರ್ಯಕ್ಷಮತೆ (Performance): ಈ ಕಾರುಗಳ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿರುವುದಿಲ್ಲ ಎನ್ನಲಾಗಿದೆ. ಪ್ರಸ್ತುತ ಖರೀದಿಗೆ ದೊರೆಯುವ ಟಿಯಾಗೊ ಹ್ಯಾಚ್‌ಬ್ಯಾಕ್ ಮತ್ತು ಟಿಗೂರ್ ಸೆಡಾನ್‌ಗಳೆರಡು ಒಂದೇ ರೀತಿಯ ಎಂಜಿನ್ ಆಯ್ಕೆಯನ್ನು ಪಡೆದಿವೆ. ಇವುಗಳ 1.2-ಲೀಟರ್ ಪೆಟ್ರೋಲ್ ಎಂಜಿನ್, 86 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 73.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರುಗಳು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿವೆ. 19.43 ರಿಂದ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಲ್ಲವು.
ಸುರಕ್ಷತಾ ವೈಶಿಷ್ಟ್ಯಗಳು (Safety Features): ನೂತನ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ಮತ್ತು ಟಿಗೂರ್ ಸೆಡಾನ್‌ಗಳು ಪ್ರಯಾಣಿರಿಗೆ ಗರಿಷ್ಠ ರಕ್ಷಣೆ ಒದಗಿಸಬಲ್ಲವು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.
ಇನ್ನು, ಈ ಹೊಸ ಕಾರುಗಳು ಅತಿ ಕಡಿಮೆ ಬೆಲೆಗೆ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಆದರೂ ಈಗಿರುವ ಮಾಡೆಲ್‌ಗಳಿಗೆ ಹೋಲಿಕೆ ಮಾಡಿದರೆ, ಕೊಂಚ ಅಧಿಕ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ, ಟಿಯಾಗೊ ಹ್ಯಾಚ್‌ಬ್ಯಾಕ್ ರೂ.5 ಲಕ್ಷದಿಂದ ರೂ.8.75 ಲಕ್ಷ ಹಾಗೂ ಟಿಗೂರ್ ಸೆಡಾನ್ ರೂ.6 ಲಕ್ಷದಿಂದ ರೂ.9.40 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








