10 ಲಕ್ಷ ರೂಪಾಯಿ.. ಬೆಸ್ಟ್ ಆಟೋಮೆಟಿಕ್ ಕಾರುಗಳಿವು: ಆರಾಮದಾಯಕ ಪ್ರಯಾಣ
ಭಾರತದ ಮಾರುಕಟ್ಟೆಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿರುವ ಕಾರುಗಳಿಗಿಂತ ಆಟೋಮೆಟಿಕ್ ಮಾದರಿಗಳಿಗೆ ಹೆಚ್ಚಿನ ದರವಿದೆ. ಇವುಗಳನ್ನು ರಸ್ತೆಯಲ್ಲಿ ಓಡಿಸುವುದು ಸುಲಭ ಮತ್ತು ಆರಾಮದಾಯಕವಾಗಿರುವುದರಿಂದ ಬಹುತೇಕರು ಇಷ್ಟಪಟ್ಟು ಖರೀದಿಸುತ್ತಾರೆ. ಇಲ್ಲಿ ರೂ.10 ಲಕ್ಷದೊಳಗೆ ದೊರೆಯುವ ಜನಪ್ರಿಯ 'ಆಟೋಮೆಟಿಕ್ ಗೇರ್‌ಬಾಕ್ಸ್' ಎಸ್‌ಯುವಿಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಟಾಟಾ ನೆಕ್ಸಾನ್ (Tata Nexon) ಕಾಂಪ್ಯಾಕ್ಟ್ ಎಸ್‌ಯುವಿ ಬಗ್ಗೆ ಮಾತನಾಡೋಣ. ಇದರ ಸ್ಮಾರ್ಟ್ ಪ್ಲಸ್ (ಪೆಟ್ರೋಲ್) ಆಟೋಮೆಟಿಕ್ ರೂಪಾಂತರ ರೂ.10 ಲಕ್ಷ ಎಕ್ಸ್ ಶೋರೂಂ (ಮುಂಬೈ) ಬೆಲೆಯನ್ನು ಹೊಂದಿದ್ದು, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದೆ. ಇದು 120 ಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದ್ದು, 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಇದು 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಡುಯಲ್ಜೆಟ್ ಪೆಟ್ರೂಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಅನ್ನು ಹೊಂದಿದೆ. 20.1 ರಿಂದ 22.89 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter) ಎಸ್‌ಯುವಿ, ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದ್ದು, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದ್ದು, 19.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಟಾಟಾ ಪಂಚ್ (Tata Punch) ಕಾರು ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 88 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 115 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ 18.8 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿದೆ.
ರೆನಾಲ್ಟ್ ಕಿಗರ್ (Renault Kiger) ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಅನ್ನು ಪಡೆದಿದೆ. ಈ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಹೊಂದಿದೆ. ಈ ಎಸ್‌ಯುವಿ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಅನ್ನು ಪಡೆದಿದೆ. ಜೊತೆಗೆ 19.70 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








