ಇವೇ ನೋಡಿ.. 2024ರ ಅತಿ ಸುರಕ್ಷಿತ ಕಾರುಗಳು.. ಅಗ್ಗದ ದರ, 5 ಸೀಟರ್.. 6 ಏರ್‌ಬ್ಯಾಗ್‌ಗಳು!
ಹೊಸ ಕಾರು ಖರೀದಿಸುವವರೂ ಅದರ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಆದರೆ, ಯಾವ ಕಾರು ಹೆಚ್ಚು ಏರ್‌ಬ್ಯಾಗ್‌ಗಳು ಸೇರಿದಂತೆ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತವೆ ಎಂಬುದರ ಬಗ್ಗೆ ಹಲವರಿಗೆ ತಿಳಿದಿರುವುದಿಲ್ಲ. ನೀವು ಉತ್ತಮ ಸೇಫ್ಟಿ ಕಾರನ್ನು ಮನೆಗೆ ತರಲು ಆಲೋಚಿಸಿದ್ದರೆ.. ಮಾರುತಿ ಸುಜುಕಿ ಡಿಜೈರ್ (Maruti Suzuki Dzire), ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಹಾಗೂ ಎಕ್ಸ್‌ಯುವಿ 3ಎಕ್ಸ್ಒ (Xuv 3xo) ಕಾರುಗಳು ಸರಿಹೊಂದುತ್ತವೆ.
ಮೊದಲಿಗೆ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಬಗ್ಗೆ ಮಾತನಾಡೋಣ. ಈ ಕಾರನ್ನು ಗ್ಲೋಬಲ್ ಎನ್‌ಸಿಎಪಿ (Global NCAP) ಅತ್ಯಂತ ಸುರಕ್ಷಿತ ಕಾರು ಎಂದು ನಿರ್ಣಯಿಸಿದೆ. ಇದು ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 31.24 ಅಂಕಗಳನ್ನು ಗಳಿಸುವುದರೊಂದಿಗೆ 5-ಸ್ಟಾರ್ ರೇಟಿಂಗ್ ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕಗಳನ್ನು ಪಡೆದು 4-ಸ್ಟಾರ್ ರೇಟಿಂಗ್‌ನ್ನು ಗಳಿಸಿದೆ.

ಈ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ನ್ನು ಹೊಂದಿದೆ. ನೂತನ ಡಿಜೈರ್ ಕಾರು, ರೂ.6.79 ಲಕ್ಷದಿಂದ ರೂ.10.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಕುರಿತಂತೆ ಹೇಳುವುದಾದರೆ, ಈ ಎಸ್‌ಯುವಿ ಭಾರತ್ ಎನ್‌ಸಿಎಪಿ ನಡೆಸಿದ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.09 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.

ಈ ಥಾರ್ ರಾಕ್ಸ್ ಎಸ್‌ಯುವಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್‌ಗಳು ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ. ಹೊಸ ಥಾರ್ ರಾಕ್ಸ್ ರೂ.12.99 ಲಕ್ಷದಿಂದ ರೂ.22.49 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ.
ಕಡೆಯದಾಗಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಗ್ಗೆ ಮಾತನಾಡುವುದಾದರೆ, ಈ ಎಸ್‌ಯುವಿ ಕೂಡ ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.36 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43 ಅಂಕಗಳನ್ನು ಗಳಿಸಿದೆ.

ಈ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ನೂತನ ಎಕ್ಸ್‌ಯುವಿ 3ಎಕ್ಸ್ಒ ಕಾರು, ರೂ.7.79 ಲಕ್ಷದಿಂದ ರೂ.15.49 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








