ಮನೆ ಮಂದಿಯೆಲ್ಲ ಆರಾಮದಾಯಕವಾಗಿ ಪ್ರಯಾಣಿಸಬಹುದು.. ಬೆಸ್ಟ್ ಫ್ಯಾಮಿಲಿ ಕಾರುಗಳಿವು.. ಅತ್ಯಂತ ಕಡಿಮೆ ಬೆಲೆ!

ಪ್ರತಿಯೊಬ್ಬರಿಗೂ ಹೊಸ ಕಾರನ್ನು ಖರೀದಿ ಮಾಡಬೇಕು ಎಂಬ ಆಸೆಯಿರುತ್ತದೆ. ಬಹುತೇಕರು ಹೆಚ್ಚಿನ ಜನರು ಪ್ರಯಾಣಿಸಬಹುದಾದ ಕುಟುಂಬದ ಕಾರೊಂದನ್ನು ಕೊಂಡುಕೊಳ್ಳಲು ಹುಡುಕಾಟ ನಡೆಸುತ್ತಿರುತ್ತಾರೆ. ಆದರೆ, ಯಾವ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುತ್ತದೆ.. ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ ಎಂಬ ಗೊಂದಲ ಹಲವರಲ್ಲಿ ಇರುತ್ತದೆ. ನಾವಿಲ್ಲಿ ಅಂತಹದ್ದೇ ಕಾರುಗಳಾದ ಟೊಯೊಟಾ ರೂಮಿಯಾನ್, ಮಾರುತಿ ಸುಜುಕಿ ಇಕೋ ಮತ್ತು ಮಹೀಂದ್ರಾ ಬೊಲೆರೊ ನಿಯೋದ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಬಗ್ಗೆ ಮಾತನಾಡೋಣ. ಇದು ಕನಿಷ್ಠ ರೂ.10.44 ಮತ್ತು ಗರಿಷ್ಠ ರೂ.13.73 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best 3 Family Cars Toyota Rumion Maruti Suzuki Eeco Mahindra Bolero Neo

ನೂತನ ರೂಮಿಯನ್ ಎಂಪಿವಿಯಲ್ಲಿ 7 ಜನರು ಸುಲಭವಾಗಿ ಓಡಾಟ ನಡೆಸಬಹದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಆಪಲ್ ಕಾರ್‌ಪ್ಲೇ, 6 - ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳು ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco) ಜನಪ್ರಿಯ ವ್ಯಾನ್ ಆಗಿದ್ದು, ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.5.32 ಲಕ್ಷದಿಂದ ರೂ.6.58 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best 3 Family Cars Toyota Rumion Maruti Suzuki Eeco Mahindra Bolero Neo

ಹೊಸ ಮಾರುತಿ ಇಕೋ ವ್ಯಾನ್ 5/ 7 ಆಸನದೊಂದಿಗೆ ಲಭ್ಯವಿದೆ. ಸೆಮಿ - ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ ಮತ್ತು 12ವಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಸ್ಪೀಡ್ ಅಲರ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಪಡೆದಿದೆ.

ಕಡೆಯದಾಗಿ ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo) ಎಂಪಿವಿ ಕುರಿತಂತೆ ಹೇಳುವುದಾದರೆ, ಇದು ರೂ.9.95 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.29 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 3 Family Cars Toyota Rumion Maruti Suzuki Eeco Mahindra Bolero Neo

ನೂತನ ಬೊಲೆರೊ ನಿಯೋದಲ್ಲಿ 7 - ಜನರು ಸುಲಭವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ - ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ & ಕೀಲೆಸ್ ಎಂಟ್ರಿ ಒಳಗೊಂಡನಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಅಸಿಸ್ಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, December 26, 2024, 23:26 [IST]
English summary
Best 3 family cars toyota rumion maruti suzuki eeco mahindra bolero neo
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+